Brahmastra Collection; ಬಾಯ್ಕಟ್ ನಡುವೆಯೂ ಭರ್ಜರಿ ಕಲೆಕ್ಷನ್ ಮಾಡಿದ ರಣಬೀರ್-ಆಲಿಯಾ ಸಿನಿಮಾ

By Shruiti G Krishna  |  First Published Sep 10, 2022, 1:42 PM IST

ಬ್ರಹ್ಮಾಸ್ತ್ರ ಸಿನಿಮಾ ಸಮಸ್ಯೆ, ಟೀಕೆಗಳ ನಡುವೆಯೂ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಮೊದಲ ದಿನ ಕೋಟಿ ಕೋಟಿ ಬಾಚಿಕೊಂಡಿದೆ.    


ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾ ಅದ್ದೂರಿಯಾಗಿ ತೆರೆಗೆ ಬಂದಿದೆ. ಸೆಪ್ಟಂಬರ್ 9ರಂದು ತೆರೆಗೆ ಬಂದ ಬ್ರಹ್ಮಾಸ್ತ್ರ ಸಿನಿಮಾ ಹಿಂದಿ ಜೊತೆಗೆ ತೆಲುಗು, ತಮಿಳು, ಕನ್ನಡ ಭಾಷೆ ಸೇರಿದಂತೆ ಅನೇಕ ಭಾಷೆಯಲ್ಲಿ ತೆರೆಗೆ ಬಂದಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿರುವ ಬ್ರಹ್ಮಾಸ್ತ್ರ ಅಯಾನ್ ಮುಖರ್ಜಿ ಸಾರಥ್ಯದಲ್ಲಿ ಮೂಡಿಬಂದಿದೆ. ದೊಡ್ಡ ತಾರಾಬಳಗವಿರುವ ಈ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿತ್ತು. ಈ ಸಿನಿಮಾ ರಿಲೀಸ್‌ಗೂ ಮೊದಲೇ ಬಾಯ್ಕಟ್ ಸಮಸ್ಯೆಗೆ ಸಿಲುಕ್ಕಿತ್ತು. ಬಾಲಿವುಡ್‌ನಲ್ಲಿ ಅನೇಕ ಸಿನಿಮಾಗಳು ಬಾಯ್ಕಟ್ ಸುಳಿಗೆ ಸಿಲುಕಿವೆ. ಬ್ರಹ್ಮಾಸ್ತ್ರ ಸಿನಿಮಾ ಸಮಸ್ಯೆ, ಟೀಕೆಗಳ ನಡುವೆಯೂ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಮೊದಲ ದಿನ ಕೋಟಿ ಕೋಟಿ ಬಾಚಿಕೊಂಡಿದೆ.    

ಅಂದಹಾಗೆ ಸಿನಿಮಾ ಮೊದಲ ದಿನ ಬರೋಬ್ಬರಿ 35-36 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಬಾಲಿವುಡ್ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಮೊದಲ ದಿನದ ಕಲೆಕ್ಷನ್​ನಲ್ಲಿ ಸಿನಿಮಾ ಗೆಲುವು ಕಂಡಿದೆ. ಅಂದಹಾಗೆ ಬಾಲಿವುಡ್‌ನಲ್ಲಿ ಇತ್ತೀಚಿಗೆ ರಿಲೀಸ್ ಆದ ಸಿನಿಮಾಗಳಲ್ಲಿ ಬ್ರಹ್ಮಾಸ್ತ್ರ ಅತೀಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾವಾಗಿದೆ. 2022 ಬಾಲಿವುಡ್‌ ಬಾಕ್ಸ್ ಆಫೀಸ್‌ ಮಂಕಾದ ವರ್ಷವಾಗಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಹೀನಾಯ ಸೋಲು ಕಂಡಿವೆ. ಗಂಗೂಬಾಯಿ ಕಠಿಯಾವಾಡಿ, ಭೂಲ್ ಭುಲೈಯಾ 2, ದಿ ಕಾಶ್ಮೀರ್ ಫೈಲ್ಸ್‌ನಂತಹ ಕೆಲವು ಚಲನಚಿತ್ರಗಳನ್ನು ಹೊರತುಪಡಿಸಿ, ಬೇರೆ ಯಾವುದೇ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿಲ್ಲ. ಹಾಗಾಗಿ ಬ್ರಹ್ಮಾಸ್ತ್ರ ಸಿನಿಮಾದ ಮೇಲೆ ನಿರೀಕ್ಷೆ ದುಪ್ಪಟ್ಟಾಗಿತ್ತು. ಭರ್ಜರಿ ಪ್ರಚಾರ ಕೂಡ ಮಾಡಿದ್ದರು. ಅದರಂತೆ ಮೊದಲ ದಿನದ ಕಲೆಕ್ಷನ್ ಉತ್ತಮವಾಗಿದೆ. 

ರಣಬೀರ್‌ಗೆ ಕಂಟಕವಾದ ಗೋಮಾಂಸ ಹೇಳಿಕೆ; ಉಜ್ಜಯಿನಿ ದೇವಸ್ಥಾನ ಪ್ರವೇಶಿಸದಂತೆ ತಡೆದ ಬಜರಂಗದಳ ಕಾರ್ಯಕರ್ತರು

Tap to resize

Latest Videos

ಅಂದಹಾಗೆ ಬ್ರಹ್ಮಾಸ್ತ್ರ ಸಿನಿಮಾ ಬರೋಬ್ಬರಿ 410 ಕೋಟಿ ರೂಪಾಯಿ ವೆಚ್ಚದಲ್ಲಿ ತಾಯಾರಾಗಿದೆ. ಭರ್ಜರಿ ವಿಎಫ್‌ಎಕ್ಸ್‌ ಸೇರಿದಂತೆ ಅದ್ದೂರಿಯಾಗಿತ್ತು. ಅಡ್ವಾನ್ಸ್ ಬುಕಿಂಗ್​ನಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ಕಮಾಲ್ ಮಾಡಿತ್ತು. ಮೊದಲ ದಿನ ಈ ಚಿತ್ರ ಅಡ್ವಾನ್ಸ್ ಬುಕಿಂಗ್​ನಿಂದ 11 ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ಬಾಯ್ಕಟ್ ಸಮಸ್ಯೆ ನಡುವೆಯೂ ಉತ್ತಮ ಕಲೆಕ್ಷನ್ ಮಾಡಿರುವುದು ಅಚ್ಚರಿ ಮೂಡಿಸಿದೆ. ಅಂದಹಾಗೆ ಬ್ರಹ್ಮಾಸ್ತ್ರ ಸಿನಿಮಾಗೆ ಭಾರಿ ವಿರೋಧ ಸಹ ವ್ಯಕ್ತವಾಗಿತ್ತು. ಸಿನಿಮಾ ನೋಡಿದ ಅನೇಕ ಮಂದಿ ಡಿಸಾಸ್ಟರ್, ಹಾರಿಬಲ್ ಎಂದು ಕಾಮೆಂಟ್ ಮಾಡಿದ್ದರು. ಸ್ಕ್ರೀನ್ ಪ್ಲೇ ನೋಡಿ ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದರು. ಆದರೂ ಮೊದಲ ದಿನ ಉತ್ತಮ ಕಮಾಯಿ ಮಾಡಿದೆ. 

ಗೋಮಾಂಸ ತುಂಬಾ ಇಷ್ಟ; ರಣಬೀರ್ ಕಪೂರ್ ಹೇಳಿಕೆ ವೈರಲ್, 'ಬ್ರಹ್ಮಾಸ್ತ್ರ' ಬಾಯ್ಕಟ್‌ಗೆ ಒತ್ತಾಯ

ಅಂದಹಾಗೆ ಬ್ರಹ್ಮಾಸ್ತ್ರ ಸಿನಿಮಾ ಶುಕ್ರವಾರ ವೀಕ್ ಡೇಸ್‌ನಲ್ಲಿಯೇ ಇಷ್ಟು ಕಲೆಕ್ಷನ್ ಮಾಡಿರುವುದರಿಂದ ವೀಕೆಂಡ್ ಕಲೆಕ್ಷನ್ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಇಂದು (ಸೆಪ್ಟೆಂಬರ್ 10) ಹಾಗೂ ನಾಳೆ (ಸೆಪ್ಟೆಂಬರ್ 11) ಕಲೆಕ್ಷನ್ ಹೆಚ್ಚುವ ಸಾಧ್ಯತೆ ಇದೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ ಜೊತೆಗೆ ಸೌತ್ ಸ್ಟಾರ್ ನಾಗಾರ್ಜುನ್ ಹಾಗೂ ಮೌನಿ ರಾಯ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. 

click me!