ಹಿಂಸಾಚಾರದ ಬಗ್ಗೆ ಮಾತು: ನಟಿ ಕಂಗನಾ ಟ್ವಿಟರ್‌ ಖಾತೆ ಸ್ಥಗಿತ!

By Suvarna NewsFirst Published May 4, 2021, 12:48 PM IST
Highlights

ಪಶ್ಚಿಮ ಬಂಗಾಳ ಫಲಿತಾಂಶದ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ| ಹಿಂಸಾಚಾರದ ಬಗ್ಗೆ ವಿಡಿಯೋ ಪೋಸ್ಟ್ ಮಾಡಿದ ನಟಿ ಕಂಗನಾ| ವಿಡಿಯೋ ಪೋಸ್ಟ್‌ ಮಾಡಿದ ಬೆನ್ನಲ್ಲೇ ನಟಿ ಅಕೌಂಟ್‌ ನಿಷ್ಕ್ರಿಯ

ಮುಂಬೈ(ಮೇ.04): ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ಸಕ್ರಿಯರಾಗಿರುವ ಬಾಲಿವುಡ್‌ ಕ್ವೀನ್ ಕಂಗನಾ ರಣಾವತ್ ಟ್ವಿಟರ್‌ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರದಂದು ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಇದರ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿತ್ತು. ಹೀಗಿರುವಾಗ ನಟಿ ಕಂಗನಾ ಸರಣಿ ಟ್ವೀಟ್ ಮಾಡಿದ್ದರು ಎಂಬುವುದು ಉಲ್ಲೇಖನೀಯ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಬಹುಮತ ಗಳಿಸಿತ್ತು. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿತ್ತು. ಈ ವಿಚಾರವಾಗಿ ಟ್ವೀಟ್ ಮಾಡಿದ್ದ ಕಂಗನಾ ರಣಾವತ್ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಟ್ವೀಟ್ ಮಾಡಿದ್ದರು. ಇದು ಭಾರೀ ವಿವಾದ ಸೃಷ್ಟಿಸಿತ್ತು.

ಕೊರೋನಾ ವಿಚಾರವಾಗಿ ಸರ್ಕಾರವನ್ನು ಟೀಕಿಸುವವರ ವಿರುದ್ಧ ಕಂಗನಾ ಕಿಡಿ

ಅಲ್ಲದೇ ಕಂಗನಾ ಖಾತೆ ನಿಷ್ಕ್ರಿಯಗೊಳಿಸುವ ಕೆಲ ನಿಮಿಷದ ಹಿಂದಷ್ಟೇ ನಟಿ ಭಾವನಾತ್ಮಕ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದರು. ಈ ಪೋಸ್ಟ್‌ನಲ್ಲಿ ಪಶ್ಚಿಮ ಬಂಗಾಳ ಹಿಂದಸಾಚಾರದ ಬಗ್ಗೆ ಮಾತನಾಡಿದ್ದರು. ಈ ವಿಡಿಯೋದಲ್ಲಿ ಪಶ್ಚಿಮ ಬಂಗಾಳದಲ್ಲಿ ಜನರ ಹತ್ಯೆ ನಡೆಯುತ್ತಿದೆ, ಅತ್ಯಾಚಾರ ನಡೆಯುತ್ತಿದೆ, ಮನೆಗಳನ್ನು ಸುಡಲಾಗುತ್ತಿದೆ ಈ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಸದ್ಯ ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಟ್ವಿಟರ್ ನಿಯಮ ಉಲ್ಲಂಘಿಸಿದ ಆರೋಪದಡಿ ಅವರ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ.  

click me!