ಕೊರೋನಾದಿಂದ ಬಳಲುತ್ತಿರುವ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಗಂಭೀರ

By Suvarna NewsFirst Published Aug 14, 2020, 5:36 PM IST
Highlights

ಹಿರಿಯ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣಂ ಆರೋಗ್ಯ ಗಂಭೀರ/ ಚೆನ್ನೈ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್/ ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಗಾಯಕ

ಚೆನ್ನೈ(ಆ. 14)   ಕೊರೋನಾ ಸೋಂಕಿಗೆ ಗುರಿಯಾಗಿರುವ ಹಿರಿಯ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ ಚೆನ್ನೈ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ತಿಳಿಸಿದೆ.

ಎರಡು ಮೂರು ದಿನಗಳಿಂದ ಸ್ವಲ್ಪ ಆರೋಗ್ಯದಲ್ಲಿ ಸಮಸ್ಯೆ ಇತ್ತು. ಜ್ವರ ಹಾಗೂ ಶೀತ ಇತ್ತು. ಹಾಗಾಗಿ ಆಸ್ಪತ್ರೆಗೆ ಬಂದು ಚೆಕ್ ಮಾಡಿಸಿದೆ. ಪರೀಕ್ಷೆ ಮಾಡಿಸಿದಾಗ ಕೊರೋನಾ ಸೋಂಕು ಇರುವುದು ಗೊತ್ತಾಗಿದೆ ಹಾಗಾಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆನೆ ಎಂದು ಎಸ್‌ಪಿಬಿ ವಿಡಿಯೋ ಮೂಲಕ ತಮಗೆ ಕೊರೋನಾ ಸೋಂಕು ದೃಢಪಟ್ಟಿರುವುದನ್ನು ತಿಳಿಸಿದ್ದರು.

ಕೊರೋನಾ ಗೆದ್ದು ಬಂದ ಅಮಿತಾಭ್ ಬಚ್ಚನ್

ಶುಕ್ರವಾರ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾದ ಕಾರಣಕ್ಕೆ ಬಹುಭಾಷಾ ಗಾಯಕರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ಎಳಗ್ಗೆ ಎಸ್‌ಪಿಬಿ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿತ್ತು. 

74 ವರ್ಷದ ಗಾಯಕ  ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಭಾರತದ ಬಹುತೇಕ ಎಲ್ಲ ಭಾಷೆಗಳ ಸಿನಿಮಾ ರಂಗದಲ್ಲಿಯೂ ಪರಿಚಯ. ಕನ್ನಡದಲ್ಲಿಯೇ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. 

click me!