ಖ್ಯಾತ ಗಾಯಕಿ ಬಾಂಬೆ ಜಯಶ್ರೀಗೆ ಬ್ರೈನ್ ಹ್ಯಾಮರೇಜ್; UKಯಲ್ಲಿ ಚಿಕಿತ್ಸೆ

Published : Mar 24, 2023, 05:21 PM IST
ಖ್ಯಾತ ಗಾಯಕಿ ಬಾಂಬೆ ಜಯಶ್ರೀಗೆ ಬ್ರೈನ್ ಹ್ಯಾಮರೇಜ್; UKಯಲ್ಲಿ ಚಿಕಿತ್ಸೆ

ಸಾರಾಂಶ

ಖ್ಯಾತ ಗಾಯಕಿ ಬಾಂಬೆ ಜಯಶ್ರೀಗೆ ಬ್ರೈನ್ ಹ್ಯಾಮರೇಜ್ ಆಗಿದ್ದು ಯುಕೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. 

ಪ್ರೀತ್ಸೇ ಅಂತ ಪ್ರಾಣ ತಿನ್ನೋ...ಕನ್ನಡದ ಜನಪ್ರಿಯ ಹಾಡಿಗೆ ಧ್ವನಿಯಾಗಿದ್ದ ಖ್ಯಾತ ಕರ್ನಾಟಿಕ್ ಗಾಯಕಿ ಬಾಂಬೆ ಜಯಶ್ರೀ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ. ಯುಕೆಯಲ್ಲಿ ಬಾಂಬೆ ಜಯಶ್ರೀ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಲಂಡನ್ ಪ್ರವಾಸದಲ್ಲಿದ್ದ ಗಾಯಕಿ ಬಾಂಬ್ ಜಯಶ್ರೀ ಅವರಿಗೆ  ರಕ್ತನಾಳ ಸಮಸ್ಯೆಯಿಂದ ಬಳಲುತ್ತಿದ್ದರು. ತಕ್ಷಣ ಆಸ್ಪತ್ರೆಗೆ ಧಾವಿಸಿ ಪರೀಕ್ಷೆ ಮಾಡಿದ ಬಳಿಕ ಬ್ರೈನ್ ಹ್ಯಾಮರೇಜ್ ಗೊತ್ತಾಗಿದೆ. ತಕ್ಷಣ ಶಸ್ತ್ರ ಚಿಕಿತ್ಸೆಗೆ ಒಳಲಾಗಿದ್ದಾರೆ. 

ಈ ಬಗ್ಗೆ ಖ್ಯಾತ ಗಾಯಕಿ ಜಯಶ್ರೀ ಅವರ ಕುಟುಂಬದವರು ಹೇಳಿಕೆ ನೀಡಿದ್ದು, ಲಂಡನ್‌ ಪ್ರವಾಸದಲ್ಲಿ ಇದ್ದಾಗ ತೀವ್ರ ಆನಾರೋಗ್ಯ ಕಾಡಿದ್ದು ಶಸ್ತ್ರ ಚಿಕಿತ್ಸೆಗೆ ಉಳಗಾಗಿದ್ದಾರೆ. ಸಂಗೀತ ಕಾರ್ಯಕ್ರಮಗಳಿಗಾಗಿ ಲಂಡನ್‌ಗೆ ತೆರಳಿದ್ದರು' ಎಂದು ಹೇಳಿದ್ದಾರೆ. ಯುಕೆನಲ್ಲಿ ಅವರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆ. ಕೆಲವು ದಿನಗಳು ವಿಶ್ರಾಂತಿ ಪಡೆಯಬೇಕಿದೆ. ಖಾಸಗಿತನ ಗೌರವಿಸಿ' ಎಂದು ಕೇಳಿಕೊಂಡಿದ್ದಾರೆ. 

ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ತಪ್ಪು ಮಾಹಿತಿಗಳ ಬಗ್ಗೆ ನಿರ್ಲಕ್ಷಿಸುವಂತೆ ಅವರು ಮನವಿ ಮಾಡಿದ್ದಾರೆ. ಇಂದು ಸಂಜೆ (ಮಾರ್ಚ್ 24) ಲಂಡನ್‌ನ ವಿಶ್ವವಿದ್ಯಾನಿಲಯವೊಂದರಲ್ಲಿ ಸಂಗೀತ ಕಾರ್ಯಕ್ರಮ ನೀಡಬೇಕಿತ್ತು. ಆದರೆ ದಿಢೀರ್ ಆನಾರೋಗ್ಯದ ಕಾರಣ ಚಿಕಿತ್ಸೆಗೆ ಒಳಗಾಗಿದ್ದಾರೆ. 

ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ದರೋಡೆ : ಮಾಜಿ ಚಾಲಕ ಬಂಧನ

ಖ್ಯಾತ ಗಾಯಕಿ ಜಯಶ್ರೀ ಅನೇಕ ಭಾಷೆಗಳಲ್ಲಿ ಹಾಡಿದ್ದಾರೆ. ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಲಂ ಮತ್ತು ಹಿಂದಿ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಕನ್ನಡದಲ್ಲಿ ಎಕ್ಸ್ ಕ್ಯೂಸ್ ಮಿ ಸಿನಿಮಾದ ಸೂಪರ್ ಹಿಟ್ ಪ್ರೀತ್ಸೆ ಅಂತ ಪ್ರಾಣ ತಿನ್ನೋ ಹಾಡಿಗೆ ಧ್ವನಿಯಾಗಿದ್ದಾರೆ. ಜೊತೆ ಜೊತೆಯಲಿ ಸಿನಿಮಾ ಸುಮ್ಮನೆ ಸುಮ್ಮನೆ....ಹಾಡು ಸೇರಿದಂತೆ ಅನೇಕ ಹಾಡಗಳಿಗೆ ಧ್ವನಿ ನೀಡಿದ್ದಾರೆ. ಬಾಂಬಿ ಜಯಶ್ರೀ ಬೇಗ ಗುಣುಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?
10 ಭಾಷೆಗಳಲ್ಲಿ 90 ಸಿನಿಮಾಗಳು, ಗಂಗೂಲಿ ಜೊತೆ ಅಫೇರ್ ವದಂತಿ.. 50 ವರ್ಷವಾದರೂ ಮದುವೆಯಾಗದ ನಟಿ ಯಾರು?