'KGF 2' ಚಿತ್ರದಲ್ಲಿ ಅನಂತ್ ನಾಗ್ ಯಾಕಿಲ್ಲ? ಅಭಿಮಾನಿಗಳ ಪ್ರಶ್ನೆ

Published : Mar 28, 2022, 02:34 PM ISTUpdated : Mar 28, 2022, 03:52 PM IST
'KGF 2' ಚಿತ್ರದಲ್ಲಿ ಅನಂತ್ ನಾಗ್ ಯಾಕಿಲ್ಲ? ಅಭಿಮಾನಿಗಳ ಪ್ರಶ್ನೆ

ಸಾರಾಂಶ

ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದಲ್ಲಿ ಅನಂತ್ ನಾಗ್ ಯಾಕಿಲ್ಲ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಪಾರ್ಟ್-1ರಲ್ಲಿ ಅನಂತ್ ನಾಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 

ಇಡೀ ಭಾರತೀಯ ಸಿನಿಮಾರಂಗವೇ ಎದುರು ನೋಡುತ್ತಿರುವ ಕೆಜಿಎಫ್-2(KGF-2) ಸಿನಿಮಾ ಟ್ರೈಲರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಮಾರ್ಚ್ 27ರಂದು ಬೆಂಗಳೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕೆಜಿಎಫ್-2 ಲಾಂಚ್ ಆಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್(Shivaraj Kumar) ಕನ್ನಡ ಟ್ರೈಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಾಹಾರೈಸಿದರು.

ಕೆಜಿಎಫ್-2 ಟ್ರೈಲರ್(KGF 2 Trailer) ನಿರೀಕ್ಷೆಯಂತೆ ಅದ್ದೂರಿಯಾಗಿ ಮೂಡಿಬಂದಿದೆ. ರಾಕಿಂಗ್ ಸ್ಟಾರ್ ಯಶ್(Yash) ಮತ್ತು ಸಂಜಯ್ ದತ್(Sanjay Dutt) ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ರವೀನಾ ಟಂಡನ್ ಪಾತ್ರ ಮತ್ತಷ್ಟು ಕುತೂಹಲ ಮೂಡಿಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಜಯ್ ದತ್ ಫಸ್ಟ್ ಲುಕ್ ಭಾರಿ ವೈರಲ್ ಆಗಿತ್ತು. ಬಳಿಕ ಯಾವುದೇ ಲುಕ್ ಅಥವಾ ವಿಡಿಯೋ ರಿವೀಲ್ ಆಗಿರಲಿಲ್ಲ. ಇದೀಗ ಟ್ರೈಲರ್ ನಲ್ಲಿ ಸಂಜಯ್ ದತ್ ಮುಖ ದರ್ಶನವಾಗಿದೆ. ಅಭಿಮಾನಿಗಳು ಟ್ರೈಲರ್ ನೋಡಿ ಸಖಥ್ ಥ್ರಿಲ್ ಆಗಿದ್ದಾರೆ. ಆದರೆ ಇನ್ನು ಅನೇಕರು ಹಿರಿಯ ನಟ ಅನಂತ್ ನಾಗ್ ಎಲ್ಲಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಕೆಜಿಎಫ್ ಪಾರ್ಟ್-1ರಲ್ಲಿ ಅನಂತ್ ನಾಗ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಪಾರ್ಟ್ ನಲ್ಲಿ ಅನಂತ್ ನಾಗ್ ಇಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಅನಂತ್ ನಾಗ್ ಸಿನಿಮಾದಿಂದ ಔಟ್ ಆಗಿದ್ದಾರೆ. ಅವರ ಜಾಗಕ್ಕೆ ಪ್ರಕಾಶ್ ರಾಜ್ ಎಂಟ್ರಿ ಕೊಟ್ಟಿದ್ದಾರೆ ಎನ್ನುವ ಸುದ್ದಿ ಈ ಹಿಂದೆಯೇ ವೈರಲ್ ಆಗಿತ್ತು. ಆಗಲು ಅನೇಕರು ಆಕ್ರೋಶ ಹೊರಹಾಕಿದ್ದರು. ಸದ್ಯ ಬಿಡುಗಡೆಯಾಗಿರುವ ಟ್ರೈಲರ್ ನಲ್ಲೂ ಅನಂತ್ ನಾಗ್ ಕಾಣಿಸಿಕೊಂಡಿಲ್ಲ. ಹಾಗಾಗಿ ಸಿನಿಮಾದಿಂದ ಅನಂತ್ ನಾಗ್ ಹೊರನಡೆದಿರುವುದು ಬಹುತೇಕ ಖಚಿತವಾದಂತಿದೆ. ಈ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ.

KGF 2; ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪುನೀತ್ ಮನೆಗೆ ಭೇಟಿ ನೀಡಿದ ಸಂಜಯ್ ದತ್

ಪ್ರಶಾಂತ್ ನೀಲ್‌ ನಿರ್ದೇಶನದ 'ಕೆಜಿಎಫ್ ಚಾಪ್ಟರ್ 1'ರಲ್ಲಿ ಅನಂತ್ ನಾಗ್, ಆನಂದ್ ಇಂಗಳಗಿ ಎಂಬ ಪತ್ರಕರ್ತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಾಕಿ ಭಾಯ್‌ನ ಇಡೀ ವೃತ್ತಾಂತವನ್ನು ಹೇಳುವುದೇ ಇದೇ ಇಂಗಳಗಿ. 'ಕೆಜಿಎಫ್ ಚಾಪ್ಟರ್ 1'ರಲ್ಲಿ ಅನಂತ್ ನಾಗ್-ಮಾಳವಿಕಾ ಅವಿನಾಶ್‌ ಕಾಂಬಿನೇಷನ್ ನ ದೃಶ್ಯಗಳು ಪ್ರೇಕ್ಷಕರಿಗೆ ತುಂಬಾ ಇಷ್ಟವಾಗಿತ್ತು. ಆ ದೃಶ್ಯಗಳು ಸಿಕ್ಕಾಪಟ್ಟೆ ವೈರಲ್ ಸಹ ಆಗಿತ್ತು. ಪಾರ್ಟ್ 2ನಲ್ಲಿ ಅನಂತ್ ನಾಗ್ ಅವರೇ ಇಲ್ಲ ಎಂದು ಕೇಳಿ ಅಭಿಮಾನಿಗಳು ಬೇಸರಗೊಂಡಿದ್ದಾರೆ.

ಯಶ್ v/s ವಿಜಯ್; ಬಾಕ್ಸ್ ಆಫೀಸ್ ನಲ್ಲಿ ಮೆಗಾ ವಾರ್

ಈ ಬಗ್ಗೆ ಚಿತ್ರತಂಡ ಈ ಹಿಂದೆಯೇ ಪ್ರತಿಕ್ರಿಯೆ ನೀಡಿತ್ತು. 'ಅನಂತ್ ನಾಗ್ ಅವರ ಕೆಲವು ದೃಶ್ಯಗಳ ಚಿತ್ರೀಕರಣ ಬಾಕಿ ಇತ್ತು, ಅವರು ಚಿತ್ರದಿಂದ ಹೊರಗೆ ಬಂದಿಲ್ಲ. ಅವರು ಚಿತ್ರದ ಭಾಗವಾಗಿಯೇ ಮುಂದುವರಿಯಲಿದ್ದಾರೆ ಎಂದು ಹೇಳಿದ್ದರು.' ಆದರೀಗ ಟ್ರೈಲರ್ ಬಿಡುಗಡೆ ಬಳಿಕ ಅನಂತ್ ನಾಗ್ ಇಲ್ಲ ಎನ್ನುವುದು ಬಹುತೇಕ ಖಚಿತವಾಗಿದೆ. ಯಾಕೆಂದರೆ ಬಿಡುಗಡೆಯಾದ ಟ್ರೈಲರ್ ನಲ್ಲೂ ಅನಂತ್ ನಾಗ್ ಕಾಸಿಕೊಂಡಿಲ್ಲ, ಹಾಗಾಗಿ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ.

ಕೆಲವು ಮೂಲಗಳ ಪ್ರಕಾರ ಅನಂತ್ ನಾಗ್ ಸಿನಿಮಾದಿಂದ ಹೊರನಡೆಯಲು ಪ್ರಮುಖ ಕಾರಣ ಸಂಭಾವನೆ ಎನ್ನಲಾಗುತ್ತಿದೆ. ಅನಂತ್ ನಾಗ್ ಅತೀ ಹೆಚ್ಚು ಸಂಭಾವನೆ ಕೇಳಿದ್ದರಿಂದ ಸಿನಿಮಾದಿಂದ ಹೊರಗಿಡಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಬಗ್ಗೆ ಸಿನಿಮಾತಂಡದ ಕಡೆಯಿಂದ ಅಥವಾ ಅನಂತ್ ನಾಗ್ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಅಭಿಮಾನಿಗಳು ಮಾತ್ರ ಕೆಜಿಎಫ್-2ನಲ್ಲಿ ಅನಂತ್ ನಾಗ್ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಅಲ್ಲದೆ ಅವರನ್ನು ಸಿನಿಮಾದಿಂದ ಹೊರಗಿಟ್ಟ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?