ಕಂಗನಾಗೆ ನಿಜವಾಗಿಯೂ ಪ್ರಧಾನಿಯಾಗೋ ಆಸೆ ಇದ್ಯಾ? ’ಎಮರ್ಜೆನ್ಸಿ’ ನಟಿಗೆ ಪ್ರಶ್ನೆ ಕೇಳಿದ್ರೆ ಹೀಗೆ ಹೇಳೋದಾ?

Published : Feb 11, 2024, 04:42 PM ISTUpdated : Feb 11, 2024, 04:44 PM IST
ಕಂಗನಾಗೆ ನಿಜವಾಗಿಯೂ ಪ್ರಧಾನಿಯಾಗೋ ಆಸೆ ಇದ್ಯಾ? ’ಎಮರ್ಜೆನ್ಸಿ’ ನಟಿಗೆ ಪ್ರಶ್ನೆ ಕೇಳಿದ್ರೆ ಹೀಗೆ ಹೇಳೋದಾ?

ಸಾರಾಂಶ

ಎಮರ್ಜೆನ್ಸಿ ಚಿತ್ರದಲ್ಲಿ ಇಂದಿರಾಗಾಂಧಿಯಾಗಿ ಕಾಣಿಸಿಕೊಂಡಿರುವ ನಡುವೆಯೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರೋ ಕಂಗನಾಗೆ ಪ್ರಧಾನಿಯಾಗುವ ಆಸೆ ಇದ್ಯಾ? ನಟಿ ಹೇಳಿದ್ದೇನು?  

ಮನಸ್ಸಿಗೆ ಅನ್ನಿಸಿದ್ದನ್ನು ನೇರಾನೇರವಾಗಿ ಹೇಳಿ, ಯಾರಿಗೂ ಹೆದರದೇ ಧೈರ್ಯದಿಂದ ಮುನ್ನುಗ್ಗುತ್ತಲೇ ಕಾಂಟ್ರವರ್ಸಿ ಕ್ವೀನ್​ ಎಂದೇ ಹೆಸರು ಪಡೆದಿರುವವರು ಬಾಲಿವುಡ್​ ನಟಿ ಕಂಗನಾ ರಣಾವತ್​. ಸದ್ಯ ಯಾಕೋ ಬಾಲಿವುಡ್​ನಲ್ಲಿ ಅವರ ಚಿತ್ರಗಳು ಹಿಟ್​ ಆಗುತ್ತಲೇ ಇಲ್ಲ.  ಅವರ ನಸೀಬು ಸದ್ಯ ಸರಿ ಇದ್ದಂತಿಲ್ಲ. ಒಂದರ ಮೇಲೊಂದು ಫ್ಲಾಪ್‌ ಚಿತ್ರಗಳನ್ನು ನೀಡುತ್ತಿದ್ದಾರೆ. ಎಷ್ಟೇ ಕಷ್ಟಪಟ್ಟು, ಶ್ರಮವಹಿಸಿ, ಉತ್ತಮ ನಟನೆ ಮಾಡಿದ್ದರೂ ಇವರ ಚಿತ್ರಗಳು ಶಾಕ್‌ ಮೇಲೆ ಶಾಕ್‌ ನೀಡುತ್ತಿವೆ ನಟಿಯ ಕೈಯಲ್ಲಿ ಎಮರ್ಜೆನ್ಸಿ ಚಿತ್ರವಿದೆ.  ಅಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಪಾತ್ರ ನಿರ್ವಹಿಸಿದ್ದಾರೆ.  1975 ರಲ್ಲಿ ಭಾರತದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಘಟನೆಗಳನ್ನು ಆಧರಿಸಿದ ಚಿತ್ರವಿದು. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜೀವನದ ಸುತ್ತ ಸುತ್ತುತ್ತದೆ ಈ ಸಿನಿಮಾ. 1975ರಲ್ಲಿ ತುರ್ತು ಪರಿಸ್ಥಿತಿ ( Emergency) ಘೋಷಣೆ ಮಾಡಿದಾಗ ದೇಶದಲ್ಲಿ ಆಗಿರುವ ಅಲ್ಲೋಲ ಕಲ್ಲೋಲಗಳೇನು? ದೇಶ ಯಾವ ಸ್ಥಿತಿಗೆ ತಲುಪಿತ್ತು ಈ ಕುರಿತು ಎಳೆಎಳೆಯಾಗಿ ಚಿತ್ರ ಬಿಚ್ಚಿಟ್ಟಿರುವುದಾಗಿ ನಟಿ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕಂಗನಾ ಅವರು ಇಂದಿರಾ ಗಾಂಧಿಯ ಪಾತ್ರ ಮಾಡಿದ್ದಾರೆ. ತುರ್ತು ಪರಿಸ್ಥಿತಿಯು ನಮ್ಮ ದೇಶದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕರಾಳ ಅಧ್ಯಾಯಗಳಲ್ಲಿ ಒಂದಾಗಿದೆ ಎಂದು ಈ ಹಿಂದೆ ನಟಿ ಹೇಳಿದ್ದರು. 

ನವೆಂಬರ್ 24, 2023 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಇದೀಗ ಬರುವ ಜೂನ್‌ 14ರಂದು ಚಿತ್ರ ರಿಲೀಸ್‌ ಆಗಲಿದೆ ಎನ್ನಲಾಗಿದೆ. ಕಂಗನಾ ಥೇಟ್​ ಇಂದಿರಾ ಗಾಂಧಿಯವರಂತೆ ಮೇಕಪ್​ ಮಾಡಿಕೊಂಡು, ಅವರಂತೆಯೇ   ಟ್ರೇಲರ್​ ಕಳೆದ ವರ್ಷವೇ ಬಿಡುಗಡೆಯಾಗಿತ್ತು. ಕಂಗನಾ ಅವರ ಈ ನಟನೆಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದರ ಮಧ್ಯೆಯೇ ನಟಿ  ರಾಜಕೀಯಕ್ಕೆ ಎಂಟ್ರಿ ಕೊಡುವುದು ಕನ್​ಫರ್ಮ್​ ಆಗಿದೆ. ಈ ಬಗ್ಗೆ ಕಳೆದೊಂದು ವರ್ಷದಿಂದ ಸಾಕಷ್ಟು ಚರ್ಚೆಯಾಗುತ್ತಿದ್ದರೂ ಇದೀಗ ಕಂಗನಾ ರಾಜಕೀಯದಲ್ಲಿ ಗುರುತಿಸಿ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುವುದು ದಿಟವಾಗಿದೆ.

ಇಂದಿರಾಗಾಂಧಿಯಾಗಿ ಕಂಗನಾ ರಣಾವತ್- ಅಯೋಧ್ಯೆ ಭೇಟಿ ಬೆನ್ನಲ್ಲೇ ಎಮರ್ಜೆನ್ಸಿ ಬಿಡುಗಡೆಗೆ ಡೇಟ್‌ ಫಿಕ್ಸ್‌!

ತೇಜಸ್ ಚಿತ್ರದ ಬಿಡುಗಡೆಯ ನಂತರ  ಗುಜರಾತ್‌ನ  ದ್ವಾರಕಾದ ಜಗತ್ ಮಂದಿರಕ್ಕೆ ತೆರಳಿದ್ದ ನಟಿ  ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ್ದರು. ಮುಂದಿನ ದಿನಗಳಲ್ಲಿ ಶ್ರೀಕೃಷ್ಣನ ಆಶೀರ್ವಾದವಿದ್ದರೆ ನಾನೂ ಕೂಡ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದಿದ್ದರು. ಬಳಿಕ ನಟಿ  ಹಿಮಾಚಲ ಪ್ರದೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಭೇಟಿ ನೀಡಿದ್ದರು. ಈ ಸಭೆಯ ನಂತರ, ಆಕೆಯ ತಂದೆ ಅಮರ್‌ದೀಪ್ ರಣಾವತ್​ ಸ್ವತಃ ಇದನ್ನು ಖಚಿತಪಡಿಸಿದ್ದರು. 2024 ರ ಲೋಕಸಭೆ ಚುನಾವಣೆಯಲ್ಲಿ ಕಂಗನಾ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು.
  
ರಾಜಕೀಯಕ್ಕೆ ಹೇಳಿ ಮಾಡಿಸಿದಂತಿರುವ ಕಂಗನಾ, ಇದೀಗ ಇಂದಿರಾಗಾಂಧಿ ರೋಲ್‌ನಲ್ಲಿ ಮಿಂಚುತ್ತಿರುವ ನಡುವೆಯೇ, ಅವರಿಗೆ ಪ್ರಶ್ನೆಯೊಂದು ಎದರುರಾಗಿದೆ. ಈ ಪ್ರಶ್ನೆಯನ್ನು  ತೆಲುಗು ಚಿತ್ರ ರಜಾಕರ್ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕೇಳಲಾಗಿದೆ.  ‘ನೀವು ದೇಶದ ಪ್ರಧಾನಿಯಾಗಲು ಇಷ್ಟಪಡುತ್ತೀರಾ?’ ಎಂಬ ಪತ್ರಕರ್ತರೊಬ್ಬರು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ನಟಿ ಜೋರಾಗಿ ನಗುತ್ತಲೇ,  ಉತ್ತರ ನೀಡಿದ್ದಾರೆ. ಇತ್ತೀಚೆಗಷ್ಟೇ  ಎಮರ್ಜೆನ್ಸಿ ಸಿನಿಮಾದಲ್ಲಿ ಇಂದಿರಾಗಾಂಧಿ ರೋಲ್‌ ಮಾಡಿದ್ದೇನೆ. ಇನ್ನೇನು ಅದು ಬಿಡುಗಡೆಯಾಗಲಿದೆ.  ಅದನ್ನು ನೋಡಿದ ನಂತರ ನಾನು ಪ್ರಧಾನಿಯಾಗುವುದು ಯಾರಿಗೂ ಇಷ್ಟವಾಗುವುದಿಲ್ಲ ಎಂದು ತಮಾಷೆಯಾಗಿ ಹೇಳುತ್ತಲೇ ಜೋರಾಗಿ ನಕ್ಕಿದ್ದಾರೆ.

ನಟಿ ಕಂಗನಾ ರಣಾವತ್​ ಲೋಕಸಭೆಗೆ ಸ್ಪರ್ಧೆ ಕನ್​ಫರ್ಮ್​: ಯಾವ ಕ್ಷೇತ್ರ, ಯಾವ ಪಕ್ಷ? ಇಲ್ಲಿದೆ ಡಿಟೇಲ್ಸ್​..

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

3 idiots 2 : ಬಾಕ್ಸ್ ಆಫೀಸ್ ನಲ್ಲಿ ಸುನಾಮಿ, ಬರ್ತಿದೆ 3 ಈಡಿಯಟ್ಸ್ ಸೀಕ್ವೆಲ್
ಚಿರಂಜೀವಿ ನಂತರ ಜೂ.ಎನ್‌ಟಿಆರ್ ಟಾರ್ಗೆಟ್? ಸಂಚಲನ ಮೂಡಿಸಿದ ನಿರ್ಧಾರ, ಇನ್ಮುಂದೆ ಹೀಗೆ ಮಾಡಿದ್ರೆ ಕಷ್ಟ!