Vikrant Rona ಸಿನಿಮಾದಿಂದ ಹೊರಬಿತ್ತು ಬಿಗ್ ಅಪ್‌ಡೇಟ್; ಕಿಚ್ಚನ ಸಿನಿಮಾಗೆ ಸಲ್ಮಾನ್ ಸಾಥ್

Published : May 16, 2022, 05:26 PM IST
Vikrant Rona ಸಿನಿಮಾದಿಂದ ಹೊರಬಿತ್ತು ಬಿಗ್ ಅಪ್‌ಡೇಟ್; ಕಿಚ್ಚನ ಸಿನಿಮಾಗೆ ಸಲ್ಮಾನ್ ಸಾಥ್

ಸಾರಾಂಶ

ಮೇ 16ರಂದು ವಿಕ್ರಾಂತ್ ರೋಣ ಚಿತ್ರದಿಂದ ಬಿಗ್ ಅಪ್ ಡೇಟ್ ನೀಡುವುದಾಗಿ ಕಿಚ್ಚ ಆಂಡ್ ಟೀಂ ಘೋಷಣೆ ಮಾಡಿದ್ದರು. ವಿಕ್ರಾಂತ್ ರೋಣನಿಂದ ಬರುವ ಅಪ್ ಡೇಟ್ ಏನಾಗಿರಲಿದೆ ಎಂದು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದರು. ಇದೀಗ ಕುತೂಹಲಕ್ಕೆ ತೆರೆಬಿದ್ದಿದೆ. ಚಿತ್ರಕ್ಕೆ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ ಎಂದು ಚಿತ್ರತಂಡ ಬಹಿರಂಗ ಪಡಿಸಿದೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ಸದ್ಯ ವಿಕ್ರಾಂತ್ ರೋಣ(Vikrant Rona) ಸಿನಿಮಾ ಬಿಡುಗಡೆ ತಯಾರಿಯಲ್ಲಿದ್ದಾರೆ. ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ವಿಕ್ರಾಂತ್ ರೋಣನನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಮೇ 16ರಂದು ಸಿನಿಮಾದ ಬಗ್ಗೆ ಬಿಗ್ ಅಪ್ ಡೇಟ್ ನೀಡುವುದಾಗಿ ಕಿಚ್ಚ ಆಂಡ್ ಟೀಂ ಘೋಷಣೆ ಮಾಡಿದ್ದರು. ವಿಕ್ರಾಂತ್ ರೋಣನಿಂದ ಬರುವ ಅಪ್ ಡೇಟ್ ಏನಾಗಿರಲಿದೆ ಎಂದು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದರು. ಇದೀಗ ಕುತೂಹಲಕ್ಕೆ ತೆರೆಬಿದ್ದಿದೆ.

ಅಂದಹಾಗೆ ವಿಕ್ರಾಂತ್ ರೋಣ ಸಿನಿಮಾಗೆ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ. ವಿಕ್ರಾಂತ್ ರೋಣ ಹಿಂದಿ ವರ್ಷನ್ ಅನ್ನು ಸಲ್ಮಾನ್ ಖಾನ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಬಗ್ಗೆ ಸಿನಿಮಾತಂಡ ಬಹಿರಂಗ ಪಡಿಸಿದೆ. ಸಲ್ಮಾನ್ ಖಾನ್ ಕೂಡ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. 'ಕಿಚ್ಚ ಸುದೀಪ್ ಅವರ ವಿಕ್ರಾಂತ್ ರೋಣ 3ಡಿ ಅನುಭವವನ್ನು ಹಿಂದಿಯಲ್ಲಿ ಪ್ರೆಸೆಂಟ್ ಮಾಡುತ್ತಿರುವುದು ಸಂತೋಷವಾಗುತ್ತಿದೆ' ಎಂದು ಹೇಳಿದ್ದಾರೆ. ಈ ಮೊದಲು ಅಂದರೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಅನ್ನು ಸಲ್ಮಾನ್ ಖಾನ್ ರಿಲೀಸ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಬಿಡುಗಡೆಗೂ ಮೊದಲೇ ಭರ್ಜರಿ ಬ್ಯುಸಿನೆಸ್

ಹೌದು, ಸಿನಿಮಾ ಬಿಡುಗಡೆಗೂ ಮೊದಲೇ ವಿಕ್ರಾಂತ್ ರೋಣ ಭರ್ಜರಿ ಕಮಾಯಿ ಮಾಡಲು ಶುರು ಮಾಡಿದೆ. ಈಗಾಗಲೇ ವಿಕ್ರಾಂತ್ ರೋಣ ಸಿನಿಮಾದ ಓವರ್‌ಸೀಸ್ ರೈಟ್ಸ್(Overseas Rights Sold) ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಒನ್ ಟ್ವೆಂಟಿ ಏಟ್ ಮಧ್ಯಮವು ಸಾಗರೋತ್ತರ ಮಾರುಕಟ್ಟೆಯ ರೈಟ್ಸ್ ಖರೀದಿ ಮಾಡಿದೆ. ಭಾರಿ ಮೊತ್ತಕ್ಕೆ ಸಿನಿಮಾದ ರೈಟ್ಸ್ ಸೇಲ್ ಆಗಿದ್ದು ಸಿನಿಮಾತಂಡ ಫುಲ್ ಖುಷ್ ಆಗಿದೆ. ಮೂಲಗಳ ಪ್ರಕಾರ ವಿಕ್ರಾಂತ್ ರೋಣ ಬರೋಬ್ಬರಿ 10 ಕೋಟಿ ಮೊತ್ತಕ್ಕೆ ಸಾರಗೋತ್ತರ ರೈಟ್ಸ್ ಸೇಲ್ ಆಗಿದೆ ಎನ್ನಲಾಗಿದೆ.

KGF 2 ಆಯ್ತು ಈಗ ವಿಕ್ರಾಂತ್ ರೋಣ; ಬಾಕ್ಸ್ ಆಫೀಸ್ ಆಳೋಕೆ ಸಜ್ಜಾದ ಸುದೀಪ್

ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾ ಜುಲೈ 28ಕ್ಕೆ 3ಡಿಯಲ್ಲಿ ವಿಶ್ವದಾದ್ಯಂತ ತೆರೆಗೆ ಬರುತ್ತಿದೆ. ವಿಕ್ರಾಂತ್ ರೋಣ ಚಿತ್ರಕ್ಕೆ ಅನೂಪ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದಾರೆ. ಕಿಚ್ಚ ಸುದೀಪ್ ನಾಯಕನಾಗಿ ಮಿಂಚಿದ್ರೆ, ನಿರೂಪ್ ಭಂಡಾರಿ, ನೀತಾ ಅಶೋಕ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈಗಾಗಲೇ ಸಿನಿಮಾತಂಡ ಪ್ರಚಾರಕಾರ್ಯಕ್ಕೆ ಸಿದ್ಧತೆ ನಡೆಸುತ್ತಿದೆ. ದೇಶದಾದ್ಯಂತ ಪ್ರಚಾರ ಕಾರ್ಯ ನಡೆಸಲು ಭರ್ಜರಿ ಪ್ಲಾನ್ ಮಾಡಿದೆ. ಅಂದಹಾಗೆ ವಿಕ್ರಾಂತ್ ರೋಣ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.


Sudeep 'ವಿಕ್ರಾಂತ್ ರೋಣ' ಓವರ್‌ಸೀಸ್ ರೈಟ್ಸ್ ಭಾರಿ ಮೊತ್ತಕ್ಕೆ ಸೇಲ್

 

ಚಿತ್ರದ ಮತ್ತೊಂದು ವಿಶೇಷ ಎಂದರೆ ಬಾಲಿವುಡ್ ಸ್ಟಾರ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಐಟಂ ಹಾಡಿಗೆ ಹೆಜ್ಜೆ ಹಾಕಿರುವ ಜಾಕ್ವೆಲಿನ್ ಲುಕ್ ಈಗಾಗಲೇ ವೈರಲ್ ಆಗಿದೆ. ಕಿಚ್ಚ ಮತ್ತು ಜಾಕ್ವೆಲಿನ್ ಕಾಂಬಿನೇಷನ್ ಹಾಡು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಇನ್ನು ಚಿತ್ರಕ್ಕೆ ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

Alia Bhatt New Home Photos: ಆಲಿಯಾ ಭಟ್‌, ರಣಬೀರ್‌ ಕಪೂರ್‌ 350 ಕೋಟಿ ರೂ ಮನೆಯನ್ನು ಪದಗಳಲ್ಲಿ ವರ್ಣಿಸೋಕಾಗಲ್ಲ
ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!