
ಭಾರತಕ್ಕೆ ಮೊಟ್ಟ ಮೊದಲ ವಿಶ್ವಕಪ್ ಗೆದ್ದುಕೊಟ್ಟ ದಂತಕತೆ ಕಪಿಲ್ ದೇವ್ ಹಾಗೂ ಮತ್ತೊಬ್ಬರು ಸಿನಿ ದಂತಕತೆ ರಜಿನಿಕಾಂತ್. ಇಬ್ಬರು ಒಂದೇ ಫ್ರೇಮ್ನಲ್ಲಿ ನೋಡ್ತಿದ್ದರೆ ಏನೋ ನಡೀತಿದೆ ಅನ್ನೊದಂತೂ ನಿಜ. ರಜನಿಕಾಂತ್ ಪುತ್ರಿ ಐಶ್ವರ್ಯ ರಜನಿಕಾಂತ್ ನಿರ್ದೇಶನದ 'ಲಾಲ್ ಸಲಾಂ' ಸಿನಿಮಾದಲ್ಲಿ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಕಪಿಲ್ ದೇವ್ ಜತೆಗಿರುವ ಫೋಟೋವನ್ನು ಹಂಚಿಕೊಂಡಿರುವ ರಜನಿಕಾಂತ್, 'ಒಳ್ಳೆಯ ಮಾನವೀಯ ಗುಣಗಳನ್ನು ಹೊಂದಿರುವ, ಎಲ್ಲರಿಂದಲೂ ಗೌರವಿಸಲ್ಪಡುವ ದಿಗ್ಗಜ ವ್ಯಕ್ತಿಯಾದ ಕಪಿಲ್ ದೇವ್ ಅವರನ್ನು ಭೇಟಿ ಮಾಡಲು ಸಿಕ್ಕಿದ್ದು ನನ್ನ ಪಾಲಿಗೆ ಗೌರವ ಹಾಗೂ ಸೌಭಾಗ್ಯವಾದ ಕ್ಷಣ. ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದುಕೊಡುವ ಮೂಲಕ ಇಡೀ ದೇಶವೇ ಹೆಮ್ಮೆಪಡುವಂತೆ ಮಾಡಿದ ವ್ಯಕ್ತಿಯ ಜತೆ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಪಾಲಿನ ಭಾಗ್ಯ' ಎಂದು ರಜನಿಕಾಂತ್ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.