Oppenheimer: ಸೆಕ್ಸ್ ವೇಳೆ ಭಗವದ್ಗೀತೆ ಓದುವ ದೃಶ್ಯ, ವಿವಾದದಲ್ಲಿ ಕ್ರಿಸ್ಟೋಫರ್ ನೋಲನ್ ಸಿನಿಮಾ

Published : Jul 23, 2023, 03:35 PM IST
Oppenheimer: ಸೆಕ್ಸ್ ವೇಳೆ ಭಗವದ್ಗೀತೆ ಓದುವ ದೃಶ್ಯ, ವಿವಾದದಲ್ಲಿ ಕ್ರಿಸ್ಟೋಫರ್ ನೋಲನ್ ಸಿನಿಮಾ

ಸಾರಾಂಶ

ಕ್ರಿಸ್ಟೋಫರ್ ನೋಲನ್ ನಿರ್ದೇಶನದ ಆಪನ್‌ಹೈಮರ್ ಸಿನಿಮಾದಲ್ಲಿ ಸೆಕ್ಸ್ ವೇಳೆ ಭಗವದ್ಗೀತೆ ಓದುವ ದೃಶ್ಯ ಈಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಈ ದೃಶ್ಯ ತೆಗೆಯುವಂತೆ ಒತ್ತಾಯ ಕೇಳಿಬಂದಿದೆ. 

ಹಾಲಿವುಡ್ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಸಾರಥ್ಯದಲ್ಲಿ ಬಂದ ‘ಆಪನ್​ಹೈಮರ್​’ ಸಿನಿಮಾ ರಿಲೀಸ್ ಆಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ವಿಶ್ವದಾದ್ಯಂತ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಅನೇಕ ಕಡೆ ಹೌಸ್ ಪುಲ್ ಪ್ರದರ್ಶನ ಕಾಣುತ್ತಿದೆ. ಜುಲೈ 21ರಂದು ಬಿಡುಗಡೆ ಆದ ಹಾಲಿವುಡ್​ನ ಈ ಚಿತ್ರಕ್ಕೆ ವಿಮರ್ಶಕರು ಮೆಚ್ಚುಗೆ ಸೂಚಿಸಿದ್ದಾರೆ. ಆದರೀಗ ಈ  ಸಿನಿಮಾದಲ್ಲಿನ ಒಂದು ದೃಶ್ಯಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಲೈಂಗಿಕ ಕ್ರಿಯೆ ನಡೆಸುವಾಗ ಕಥಾನಾಯಕ ಭಗವದ್ಗೀತೆಯ ಸಾಲುಗಳನ್ನು ಓದುವ ದೃಶ್ಯ ಈ ಸಿನಿಮಾದಲ್ಲಿದೆ. ಇದಕ್ಕೆ ಭಾರತದಲ್ಲಿ ಆಕ್ಷೇಪ ಎದುರಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಮಾಹಿತಿ ಆಯುಕ್ತ ಉದಯ್​ ಮಹುರ್ಕರ್​ ತಕರಾರು ತೆಗೆದಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ‘ಆಪನ್​ಹೈಮರ್​’ ಚಿತ್ರತಂಡವನ್ನು ಪ್ರಶ್ನಿಸಿದ್ದಾರೆ. 

ಅಣುಬಾಂಬ್​ ಕಂಡು ಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ ಅವರ ಜೀವನದ ಕುರಿತು ‘ಆಪನ್​ಹೈಮರ್​’ ಸಿನಿಮಾ ಮೂಡಿಬಂದಿದೆ. ಆಪನ್​ಹೈಮರ್​ ಪಾತ್ರವನ್ನು ಕಿಲಿಯನ್​ ಮರ್ಫಿ ಮಾಡಿದ್ದಾರೆ. ರಿಯಲ್​ ಲೈಫ್​ನಲ್ಲೂ ಆಪನ್​ಹೈಮರ್​ ಅವರಿಗೆ ಹಿಂದೂ ಪುರಾಣಗಳ ಬಗ್ಗೆ ಆಸಕ್ತಿ ಇತ್ತು. ಅವರು ಸಂಸ್ಕೃತ ಕಲಿತಿದ್ದರು ಮತ್ತು ಭಗವದ್ಗೀತೆ ಓದಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಈ ಸಿನಿಮಾದಲ್ಲಿ ಒಂದು ದೃಶ್ಯ ಇದೆ. ಆ ದೃಶ್ಯವೇ ಈಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

'ಅದ್ಭುತವಾದ ಗ್ರಂಥ..' ಒಪೆನ್ಹೈಮರ್ ಚಿತ್ರದ ಸಿದ್ಧತೆಗಾಗಿ ಭಗವದ್ಗೀತೆ ಓದಿದ್ದ ಹಾಲಿವುಡ್‌ ನಟ ಸಿಲಿಯನ್ ಮರ್ಫಿ

ಆಪನ್​ಹೈಮರ್​ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಪ್ರೇಯಸಿಗೆ ಅನೇಕ ಪುಸ್ತಕಗಳು ಕಾಣಿಸುತ್ತವೆ. ಆ ಪೈಕಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡು ‘ಇದು ಏನು’ ಅಂತ ಆಕೆ ಪ್ರಶ್ನಿಸುತ್ತಾಳೆ. ‘ಇದು ಭಗವದ್ಗೀತೆ’ ಎಂದು ಆಪನ್​ಹೈಮರ್​ ಹೇಳುತ್ತಾರೆ ಮತ್ತು ಅದರಲ್ಲಿನ ಒಂದೆರಡು ಸಾಲುಗಳನ್ನು ವಿವರಿಸುತ್ತಾರೆ. ಈ ದೃಶ್ಯ ಈಗ ಭಾರತೀಯರನ್ನು ಕೆರಳಿಸಿದೆ. ಇಂಥ ದೃಶ್ಯಕ್ಕೆ ಭಾರತದಲ್ಲಿ ಸೆನ್ಸಾರ್​ ಮಂಡಳಿಯವರು ಹೇಗೆ ಅನುಮತಿ ನೀಡಿದರು ಎಂದು ಕೆಲವರು ತಕರಾರು ತೆಗೆದಿದ್ದಾರೆ. ಇದು ಹಿಂದೂ ಧರ್ಮದ ಮೇಲೆ ಮಾಡಲಾಗಿರುವ ದಾಳಿ ಎನ್ನುವ ಟೀಕೆ ಕೂಡ ವ್ಯಕ್ತವಾಗುತ್ತಿದೆ.

ಹಾಲಿವುಡ್‌ನ 'ಆಪನ್​ಹೈಮರ್' ಸಿನಿಮಾ ಟಿಕೆಟ್ ಬೆಲೆ 2450 ರೂ.: ಮುಂಗಡ ಬುಕ್ಕಿಂಗ್‌ಗೆ ಮುಗಿಬಿದ್ದ ಭಾರತದ ಫ್ಯಾನ್ಸ್

ಇಷ್ಟೆಯಲ್ಲದೆ ಈ ದೃಶ್ಯಕ್ಕೆ ಕತ್ತರಿ ಹಾಕುವಂತೆ ಪತ್ರ ಕೂಡ ಬರೆಯಲಾಗಿದೆ. ಹೌದು, ‘ಸೇವ್​ ಕಲ್ಚರ್​ ಸೇವ್​ ಇಂಡಿಯಾ ಪ್ರತಿಷ್ಠಾನ’ದ ವತಿಯಿಂದ ಉದಯ್​ ಮಹುರ್ಕರ್​ ‘ಆಪನ್​ಹೈಮರ್​’ ಸಿನಿಮಾದ ನಿರ್ದೇಶಕ ಕ್ರಿಸ್ಟೋಫರ್​ ನೋಲನ್​ಗೆ ಪತ್ರ ಬರೆದಿದ್ದಾರೆ. ಸಿನಿಮಾದಲ್ಲಿ ಇರುವ ಆಕ್ಷೇಪಾರ್ಹ ದೃಶ್ಯವನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಕ್ರಿಸ್ಟೋಫರ್​ ನೋಲನ್​ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡಬೇಕಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?