ದಿಯಾ ಖ್ಯಾತಿಯ ಪೃಥ್ವಿ ಅಂಬಾರ್‌ಗೆ ಮಾತೃ ವಿಯೋಗ

Published : Jul 15, 2022, 11:10 PM ISTUpdated : Jul 15, 2022, 11:25 PM IST
ದಿಯಾ ಖ್ಯಾತಿಯ ಪೃಥ್ವಿ ಅಂಬಾರ್‌ಗೆ ಮಾತೃ ವಿಯೋಗ

ಸಾರಾಂಶ

ಮಂಗಳೂರು: ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರಿಗೆ ಮಾತೃ ವಿಯೋಗ ಉಂಟಾಗಿದೆ.

ಮಂಗಳೂರು: ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬಾರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸುಜಾತ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನೇತಾರರಾದ ಶ್ರೀ ವೀರಪ್ಪ ಅಂಬಾರ್ ಅವರ ಧರ್ಮಪತ್ನಿಯಾಗಿದ್ದು, ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇನ್ನು ಇವರ ಪುತ್ರ ಪೃಥ್ವಿ ಅಂಬಾರ್‌ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು,  ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಮಾಧುರಿಗೆ 'ನಿನ್ನನ್ನು ತಾಯಿಯಾಗಿ ನೋಡುತ್ತೇನೆ' ಎಂದಿದ್ದ ಎಂಎಫ್ ಹುಸೇನ್; ಆದ್ರೆ ಮುಂದೆ ಆಗಿದ್ದೇನು?
ಮದುವೆ ಮುರಿದುಬಿದ್ದ ಬಳಿಕ ಸ್ಮೃತಿ ಮಂಧಾನ-ಪಲಾಶ್ ಲೈಫ್‌ ಸ್ಟೈಲ್‌ನಲ್ಲಿ ಏನೆಲ್ಲಾ ಆಗೋಯ್ತು ನೋಡಿ...!