56 ಲಕ್ಷ ರೂ. ವಂಚನೆ ಆರೋಪ; ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ದೂರು ದಾಖಲು

Published : May 25, 2022, 01:15 PM IST
56 ಲಕ್ಷ ರೂ. ವಂಚನೆ ಆರೋಪ; ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ದೂರು ದಾಖಲು

ಸಾರಾಂಶ

ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಸದಾ ವಿವಾದಗಳ ಮೂಲಕವೇ ಸದ್ದು ಮಾಡುವ ಆರ್ ಜಿ ವಿ ಇದೀಗ ಸಂಕಷ್ಟದಲ್ಲಿ ಸಿಲುಕಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ(Ram Gopal Varma) ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಸದಾ ವಿವಾದಗಳ ಮೂಲಕವೇ ಸದ್ದು ಮಾಡುವ ಆರ್ ಜಿ ವಿ ಇದೀಗ ಸಂಕಷ್ಟದಲ್ಲಿ ಸಿಲುಕಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ವಂಚನೆ ಪ್ರಕರಣ(Cheating case) ದಾಖಲಾಗಿದೆ. 56 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ್ದಾರೆ ಎಂದು ನಿರ್ಮಾಣ ಸಂಸ್ಥೆಯ ಮಾಲಿಕರೊಬ್ಬರು ದೂರು ನೀಡಿದ್ದಾರೆ. ಹೈದರಾಬಾದ್‌ನ ಮಿಯಾಪುರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

2019ರಲ್ಲಿ ರಾಮ್ ಗೋಪಾಲ್ ವರ್ಮಾ ಸ್ನೇಹಿತರ ಮೂಲಕ ದೂರುದಾರರನ್ನು ಭೇಟಿಯಾಗಿದ್ದರು. ಭೇಟಿಯಾದ ಮರು ವರ್ಷವೇ ತೆಲುಗು ಸಿನಿಮಾ ದಿಶಾ ಚಿತ್ರಕ್ಕಾಗಿ 8 ಲಕ್ಷ ರೂಪಾಯಿ ಸಾಲವನ್ನು ಪಡೆದಿದ್ದರು. ಮತ್ತೊಮ್ಮೆ 20 ಲಕ್ಷ ರೂಪಾಯಿ ಚೆಕ್ ಮೂಲಕ ಸಾಲ ಮೂಡುವಂತೆ ಕೇಳಿದ್ದಾರೆ ಎಂದು ದೂರುದಾರು ಆರೋಪಿಸಿದ್ದಾರೆ. ಇದನ್ನ ಆರು ತಿಂಗಳೊಳಗೆ ಮರುಪಾವತಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಅದರೆ ಮುಂದಿನ ತಿಂಗಳು ತುರ್ತು ಅವಶ್ಯಕತೆ ಇದೆ ಎಂದು ಹೇಳಿ 28 ಲಕ್ಷ ರೂಪಾಯಿ ಕೇಳಿದರು ಎಂದು ಹೇಳಿದ್ದಾರೆ.

ಪ್ರಶಾಂತ್‌ ನೀಲ್‌ ಚಿತ್ರರಂಗದ ವೀರಪ್ಪನ್, 100 ಕೋಟಿ ನಷ್ಟವಾಗಿದೆ: ನಿರ್ದೆಶಕ RGV ಗರಂ

ಅವರಿಗೆ ಅವಶ್ಯಕತೆ ಇದೆ ಎಂದು ನಂಬಿ 28 ಲಕ್ಷ ರೂಪಾಯಿ ವರ್ಗಾಯಿಸಲಾಯಿತು. ಆ ಸಮಯದಲ್ಲಿ ದಿಶಾ ಸಿನಿಮಾ ಬಿಡುಗಡೆ ಮೊದಲು 56 ಲಕ್ಷ ರೂಪಾಯಿ ಪಾವಾಸ್ ಮಾಡುವುದಾಗಿ ಒಪ್ಪಿಕೊಂಡಿದ್ದರು. ಆದರೆ ಆರ್ ಜಿ ವಿ ದಿಶಾ ಸಿನಿಮಾದ ನಿರ್ಮಾಪಕರಲ್ಲ ಎನ್ನುವ ಸತ್ಯ 2021ರಲ್ಲಿ ಗೊತ್ತಾಯಿತು. ಸುಳ್ಳು ಹೇಳಿ ಸಾಲ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಆರ್ ಜಿ ವಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 406, 417, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರ್ ಜಿ ವಿ ಇತ್ತೀಚಿಗಷ್ಟೆ ರಿಯಲ್ ಸ್ಟಾರ್ ಉಪೇಂದ್ರ ಜೊತೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. ಆ ಆಮ್ ಆರ್ ಎಂದು ಸಿನಿಮಾಗೆ ಟೈಟಲ್ ಇಟ್ಟಿದ್ದರು. ಈ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿ ನಡೆದಿದ್ದು ಕಿಚ್ಚ ಸುದೀಪ್ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದರು. ಇದಕ್ಕೂ ಮೊದಲು ಆರ್ ಜಿ ವಿ ಕನ್ನಡದಲ್ಲಿ ಶಿವರಾಜ್ ಕುಮಾರ್ ಜೊತೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿದ್ದರು.

ಹಿಂದಿಯವರಿಗೆ ಕನ್ನಡದ ಬಗ್ಗೆ ಗೊತ್ತಿರಲಿಲ್ಲ, ಇಂದು ವಿಶ್ವವೇ ಮಾತಾಡುತ್ತಿದೆ- RGV

ಸದಾ ಸುದ್ದಿಯಲ್ಲಿರುವ ರಾಮ ಗೋಪಾಲ್ ಮರ್ಮಾ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ವರ್ಮಾ ಈ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸರಣಿ ಟ್ವೀಟ್ ಮಾಡುತ್ತಿದ್ದ ವರ್ಮಾ ಈ ಬಗ್ಗೆ ಮೌನ ವಹಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?
10 ಭಾಷೆಗಳಲ್ಲಿ 90 ಸಿನಿಮಾಗಳು, ಗಂಗೂಲಿ ಜೊತೆ ಅಫೇರ್ ವದಂತಿ.. 50 ವರ್ಷವಾದರೂ ಮದುವೆಯಾಗದ ನಟಿ ಯಾರು?