ಚಿರು ಕೊನೆಯ ಸಿನಿಮಾದಲ್ಲಿ ಪುತ್ರ ರಾಯನ್ ರಾಜ್ ಸರ್ಜಾ

By Shruiti G Krishna  |  First Published Apr 8, 2022, 4:41 PM IST

ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಸಿನಿಮಾ ರಾಜಮಾರ್ತಾಂಡ ಬಿಡುಗಡೆಗೆ ಸಿದ್ಧವಾಗಿದೆ. ಚಿರು ಕೊನೆಯ ಸಿನಿಮಾದಲ್ಲಿ ಪತ್ರ ರಾಯನ್ ರಾಜ್ ಸರ್ಜಾ ಕೂಡ ನಟಿಸಿದ್ದಾರೆ ಎಂದು ನಿರ್ದೇಶಕ ರಾಮ್ ನಾರಾಯಣ್ ಮಾಹಿತಿ ನೀಡಿದ್ದಾರೆ.


ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ(Chiranjeevi sarja) ಅಭಿನಯದ ಕೊನೆಯ ಸಿನಿಮಾ ರಾಜಮಾರ್ತಾಂಡ (Rajamarthanda) ಬಿಡುಗಡೆಗೆ ಸಿದ್ಧವಾಗಿದೆ. ಇದು ಚಿರು ಅವರ ಕೊನೆಯ ಸಿನಿಮಾವಾಗಿದ್ದರಿಂದ ದೊಡ್ಡ ಮಟ್ಟದಲ್ಲಿಯೇ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ ಚಿತ್ರತಂಡ. ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡವು ವಿಶೇಷ ಪೂಜೆಯನ್ನೂ ಆಯೋಜಿಸಿತ್ತು. ವಿಶೇಷ ಎಂದರೆ ಈ ಸಿನಿಮಾದ ಬಗ್ಗೆ ಚಿತ್ರದ ನಿರ್ದೇಶಕ ರಾಮ್ ನಾರಾಯಣ್ ಇಂಟ್ರೆಸ್ಟಿಂಗ್ ಸುದ್ದಿಯೊಂದನ್ನು ನೀಡಿದ್ದಾರೆ. ಚಿರು ಅವರ ಕೊನೆಯ ಸಿನಿಮಾದಲ್ಲಿ ಚಿರು ಪುತ್ರ ರಾಯನ್ ರಾಜ್ ಸರ್ಜಾ (Rayan Raj Sarja) ಕೂಡ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಅಂದಹಾಗೆ ರಾಜಾಮಾರ್ತಂಡ ಸಿನಿಮಾ ರೆಡಿಯಾಗಿ ಒಂದು ವರ್ಷವೇ ಆಗಿದೆ. ರಾಯನ್ ರಾಜ್ ಹುಟ್ಟುವ ಮೊದಲೇ ಈ ಚಿತ್ರದ ಬಹುತೇಕ ಕೆಲಸಗಳು ಮುಗಿದಿದ್ದವು. ಇದೀಗ ಬಿಡುಗಡೆ ಸಿದ್ಧವಾಗಿರುವುದಲ್ಲದೇ ಅಪ್ಪನ ಸಿನಿಮಾದಲ್ಲಿ ರಾಯನ್ ಕೂಡ ಕಾಣಿಸಿಕೊಂಡಿರುವುದು ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ, ರಾಯನ್ ಎಂಟ್ರಿ ಹೇಗಿರಲಿದೆ ಎನ್ನುವುದು ಎಂದು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

ಯಾವೆಲ್ಲಾ ನಟರ ಚಿತ್ರಗಳು ಅವರ ನಿಧನದ ಬಳಿಕ ತೆರೆಕಂಡಿವೆ ಗೊತ್ತಾ?

Tap to resize

Latest Videos

2020ರಲ್ಲಿ ಚಿರಂಜೀವಿ ಹೃದಯಘಾತದಿಂದ ನಿಧನಹೊಂದಿರು. ಚಿರು ಸಾಯುವುದಕ್ಕೂ ಮೊದಲು ಸಿನಿಮಾದ ಚಿತ್ರೀಕರಣ ಸಂಪೂರ್ಣಗೊಂಡಿತ್ತು. ಆದರೆ ಡಬ್ಬಿಂಗ್ ಕೆಲಸಗಳು ಇನ್ನು ಭಾಕಿ ಉಳಿದಿತ್ತು. ಇದೀಗ ಅಣ್ಣನ ಸಿನಿಮಾಗೆ ತಮ್ಮ ಧ್ರುವ ಸರ್ಜಾ ಡಬ್ ಮಾಡುವ ಮೂಲಕ ಸಿನಿಮಾ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದ್ದಾರೆ. ವಿಶೇಷ ಹೋಮ ಮಾಡುವ ಮೂಲಕ ಸಿನಿಮಾತಂಡ ರಿಲೀಸ್ ಕೆಲಸಕ್ಕೆ ರೆಡಿಯಾಗಿದೆ. ಅಂದಹಾಗೆ ರಾಯನ್ ಸರ್ಜಾ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ರಾಯನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತವೆ. ಫೋಟೋ ಶೇರ್ ಮಾಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದುಬರುತ್ತೆ. ಇದೀಗ ರಾಯನ್ ಮೊದಲ ಬಾರಿಗೆ ತೆರೆಮೇಲೆ ಬರ್ತಿರುವುದನ್ನು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

ಇತ್ತೀಚಿಗಷ್ಟೆ ರಿಲೀಸ್ ಆಗಿದ್ದ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾಗೆ ಶಿವರಾಜ್ ಕುಮಾರ್ ಧ್ವನಿ ನೀಡಿದ್ದರು. ಈ ಸಿನಿಮಾದಲ್ಲಿ ಶಿವಣ್ಣ ಮತ್ತು ರಾಘಣ್ಣ ಇಬ್ಬರು ಕಾಣಿಸಿಕೊಂಡಿದ್ದರು. ಮೂವರು ಒಂದೇ ಸಿನಿಮಾದಲ್ಲಿ ನಟಿಸಬೇಕೆನ್ನುವುದು ಅಭಿಮಾನಿಗಳ ಆಸೆಯಾಗಿತ್ತು. ಅದನ್ನು ಜೇಮ್ಸ್ ಸಿನಿಮಾ ಮೂಲಕ ಈಡೇರಿಸಿದ್ದರು ನಿರ್ದೇಶಕ ಚೇತನ್. ಇದೀಗ ಚಿರಂಜೀವಿ ನಟನೆಯ ಕೊನೆಯ ಸಿನಿಮಾದಲ್ಲಿ ಪುತ್ರ ರಾಯನ್ ಕಾಣಿಸಿಕೊಳ್ಳುವ ಮೂಲಕ ಸಿನಿಮಾಗೆ ಸಾಥ್ ನೀಡಿದ್ದಾರೆ. ಅಂದಹಾಗೆ ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎಂದ ಸದ್ಯದಲ್ಲೇ ಸಿನಿಮಾತಂಡ ಬಹಿರಂಗ ಪಡಿಸಲಿದೆ.

Chiranjeevi Sarja ನಟನೆಯ 'ರಾಜ ಮಾರ್ತಾಂಡ' ರೊಮ್ಯಾಂಟಿಕ್ ಸಾಂಗ್ ರಿಲೀಸ್!

ಇನ್ನು ನಟಿ ಮೇಘನಾ ರಾಜ್ ಮತ್ತೆ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ. ಸದ್ಯ ಡಾನ್ಸ್ ರಿಯಾಲಿಟಿನಲ್ಲಿ ಜಡ್ಜ್ ಆಗಿರುವ ಮೆಘನಾ ಒಂದು ಸಿನಿಮಾಗೂ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಪತಿಯನ್ನು ಕಳೆದುಕೊಂಡ ಬಳಿಕ ಮೊದಲ ಬಾರಿಗೆ ಮೇಘನಾ ಬಣ್ಣ ಹಚ್ಚುತ್ತಿದ್ದಾರೆ. ಇದೀಗ ಪುತ್ರ ರಾಯನ್ ಕೂಡ ತೆರೆಮೇಲೆ ಮಿಂಚುತ್ತಿದ್ದಾರೆ. ಹಾಗಾಗಿ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

click me!