
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷೆಯ ಮಾರ್ಟಿನ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಪೊಗರು ಸಿನಿಮಾ ಮೂಲಕ ಕೊನೆಯದಾಗಿ ಅಭಿಮಾನಿ ಮುಂದೆ ಬಂದಿದ್ದ ಧ್ರುವ ಸರ್ಜಾ ಇದೀಗ ಮಾರ್ಟಿನ್ ಮೂಲಕ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಅಂದಹಾಗೆ ಧ್ರುವ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಅಭಿಮಾನಿಗಳು ಸಹ ಕಾತರರಾಗಿದ್ದರು. ಇದೀಗ ಆ ಕುತೂಹಲಕ್ಕೆ ತೆರೆಬಿದ್ದಿ. ಇಂದು (ಏಪ್ರಿಲ್ 10) ರಾಮನವಮಿಯ ವಿಶೇಷವಾಗಿ ಸಿನಿಮಾತಂಡ ಮಾರ್ಟಿನ್ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.
ಅಂದಹಾಗೆ ಬಹುನಿರೀಕ್ಷೆಯ ಮಾರ್ಟಿನ್ ಸಿನಿಮಾ ಸೆಪ್ಟಂಬರ್ 30ಕ್ಕೆ ತೆರೆಗೆ ಬರುತ್ತಿದೆ. ಉದಯ್ ಕೆ ಮೆಹ್ತಾ ನಿರ್ಮಾಣದಲ್ಲಿ ಮೂಡಿಬಂದಿರುವ ಸಿನಿಮಾಗೆ ಎಪಿ ಅರ್ಜುನ್ ಆಕ್ಷನ್ ಕಟ್ ಹೇಳಿದ್ದಾರೆ. ಎಪಿ ಆರ್ಜುನ್ ಮತ್ತು ಧ್ರುವ ಕಾಂಬಿನೇಷನ್ ನ ಎರಡನೇ ಸಿನಿಮಾ ಇದಾಗಿದೆ. ದೊಡ್ಡ ಹಿಟ್ ನೀಡಿದ್ದ ಈ ಜೋಡಿ ಮೇಲೆ ನಿರೀಕ್ಷೆ ಕೂಡ ಹೆಚ್ಚಾಗಿದೆ. ಈಗಾಗಲೇ ಫಸ್ಟ್ ಲುಕ್ ಮೂಲಕ ಕುತೂಹಲ ಮೂಡಿಸಿರುವ ಮಾರ್ಟಿನ್ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ. ಅಂದಹಾಗೆ ಧ್ರುವ ನಟನೆಯ ಪೊಗರು ಸಿನಿಮಾ ಕೂಡ ಬೇರೆ ಬೇರೆ ಭಾಷೆಯಲ್ಲಿ ತೆರೆಕಂಡಿತ್ತು. ಇದೀಗ ಮಾರ್ಟಿನ್ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚಲು ಸಜ್ಜಾಗಿದ್ದಾರೆ.
ಆ್ಯಕ್ಷನ್ ಪ್ರಿನ್ಸ್ ಧ್ರುವ ಅಭಿಮಾನಿಗಳಿಗೆ ಕಾದಿದೆ ಬಿಗ್ ಸರ್ಪ್ರೈಸ್..!
ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಧ್ರುವ ಸರ್ಜಾ ಖರಾಬು ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಕಾಲೇಜ್ ಲವ್ ಸ್ಟೋರಿ ಜೊತೆ ಆಕ್ಷನ್ ಮನರಂಜನೆ ಸಿನಿಮಾವಾಗಿದೆಯಂತೆ. ಧ್ರುವ ಸರ್ಜಾ 'ಗ್ಯಾಂಗ್ ಸ್ಟರ್' ಪಾತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಸಹ ಮಾಡಿ ಮುಗಿಸಿದೆ ಸಿನಿಮಾತಂಡ. ಅಂದಹಾಗೆ ನಿರ್ಮಾಪಕ ಉದಯ್ ಕೆ ಮೆಹ್ತಾ ಜೊತೆ ಧ್ರುವ ಸರ್ಜಾ ದುಬಾರಿ ಸಿನಿಮಾ ಮಾಡಬೇಕಿತ್ತು. ಆದರೆ ಆ ಸಿನಿಮಾಗೂ ಮೊದಲು ಮಾರ್ಟಿನ್ ಮೂಲಕ ಬರ್ತಿದ್ದಾರೆ.
ಪ್ರಮೋದ್ ನಟನೆಯ ಬಾಂಡ್ ರವಿ ಮುಹೂರ್ತ; ಶುಭ ಹಾರೈಸಿದ ಧ್ರುವ ಸರ್ಜಾ, ವಿನೋದ್ ಪ್ರಭಾಕರ್
ಈ ಸಿನಿಮಾ ಜೊತೆಗೆ ಧ್ರುವ ಸರ್ಜಾ ಜೋಗಿ ಪ್ರೇಮ್ ಜೊತೆ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಸಿನಿಮಾದ ಮಾತುಕತೆ ಕೂಡ ಜೋರಾಗಿದೆ. ಈ ತಿಂಗಳ ಕೊನೆಯಲ್ಲಿ ಪ್ರೇಮ್ ನಿರ್ದೇಶನದ ಸಿನಿಮಾದ ಬಗ್ಗೆ ಅಪ್ ಡೇಟ್ ನೀಡುವುದಾಗಿ ಬಹಿರಂಗ ಪಡಿಸಿದ್ದರು. ಹಾಗಾಗಿ ಫಸ್ಟ್ ಲುಕ್ ಮತ್ತು ಟೈಟಲ್ ರಿವೀಲ್ ಮಾಡುವ ಸಾಧ್ಯತೆ ಇದ್ದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಒಟ್ನಲ್ಲಿ ಧ್ರುವ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದ್ದು ಬಿಡುಗಡೆಗೆ ಈಗಿನಿಂದನೆ ತಯಾರಿ ನಡೆಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.