KGF 2; ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪುನೀತ್ ಮನೆಗೆ ಭೇಟಿ ನೀಡಿದ ಸಂಜಯ್ ದತ್

Published : Mar 27, 2022, 04:11 PM IST
KGF 2; ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪುನೀತ್ ಮನೆಗೆ ಭೇಟಿ ನೀಡಿದ ಸಂಜಯ್ ದತ್

ಸಾರಾಂಶ

ಕೆಜಿಎಫ್-2 ಟ್ರೈಲರ್ ರಿಲೀಸ್ ಈವೆಂಟ್ ಗಾಗಿ ಬೆಂಗಳೂರಿಗೆ ಬಂದ ಬಾಲಿವುಡ್ ನಟ ಸಂಜಯ್ ದತ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿದ್ದಾರೆ. ರಾಜ್ ಕುಟುಂಬದ ಜೊತೆ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. 

ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಕೆಜಿಎಫ್-2 ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಾರ್ಚ್ 27 ಸಂಜೆ 6 ಗಂಟೆಗೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೈಲರ್ ಬಿಡುಗಡೆ ಸಮಾರಂಭ ನಡೆಯುತ್ತಿದೆ. ದೇಶ-ವಿದೇಶಗಳಲ್ಲಿ ಪ್ರೇಕ್ಷಕರು ಭಾರಿ ಕುತೂಹಲದಿಂದ ಕಾಯುತ್ತಿರುವ ಸಿನಿಮಾದ ಟ್ರೈಲರ್ ಇನ್ನೇನು ಕೆಲವೇ ಕ್ಷಣಗಳಲ್ಲಿ ಅಭಿಮಾನಿಗಳ ಮುಂದೆ ಇರಲಿದೆ. ಈ ಸಮಾರಂಭವನ್ನು ಚಿತ್ರತಂಡ ಅದ್ದೂರಿಯಾಗಿ ಮಾಡುತ್ತಿದೆ.

ಈಗಾಗಲೇ ಎಲ್ಲಾ ತಯಾರಿ ನಡೆಸಿದ್ದು, ಇಡೀ ಕೆಜಿಎಫ್-2 ತಂಡ ಬೆಂಗಳೂರಿಗೆ ಆಗಮಿಸುತ್ತಿದೆ. ಬಾಲಿವುಡ್ ನಟ ಸಂಜಯ್ ದತ್, ರವೀನಾ ಟಂಡನ್ ಕೂಡ ಬೆಂಗಳೂರಿನಲ್ಲಿ ನಡೆಯುತ್ತಿರುವ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗುತ್ತಿದ್ದಾರೆ. ಅಂದಹಾಗ ಈಗಾಗಲೇ ಮುನ್ನಾಭಾಯ್ ಸಂಜಯ್ ದತ್ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿದ್ದಾರೆ.

ಪವರ್ ಸ್ಟಾರ್ ಕಳೆದುಕೊಂಡು ಇಡೀ ರಾಜ್ ಕುಟುಂಬ ದುಃಖದಲ್ಲಿದೆ. ನೋವಿನಲ್ಲಿರುವ ರಾಜ್ ಕುಟುಂಬವನ್ನು ಭೇಟಿ ಮಾಡಿ ಸಂಜಯ್ ದತ್ ಸಾಂತ್ವನ ಹೇಳಿದ್ದಾರೆ. ಸದಾಶಿವ ನಗರದಲ್ಲಿರುವ ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿದ ಸಂಜಯ್ ದತ್, ರಾಜ್ ಕುಟುಂಬದವರ ಜೊತೆ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ರಾಘವೇಂದ್ರ ರಾಜ್ ಕುಮಾರ್, ಮಕ್ಕಳಾದ ವಿನಯ್ ಮತ್ತು ಯುವ ರಾಜ್ ಕುಮಾರ್ ಸಹ ಸಂಜಯ್ ಸೇರಿದಂತೆ ರಾಜ್ ಕುಟುಂಬ ಸಂಜಯ್ ದತ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಪಾಕ್ ಮಾಜಿ ಅಧ್ಯಕ್ಷರನ್ನು ಭೇಟಿಯಾದ 'KGF-2' ನಟ ಸಂಜಯ್ ದತ್; ಫೋಟೋ ವೈರಲ್

ಪವರ್ ಸ್ಟಾರ್ ಅಗಲಿಕೆಯ ಬಳಿಕ ಅನೇಕ ಕಲಾವಿದರು ಅಪ್ಪು ಮನೆಗೆ ಭೇಟಿ ನೀಡಿ ಕುಟುಂಬದವನ್ನು ಮಾತನಾಡಿಸಿ ಧೈರ್ಯದ ಮಾತುಗಳನ್ನು ಆಡುತ್ತಿದ್ದಾರೆ. ದಕ್ಷಿಣ ಭಾರತದ ಅನೇಕ ಸ್ಟಾರ್ ಕಲಾವಿದರು ಪವರ್ ಸ್ಟಾರ್ ಮನೆಗೆ ಭೇಟಿ ನೀಡಿದ್ದರು. ಇದೀಗ ಬಾಲಿವುಡ್ ಸ್ಟಾರ್ ಸಂಜಯ್ ದತ್ ಕೂಡ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕೆಜಿಎಫ್-2 ಕಾರ್ಯಕ್ರಮಕ್ಕೆ ಬಂದ ದತ್ ರಾಜ್ ಮನೆಗೆ ಭೇಟಿ ನೀಡಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಯಶ್ v/s ವಿಜಯ್; ಬಾಕ್ಸ್ ಆಫೀಸ್ ನಲ್ಲಿ ಮೆಗಾ ವಾರ್

ಪವರ್ ಸ್ಟಾರ್ ಮನೆಯಲ್ಲಿ ರಾಜು ಕುಟುಂಬದ ಜೊತೆ ಸಂಜಯ್ ದತ್ ಇರುವ ಫೋಟೋ ವೈರಲ್ ಆಗುತ್ತಿದೆ. ಸಂಜಯ್ ದತ್ ಬಳಿಕ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕೆಜಿಎಫ್-2 ಟ್ರೈಲರ್ ಸುಮಾರು 5 ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಹುನಿರೀಕ್ಷೆಯ ಟ್ರೈಲರ್ ಬಿಡುಗಡೆ ಮಾಡುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಗಂಡನ ಜಾಕೆಟ್ ಕದ್ದ ದೀಪಿಕಾ ಪಡುಕೋಣೆ.. ಅಂಥ ಪರಿಸ್ಥಿತಿಗೆ ಬಂದು ತಲುಪಿದ್ರಾ ಬಾಲಿವುಡ್ ಸ್ಟಾರ್ ನಟಿ?
ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!