ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್‌ಗೆ ಕೊರೋನಾ; ಆಸ್ಪತ್ರೆ ದಾಖಲು!

Published : Jul 11, 2020, 11:29 PM ISTUpdated : Jul 11, 2020, 11:39 PM IST
ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್‌ಗೆ ಕೊರೋನಾ; ಆಸ್ಪತ್ರೆ ದಾಖಲು!

ಸಾರಾಂಶ

ಕೊರೋನಾ ವೈರಸ್ ಯಾರನ್ನೂ ಬಿಡುತ್ತಿಲ್ಲ. ಅದರಲ್ಲೂ ಮುಂಬೈ ನಗರದಲ್ಲಿ ಗಲ್ಲಿ ಗಲ್ಲಿಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಳ್ಳುತ್ತಿದೆ. ಇದೀಗ ಬಾಲಿವುಡ್ ಹಿರಿಯ ನಟ ಅಮಿತಾ ಬಚ್ಚನ್‌ಗೆ ಕೊರೋನಾ ವೈರಸ್ ತಗುಲಿದೆ. 

ಮುಂಬೈ(ಜು.11): ದೇಶದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಅತೀಯಾಗಿದೆ. ಮುಂಬೈ ಮಹಾನಗರದಲ್ಲಿ ಕೊರೋನಾ ನಿಯಂತ್ರಣಕ್ಕೆ ಮೀರಿ ಹರಡುತ್ತಿದೆ. ಇದೀಗ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್‌ಗೆ ಕೊರೋನಾ ವೈರಸ್ ದೃಢಪಟ್ಟಿದೆ. 

 

ಅಮಿತಾಬ್ ಬಚ್ಚನ್ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಷ್ಟೇ ಅಲ್ಲ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಬಚ್ಚನ್ ಕುಟುಂಬಸ್ಥರು, ಸಿಬ್ಬಂದಿಗಳು, ಸಹಾಯಕರಿಗೆ ಇದೀಗ ಕೊರೋನಾ ಪರೀಕ್ಷೆ ಮಾಡಿಸಲಾಗುತ್ತಿದೆ. ಇಷ್ಟೇ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. 

ಪರದೆ ಮೇಲೆ ಅಮಿತಾಬ್‌ ರೇಖಾಳ ರೊಮ್ಯಾನ್ಸ್‌ ನೋಡಿ ಅತ್ತಿದ್ದರಂತೆ ಜಯಾ ಬಚ್ಚನ್‌

ಈ ಕುರಿತು ಅಮಿತಾಬ್ ಬಚ್ಚನ್ ಟ್ವೀಟ್ ಮೂಲಕ ಕೊರೋನಾ ವೈರಸ್ ತಗುಲಿರುವುದನ್ನು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಕಳೆದ 10 ದಿನಗಳಲ್ಲಿ ತನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೊರೋನಾ ವೈರಸ್ ಟೆಸ್ಟ್ ಪರೀಕ್ಷೆ ನಡೆಸುವಂತೆ ಸೀನಿಯರ್ ಬಚ್ಚನ್ ಮನವಿ ಮಾಡಿದ್ದಾರೆ.

ಅಮಿತಾಬ್ ಬಚ್ಚನ್ ಟ್ವೀಟ್ ಮೂಲಕ ಕೊರೋನಾ ತಗುಲಿರುವುದನ್ನು ಖಚಿತ ಪಡಿಸುತ್ತಿದ್ದಂತೆ ಬಾಲಿವುಡ್ ಸೇರಿದಂತೆ ಭಾರತೀಯ ಚಿತ್ರರಂಗ ಶೀಘ್ರ ಚೇರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?