
ಬಾಲಿವುಡ್ ಹೆಸರಾಂತ ನಟ ಅನುಪಮ್ ಖೇರ್ ಭಾನುವಾರ ತಮ್ಮ ಟ್ಟಿಟರ್ ಖಾತೆಯಲ್ಲಿ ತಮ್ಮ ತಾಯಿ ದುಲಾರಿ, ಸಹೋದರ ರಾಜು, ನಾದಿನಿ ರೀಮಾ ಮತ್ತು ಅವರ ಮಗಳು ವೃಂದಾ ಅವರಿಗೆ ಕೊರೋನಾ ಪಾಟಿಸಿವ್ ಇರುವುದಾಗಿ ಟ್ಟೀಟ್ ಮಾಡಿದ್ದಾರೆ.
ನಟ ಅನುಪಮ್ ಖೇರ್ ಕೊರೋನಾ ಪರೀಕ್ಷೆ ಮಾಡಿಸಿದ್ದು ವರದಿ ನೆಗೆಟಿವ್ ಬಂದಿದೆ. ಕುಟುಂಬಸ್ಥರಿಗೆ ಹೆಚ್ಚಿನ ಲಕ್ಷಣಗಳು ಕಂಡು ಬಂದಿಲ್ಲ ಆದರೂ ಚಿಕಿತ್ಸೆ ಪಡೆಯುತ್ತಿದ್ದಾರೆ. 'ನಿಮ್ಮಗೆಲ್ಲಾ ಒಂದು ವಿಚಾರ ತಿಳಿಸಬೇಕು. ತಾಯಿ ಮತ್ತು ಸಹೋದರನ ಕುಟುಂಬದವರು ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಷ್ಟೇ ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡರೂ ಪಾಸಿಟಿವ್ ಬಂದಿದೆ. ನೀವೆಲ್ಲರೂ ಸುರಕ್ಷಿತವಾಗಿರಿ. ಈ ವಿಚಾರವನ್ನು ಮುಂಬೈ ಮಹಾನಗರ ಪಾಲಿಕೆ ಅವರಿಗೆ ತಿಳಿಸಲಾಗಿದೆ' ಎಂದು ಟ್ಟೀಟ್ ಮಾಡಿದ್ದಾರೆ.
ಅನುಪಮ್ ತಾಯಿ ದುಲಾರಿ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಆಹಾರ ಸೇವಿಸಲು ಕಷ್ಟ ಪಡುತ್ತಿದ್ದಾರೆ. ರಕ್ತ ಪರೀಕ್ಷೆ ಮತ್ತು ಸಿಟಿ ಸ್ಕ್ಯಾನ್ ಮಾಡಿದ ನಂತರ ಕೋವಿಡ್-19 ಲಕ್ಷಣಗಳು ಇರುವುದಾಗಿ ತಿಳಿದು ಬಂದಿದೆ. ಅನುಪಮ್ ಖೇರ್ ಬಾಂಬೆ ವೈದ್ಯರಿಗೆ ಮತ್ತು ಮಹಾನಗರ ಪಾಲಿಕೆ ನೀಡಿದ ಬೆಂಬಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.