ಶ್ರೀದೇವಿ ಪುತ್ರಿ ಜಾಹ್ನವಿ ರಾಜಕೀಯ ಧುರೀಣನ ಸೊಸೆಯಾಗೋದು ಪಕ್ಕನಾ? ಅಪ್ಪ ಬೋನಿ ಕಪೂರ್ ಹೇಳಿದ್ದೇನು?
ಕೆಲ ದಿನಗಳ ಹಿಂದೆ ಕದ್ದುಮುಚ್ಚಿ ನಟಿ ಜಾಹ್ನವಿ ಕಪೂರ್ ಮತ್ತು ಅವರ ಬಾಯ್ಫ್ರೆಂಡ್ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಮೊಮ್ಮಗ, ಶಿಖರ್ ಅವರ ಮದ್ವೆಯಾಗೋಯ್ತು ಎಂದು ಭಾರಿ ಸುದ್ದಿಯಾಗಿತ್ತು. ಏಕೆಂದರೆ, ಕೆಲ ದಿನಗಳ ಹಿಂದೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಈ ಜೋಡಿ ಭೇಟಿ ನೀಡಿದ್ದ ಜೋಡಿ ಅಲ್ಲಿ ಒಟ್ಟಿಗೆ ಕುಳಿತು ದಂಪತಿಯಂತೆ ವಿಶೇಷ ಪೂಜೆ ಸಲ್ಲಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಇಬ್ಬರು ಒಟ್ಟಿಗೆ ಪೂಜೆ ಸಲ್ಲಿಸಿದ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದವು. ಮದುವೆ ಆಗೋಯ್ತಾ ಅಥವಾ ಶೀಘ್ರವೇ ಮದ್ವೆ ಆಗಲಿದ್ದಾರೆ ಎನ್ನುವ ಚರ್ಚೆ ಬಿ-ಟೌನ್ನಲ್ಲಿ ಶುರುವಾಗಿತ್ತು. ಈ ಬಗ್ಗೆ ನಟಿಯಾಗಲೀ ಶಿಖರ್ ಆಗಲೀ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ.
ಇದೀಗ ಈ ಸಂಬಂಧ ನಿಜ ಎಂಬುದಾಗಿ ಪರೋಕ್ಷವಾಗಿಯೇ ಹೇಳಿದ್ದಾರೆ ಜಾಹ್ನವಿ ಕಪೂರ್ ತಂದೆ, ಶ್ರೀದೇವಿ ಪತಿ ಬೋನಿ ಕಪೋರ್. ಜೂಮ್ಗೆ ನೀಡಿದ ಸಂದರ್ಶನದಲ್ಲಿ ಅವರು, ‘ನನಗೆ ಶಿಖರ್ ಅಂದರೆ ಪ್ರೀತಿ. ಜಾಹ್ನವಿ ಶಿಖರ್ ಜೊತೆ ಕಾಣಿಸಿಕೊಳ್ಳುವುದಕ್ಕಿಂತಲೂ ಅಂದರೆ ಓಡಾಡ ಶುರು ಮಾಡುವುದಕ್ಕಿಂತಲೂ ಮೊದಲು ನನಗೆ ಅವನ ಜೊತೆ ಒಳ್ಳೆಯ ಫ್ರೆಂಡ್ಶಿಪ್ ಇತ್ತು. ಅವನು ಎಂದಿಗೂ ನನ್ನ ಮಗಳನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ ಎಂದು ನನಗೆ ಅನಿಸಿತು. ಯಾವುದಾದರೂ ಸಹಾಯ ಬೇಕಾದರೆ ಆತ ಯಾವಾಗಲೂ ಓಡಿ ಬರುತ್ತಾನೆ. ಅವನು ನನ್ನೊಂದಿಗೆ, ಜಾಹ್ನವಿ ಮತ್ತು ಅರ್ಜುನ್ ಅವರೊಂದಿಗೆ ಒಳ್ಳೆಯ ಸ್ನೇಹ ಹೊಂದಿದ್ದಾರೆ. ಹಾಗಾಗಿ ಅವರಂತಹ ವ್ಯಕ್ತಿ ನಮ್ಮ ಜೀವನದಲ್ಲಿ ಸಿಕ್ಕಿರುವುದು ನಮ್ಮ ಅದೃಷ್ಟ ಎಂದಿದ್ದಾರೆ. ಈ ಮೂಲಕ ಮಗಳು ಮತ್ತು ಶಿಖರ್ ಸಂಬಂಧವನ್ನು ಒಪ್ಪಿಕೊಂಡಿದ್ದಾರೆ.
ಸನ್ನಿ ಲಿಯೋನ್ ಮೇಲೆರಗಿದ ಹಾವು: ಜೀವ ಭಯದಿಂದ ಹಾರಿದ ನಟಿ- ವಿಡಿಯೋ ವೈರಲ್
ಅಂದಹಾಗೆ, ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಹೆಸರು ಹಲವಾರು ಮಂದಿಯ ಜೊತೆ ಥಳಕು ಹಾಕಿಕೊಂಡಿದೆ. ಆದರೆ ಕೆಲ ವರ್ಷಗಳಿಂದ ಈಕೆ ಉದ್ಯಮಿ ಶಿಖರ್ ಪಹರಿಯಾ (Shikhar Pahariya) ಜೊತೆ ಸುತ್ತಾಟ ಮಾಡುತ್ತಿದ್ದಾರೆ. ದೇಶ-ವಿದೇಶ ತಿರುಗುತ್ತಿದ್ದಾರೆ. ಅಂದಹಾಗೆ, ಶಿಖರ್ ಪಹಾರಿಯಾ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಮೊಮ್ಮಗ. ಸುಶೀಲ್ ಕುಮಾರ್ ಶಿಂಧೆ (Sushil Kumar Shindhe) ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಶಿಖರ್ ಸ್ಮೃತಿ ಶಿಂಧೆ ಅವರ ಪುತ್ರ. ಶಿಖರ್ ಪಹರಿಯಾ ಜೊತೆ ಜಾಹ್ನವಿ ಡೇಟಿಂಗ್ ಮಾಡ್ತಿರೋ ವಿಷಯ ತುಂಬಾ ಹಳೆಯದು. ಇದಾಗಲೇ ಹಲವು ಕಡೆಗಳಲ್ಲಿ ಇವರು ಒಟ್ಟಿಗೇ ಕಾಣಿಸಿಕೊಂಡಿದ್ದಾರೆ. ಫೋಟೋ ಶೂಟ್ ಕೂಡ ಮಾಡಿಸಿಕೊಂಡಿದ್ದಾರೆ. ಬಾಲಿವುಡ್ನಲ್ಲಿ ಸರಿಯಾಗಿ ನೆಲೆ ಕಂಡುಕೊಳ್ಳಲು ಅವರು ಪ್ರಯತ್ನಿಸುತ್ತಿರುವ ನಡುವೆಯೇ ಹೀಗೆಲ್ಲಾ ಸುದ್ದಿಯಾಗುತ್ತಲೇ ಇರುವ ಜಾಹ್ನವಿ ಈಗ ಬಾಯ್ ಫ್ರೆಂಡ್ (Boy Friend) ಜೊತೆ ಟ್ರಿಪ್ಗೆ ಹೋಗಿರುವ ಫೋಟೋಗಳು ವೈರಲ್ ಆಗಿದ್ದವು.
ಕೆಲ ತಿಂಗಳ ಹಿಂದಷ್ಟೇ ಜಾಹ್ನವಿ ಕಪೂರ್ ಹಾಫ್ ಸ್ಯಾರಿ ತೊಟ್ಟು ಬಾಯ್ಫ್ರೆಂಡ್ ಜೊತೆ ತಿರುಪತಿಗೆ ಭೇಟಿ ಕೊಟ್ಟಿದ್ದರು. ಅದಾದ ಬಳಿಕ ಕೆಲವು ದೇವಾಲಯಗಳಲ್ಲಿ ಜೋಡಿ ಕಂಡುಬಂದಿತ್ತು. ಒಟ್ಟಿಗೇ ಕುಳಿತು ದಂಪತಿಯಂತೆ ಪೂಜೆಯನ್ನೂ ನೆರವೇರಿಸಿದ್ದರು. ಕಳೆದ ಬಾರಿ ತಿರುಪತಿಗೆ ಹೋಗಿದ್ದಾಗ ಅವರ ಬೆರಳಿನಲ್ಲಿ ವಜ್ರದ ಉಂಗುರ ಎಲ್ಲರ ಕಣ್ಣು ಕುಕ್ಕಿಸಿತ್ತು. ಜಾಹ್ನವಿ ಅವರು ತಮ್ಮ ಕೂದಲನ್ನು ಸರಿಪಡಿಸಿಕೊಳ್ಳುವ ಸಮಯದಲ್ಲಿ ಈ ವಜ್ರದ ಉಂಗುರ ಎಲ್ಲರ ಕಣ್ಣಿಗೆ ಬಿದ್ದಿದ್ದು, ಅದರ ಬಗ್ಗೆ ಸಕತ್ ಸುದ್ದಿಯಾಗಿತ್ತು. ಶಿಖರ್ ಪಹರಿಯಾ ಜೊತೆ ಗುಟ್ಟಾಗಿ ಎಂಗೇಜ್ಮೆಂಟ್ ಆಯ್ತಾ ಎಂದು ಸುದ್ದಿಯಾಗಿತ್ತು.
ಬಾಯ್ಫ್ರೆಂಡ್ ಜೊತೆ ಮತ್ತೆ ಜಾಹ್ನವಿ ಟೆಂಪಲ್ ರನ್: ಏನಮ್ಮಾ ನಿನ್ ಕಥೆ ಅಂತಿದ್ದಾರೆ ಫ್ಯಾನ್ಸ್!