ಕೊರೋನಾದಿಂದ ಕುಟುಂಬ ಚೇತರಿಕೆ: ಮುಂಬೈಗೆ ಮರಳಿದ ದೀಪ್‌ವೀರ್!

Suvarna News   | Asianet News
Published : May 24, 2021, 04:40 PM IST
ಕೊರೋನಾದಿಂದ ಕುಟುಂಬ ಚೇತರಿಕೆ: ಮುಂಬೈಗೆ ಮರಳಿದ ದೀಪ್‌ವೀರ್!

ಸಾರಾಂಶ

ಕುಟುಂಬಸ್ಥರ ಜೊತೆ ಬೆಂಗಳೂರಿನಲ್ಲಿದ್ದ ದೀಪಿಕಾ ಮತ್ತು ರಣವೀರ್ ಸಿಂಗ್ ಮುಂಬೈಗೆ ವಾಪಸ್ ಆಗಿದ್ದಾರೆ. 

ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿದ್ದಂತೆ, ಮುಂಬೈನಲ್ಲಿ ಲಾಕ್‌ಡೌನ್‌ ಮಾಡಲಾಗಿತ್ತು. ತಕ್ಷಣವೇ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದರು. ಪೋಷಕರ ಜೊತೆ ದೀಪಿಕಾ ಸಮಯ ಕಳೆಯುತ್ತಾ ಎಂಜಾಯ್ ಮಾಡುತ್ತಿದ್ದರು. ಈ ವೇಳೆ ದೀಪಿಕಾ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿತ್ತು.

ದೀಪಿಕಾ ತಂದೆ ಪ್ರಕಾಶ್ ಪಡುಕೋಣೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ತಾಯಿ ಉಜ್ವಲ ಹಾಗೂ ಸಹೋದರಿ ಅನಿಷಾಗೂ ಕೊರೋನಾ ಪಾಸಿಟಿವ್ ಬಂದಿತ್ತು. ದೀಪಿಕಾಗೂ ಕೊರೋನಾ ವೈರಸ್ ಸೋಂಕು ತಗುಲಿತ್ತು ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ಇರಲಿಲ್ಲ. ಇದೀಗ ಪ್ರಕಾಶ್ ಪಡುಕೋಣೆ ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ. ಮನೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕಾರಣ ಮಗಳು ಮತ್ತು ಅಳಿಯ ಮುಂಬೈಗೆ ಬಂದಿಳಿದಿದ್ದಾರೆ.

ಕತ್ರಿನಾ ಕೈಫ್ ಯಾ ದೀಪಿಕಾ ಪಡುಕೋಣೆ, ಯಾರು ಹೆಚ್ಚು ಶ್ರೀಮಂತರು? 

ಇಬ್ಬರೂ ಬ್ಲ್ಯಾಕ್ ಆ್ಯಂಡ್ ಬ್ಲ್ಯಾಕ್ ವಸ್ತ್ರ ಧರಿಸಿದ್ದಾರೆ. ಮೇ 24ರ ಬೆಳಗ್ಗೆ ಕೈ-ಕೈ ಹಿಡಿದು ಮುಂಬೈ ವಿಮಾನ ನಿಲ್ಡಾಣಕ್ಕೆ ಆಗಮಿಸಿದ್ದಾರೆ. ಲಾಕ್‌ಡೌನ್‌ ಸಡಿಲಿಕೆ ನಂತರ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುತ್ತಾರೆ. ಇಬ್ಬರೂ ಒಟ್ಟಿಗೆ ಅಭಿನಯಿಸಿದ '83' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಸದ್ಯ 'ಫೈಟರ್', 'ಪಠಾಣ್' ಹಾಗೂ ಇನ್ನೂ ಹೆಸರಿಡದ ಎರಡು ಚಿತ್ರಗಳು ದೀಪಿಕಾ ಕೈಯಲ್ಲಿವೆ. ರಣವೀರ್ ಸಿಂಗ್ ಕೈಯಲ್ಲಿ 'ಸರ್ಕಸ್', 'ಸೂರ್ಯನಂಶಿ' ಇದೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?
ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?