
ಬಾಲಿವುಡ್ ನಟ ಸುಶಾಂತ್ ಸಿಂಗ್ ನಿಗೂಢ ಸಾವಿನ ತನಿಖೆ ವೇಳೆ ಹೆಚ್ಚು ಸದ್ದು ಮಾಡಿದ ವಿಚಾರವೇ ಡ್ರಗ್ಸ್ ದಂಧೆ. ಬಿ-ಟೌನ್ ಸೆಲೆಬ್ರಿಟಿಗಳ ಹೆಸರು ಮಾತ್ರವಲ್ಲದೇ, ಅವರ ಮ್ಯಾನೇಜರ್ ಕೂಡ ಸಿಲುಕಿಕೊಂಡರು. ಅವರ ಪೈಕಿ ಹೆಚ್ಚು ಚರ್ಚೆ ಆದವರು ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಶ್ಮಾ ಪ್ರಕಾಶ್.
ಕರೀಶ್ಮಾಗೆ ಮತ್ತಷ್ಟು ಸಂಕಷ್ಟಗಳು ಎದುರಾಗಿವೆ. ಕರೀಶ್ಮಾ ಪ್ರಕಾಶ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ರದ್ದು ಮಾಡಿದೆ. ಹೀಗಾಗಿ ಕರೀಶ್ಮಾ ಬಂಧನ ಭೀತಿ ಹೆಚ್ಚಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಹಾಕಿದ್ದರು. ಆದರೆ ಎನ್‌ಸಿಬಿ ಜಾಮೀನಿಗೆ ವಿರೋಧ ವ್ಯಕ್ತ ಪಡಿಸಿ ಹಲವು ದಾಖಲೆಗಳನ್ನು ನ್ಯಾಯಾಲಕ್ಕೆ ಒಪ್ಪಿಸಿದ್ದರು.
ಡಿಫೆನ್ಸ್ ಮತ್ತು ಪ್ರಾಸಿಕ್ಯೂಷನ್ ವಾದ ಆಲಿಸಿದ ನ್ಯಾಯಾಧೀಶರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ರದ್ದು ಮಾಡಿದ್ದಾರೆ. ಆದರೆ ಆಗಸ್ಟ್ 25ರೊಳಗೆ ಹೈ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಕರೀಶ್ಮಾ ಅರ್ಜಿ ಹಾಕಿಕೊಳ್ಳಬಹುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಟಾಪ್ ನಟಿಯರಾದ ಸಾರಾ ಅಲಿ ಖಾನ್, ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಅರ್ಜುನ್ ರಾಮ್ ಪಾಲ್, ಅರ್ಜುನ್ ಪತ್ನಿ ಗೇಬ್ರಿಯಲ್, ಗೇಬ್ರಿಯಲ್ ಸಹೋದರಿ, ಅರ್ಜುನ್ ಸಹೋದರಿ ಕೋಮಲ್, ರಾಕುಲ್ ಪ್ರೀತ್ ಸಿಂಗ್, ಕರಣ್ ಜೋಹಾರ್, ಕಮಿಡಿಯನ್ ಭಾರತಿ ಸಿಂಗ್ ಮತ್ತು ಆಕೆಯ ಪತಿ, ಟಿವಿ ನಟಿ ಪ್ರೀತಿಕಾ, ನಿರ್ಮಾಒಕ ಫಿರೋಜ್ ನಾಡಿಯಾವಲ ಸೇರಿದಂತೆ ಅನೇಕರನ್ನು ವಿಚಾರಣೆ ಮಾಡಲಾಗಿತ್ತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.