
ಬಾಲಿವುಡ್ ದಾದಾ, ಸ್ಯಾಂಡಲ್‌ವುಡ್ ಅಧೀರ ಸಂಜಯ್ ದತ್ ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಅವರಿಗೆ ತಮ್ಮ ಮೊದಲ ಕೀಮೋ ಥೆರಪಿ ಚಿಕಿತ್ಸೆ ಮುಕ್ತಾಯವಾಗಿದೆ. ಎರಡನೇ ಹಂತದ ಕೀಮೋ ಸೆ. 8 ಅಥವಾ 9 ರಂದು ನೀಡುವ ಸಾಧ್ಯತೆ ಇದೆ. ಇನ್ನೆಷ್ಟು ಥೆರಪಿಗಳು ನಡೆಯಲಿದೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ.
ಕೆಲವು ದಿನಗಳ ಹಿಂದಷ್ಟೇ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾದಾಗ, ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಬಳಿಕ ಚಿಕಿತ್ಸೆಗೆ ಅಮೆರಿಕಕ್ಕೆ ಹೋಗಲು ನಿರ್ಧಾರ ಮಾಡಲಾಗಿತ್ತಾದರೂ, ಕೊರೋನಾದಿಂದಾಗಿ ಸಾಧ್ಯವಾಗಿರಲಿಲ್ಲ. ಸದ್ಯ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಣಬೀರ್ ಕಪೂರ್ ಅಭಿನಯದ 'ಶಂಶೇರ' ಸಿನಿಮಾದಲ್ಲಿ ಸಂಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಸದ್ಯ ಚಿತ್ರೀಕರಣಕ್ಕೆ ಮರುಳಿದ್ದಾರೆ ಎನ್ನಲಾಗಿದೆ. ಎರಡು ದಿನದಲ್ಲಿ ಸಾಧ್ಯವಾದಷ್ಟು ಚಿತ್ರೀಕರಣ ಮುಗಿಸಿ ಮುಂದಿನ ಹಂತದ ಚಿಕಿತ್ಸೆಗೆ ತೆರಳಿದ್ದಾರಂತೆ.
ಸಂಜಯ್ ಈಗಾಗಲೇ 4ನೇ ಹಂತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಕಾರಣ ಅಭಿಮಾನಿಗಳು ಚಿತ್ರೀಕರಣದಲ್ಲಿ ಪಾಲ್ಗೊಳ್ಳದೇ ವಿಶ್ರಾಂತಿ ಪಡೆಯಲು ನೆಚ್ಚಿನ ನಟನ ಬಳಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೂ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವರು ಕೈಗೊಂಡ ನಿರ್ಧಾರದಿಂದ ಫ್ಯಾನ್ಸ್ ಫಿದಾ ಆಗಿದ್ದಾರೆ.
ಕನ್ನಡದ ಕೆಜಿಎಫ್-2ರಲ್ಲಿಯೂ ಸಂಜಯ್ ನಟಿಸುತ್ತಿದ್ದು, ಇನ್ನೂ ಕೆಲವು ದೃಶ್ಯಗಳ ಚಿತ್ರೀಕರಣ ಬಾಕಿ ಇದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.