ಅಕ್ರಮ ಹಣ ವರ್ಗಾವಣೆ ಪ್ರಕರಣ; ಜಾಕ್ವೆಲಿನ್ ಫರ್ನಾಂಡಿಸ್ ಅವರ 7 ಕೋಟಿ ಮೌಲ್ಯದ ಆಸ್ತಿ ಜಪ್ತಿ

Published : Apr 30, 2022, 03:43 PM ISTUpdated : Apr 30, 2022, 04:02 PM IST
ಅಕ್ರಮ ಹಣ ವರ್ಗಾವಣೆ ಪ್ರಕರಣ; ಜಾಕ್ವೆಲಿನ್ ಫರ್ನಾಂಡಿಸ್ ಅವರ 7 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಸಾರಾಂಶ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟಿ ಜಾಕ್ವೆಲಿನ್ ಫರ್ನಾಂಡಿಸ್(Jacqueline Fernandez ) ಅವರಿಗೆ ಅವರಿಗೆ ಸುಕೇಶ್ ಚಂದ್ರಶೇಖರ್ ನೀಡಿದ್ದ 7 ಕೋಟಿ ಮೌಲ್ಯದ ಉಡುಗೊರೆ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟಿ ಜಾಕ್ವೆಲಿನ್ ಫರ್ನಾಂಡಿಸ್(Jacqueline Fernandez ) ಅವರಿಗೆ ಅವರಿಗೆ ಸುಕೇಶ್ ಚಂದ್ರಶೇಖರ್ ನೀಡಿದ್ದ 7 ಕೋಟಿ ಮೌಲ್ಯದ ಉಡುಗೊರೆ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ವಂಚನೆ ಆರೋಪ ಎದುರಿಸುತ್ತಿದ್ದು ಇಂದು ಶನಿವಾರ (ಏಪ್ರಿಲ್ 30) ಇಡಿ ಆಸ್ತಿ ಜಪ್ತಿ ಮಾಡಿದೆ. ನಟಿಗೆ ನೀಡಿದ್ದ ಉಡುಗೊರೆಗಳು ಮತ್ತು ಆಸ್ತಿ ಅಪರಾಧದಿಂದ ಬಂದಿದ್ದ ಆದಾಯ ಎಂದು ಇಡಿ ಹೇಳಿಕೆ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2019ರಲ್ಲಿ ಜೈಲು ಪಾಲಾಗಿದ್ದ ದೆಹಲಿ ಮೂಲದ ಉದ್ಯಮಿ, ರಾನ್ ಬಾಕ್ಸಿಯ ಮಾಜಿ ಮಾಲಿಕರಾಗಿದ್ದ ಶಿವಿಂದರ್ ಸಿಂಗ್ ಅವರ ಕುಟುಂಬದಿಂದ ಅಕ್ರಮವಾಗಿ ಪಡೆದ 200 ಕೋಟಿ ರೂಪಾಯಿಯಲ್ಲಿ 5.71 ಕೋಟಿ ರೂಪಾಯಿ ಬೆಲೆಬಾಳುವ ಉಡುಗೊರೆಯನ್ನು ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪ ಮಾಡಿದೆ.

ಶಿವಂದರ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ನೀಡಿದ ದೂರಿನ ಮೇರೆಗೆ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದ್ದು ಪತಿಯ ಬಿಡುಗಡೆಗೆ ಸಹಾಯಮಾಡುವುದಾಗಿ ಹೇಳಿ ಮತ್ತು ತನ್ನಿಂದ ಹಣ ಪಡೆದಿದ್ದಾರೆ ಎಂದು ಅದಿತಿ ಆರೋಪ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂದಿಸಿದಂತೆ ನಟಿಯರಾದ ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ನೋರಾ ಫತೇಹಿ ಅವರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. 2021ಡಿಸೆಂಬರ್ ನಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರ ಮುಂದೆ ಇಡಿ ಮೊದಲ ಚಾರ್ಜ್ ಶೀಟ್ ಸಲ್ಲಿಸಿತ್ತು. ಡಿಸೆಂಬರ್ ನಲ್ಲಿ ಸುಕೇಶ್ ಚಂದ್ರಶೇಖರ್ ಅವರ ಆಪ್ತ ಪಿಂಕಿ ಇರಾನಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. 2022 ಫೆಬ್ರವರಿಯಲ್ಲಿ ಈತನ ವಿರುದ್ಧ್ ಇಡಿ ಚಾರ್ಜ್ ಶೀಟ್ ಸಲ್ಲಿಸಿತ್ತು.

ಸುಕೇಶ್‌ ಜೊತೆ ಫೋಟೋ ಲೀಕ್‌ ಬಳಿಕ ಮಾನಸಿಕ ಆಘಾತ: ನಟಿ ಜಾಕ್ವೆಲಿನ್‌

ಪಿಂಕಿ ಇರಾನಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಉಡುಗೊರೆಗಳನ್ನು ಆಯ್ಕೆ ಮಾಡುತ್ತಿದ್ದರು. ಬಳಿಕ ಸುಕೇಶ್ ಹಣ ಪಾವತಿಸಿದ ನಂತರ ಅದನ್ನು ತಲುಪಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಕೊಟ್ಟಿದ್ದು Love Gift ಜಾಕ್ವೆಲಿನ್‌‌ಗೇಕೆ ಆರೋಪಗಳ ಸುರಿಮಳೆ?

ಸುಕೇಶ್ ಜೊತೆ ಜಾಕ್ವೆಲಿನ್ ಹೆಸರು ಕೇಳುಬಂದ ಬೆನ್ನಲ್ಲೇ ಸುಕೇಶ್ ಚಂದ್ರಶೇಖರ್ ಜೊತೆಗೆದ್ದ ಜಾಕ್ವೆಲಿನ್ ಫರ್ನಾಂಡಿಸ್ ಅವರ ಅತ್ಯಾಪ್ತವಾಗಿದ್ದ ಫೋಟೋಗಳು ಲೀಕ್ ಆಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಜಾಕ್ವೆಲಿನ್ ಫರ್ನಾಂಡಿಸ್ ಬಾಲಿವುಡ್ ನ ಸ್ಟಾರ್ ನಟಿಯಾಗಿದ್ದಾರೆ. ಅನೇಕ ಸಿನಿಮಾಗಳಲ್ಲಿ ನಟಿಸಿರುವ ಜಾಕ್ವೆಲಿನ್ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಶ್ರೀಲಂಕಾ ಮೂಲದ ನಟಿ ಜಾಕ್ವೆಲಿನ್ ಕನ್ನಡ ಸಿನಿಮಾದಲ್ಲೂ ನಟಿಸಿದ್ದಾರೆ. ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದಲ್ಲಿ ಜಾಕ್ವೆಲಿನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.   

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ರೀನಾ, ಕಿರಣ್ & ಲವರ್ ಗೌರಿ.. 'ನಾವೆಲ್ಲರೂ ಒಂದೇ ಫ್ಯಾಮಿಲಿ' ಎಂದ ಅಮೀರ್ ಖಾನ್; ಒಳಗೊಳಗೇ ನಕ್ಕ ನೆಟ್ಟಿಗರು!
ಆರ್ಯನ್ ಖಾನ್‌ಗೆ ಝೈದ್ ಖಾನ್ ಸಪೋರ್ಟ್; ಆದ್ರೂ ಪಬ್ಲಿಕ್‌ ಪ್ಲೇಸ್‌ನಲ್ಲಿ 'ಮಿಡ್ಲ್ ಫಿಂಗರ್' ಎತ್ತಿದ್ದು ತಪ್ಪು ಅಂತಿರೋ ನೆಟ್ಟಿಗರು!