ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಹೊಟ್ಟೆಯ ಮೇಲೆ ಸುಟ್ಟಗಾಯಗಳಾಗಿದ್ದರೂ ಎದೆಗುಂದದೇ ಮಾರ್ಜಾಲ ನಡಿಗೆ ಮಾಡಿದ್ದಾರೆ. ಇದರಿಂದ ಫ್ಯಾನ್ಸ್ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ.
ಬಾಲಿವುಡ್ ನಟ ಸೈಫ್ ಅಲಿ ಖಾನ್ ಪುತ್ರಿ, ನಟಿ ಸಾರಾ ಅಲಿ ಖಾನ್ ಶೀಘ್ರದಲ್ಲೇ ಮರ್ಡರ್ ಮುಬಾರಕ್ ಮತ್ತು ಏ ವತನ್ ಮೇರೆ ವತನ್ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಈ ಸಿನಿಮಾಗಳ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕೆಲ ದಿನಗಳ ಹಿಂದೇ ದೊಡ್ಡ ಅವಘಡ ಸಂಭವಿಸಿತ್ತು. ಅದೇನೆಂದರೆ, ಚಿತ್ರಗಳ ಪ್ರಚಾರದ ಸಮಯದಲ್ಲಿ ಸಂಭವಿಸಿದ ಅವಘಡದಲ್ಲಿ ನಟಿಗೆ ಸುಟ್ಟು ಗಾಯಗಳಾಗಿವೆ. ಈ ಕುರಿತು ಖುದ್ದು ನಟಿ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಹೊಟ್ಟೆಯ ಸಮೀಪ ಗಾಯವಾಗಿದ್ದನ್ನು ಅವರು ತೋರಿಸಿದ್ದರು. ನಾನು ಏಕಕಾಲದಲ್ಲಿ ಎರಡು ಚಿತ್ರಗಳನ್ನು ಪ್ರಚಾರ ಮಾಡುತ್ತಿದ್ದೇನೆ ಮತ್ತು ಈ ಸಮಯದಲ್ಲಿ ನನ್ನ ಹೊಟ್ಟೆ ಉರಿಯುತ್ತಿದೆ ಎಂದು ವಿಡಿಯೋದಲ್ಲಿ ಹೇಳಿದ್ದರು. ಪ್ರಚಾರದ ಸಮಯದಲ್ಲಿ ಸಂಭವಿಸಿದ ಅವಘಡದಲ್ಲಿ ಹೀಗಾಯಿತು ಎಂದು ಹೇಳಿದ್ದರು.
ಇದೀಗ ಇದೇ ಸುಟ್ಟಗಾಯವನ್ನು ತೋರಿಸುತ್ತಲೇ ನಟಿ ರ‍್ಯಾಂಪ್ ವಾಕ್ ಮಾಡಿದ್ದು, ಸಕತ್ ಸದ್ದು ಮಾಡುತ್ತಿದ್ದರು, ಬೂದು ಬಣ್ಣದ ಲೆಹೆಂಗಾ ಧರಿಸಿರೋ ನಟಿ, ಆತ್ಮವಿಶ್ವಾಸದಿಂದ ರ‍್ಯಾಂಪ್ ವಾಕ್ ಮಾಡಿರುವುದಕ್ಕೆ ಶ್ಲಾಘನೆಗಳ ಮಹಾಪೂರವೇ ಹರಿದುಬರುತ್ತಿದೆ. ಲ್ಯಾಕ್ಮೆ ಫ್ಯಾಶನ್ ವೀಕ್ 2024ರಲ್ಲಿ ಇವರು ಬೆಕ್ಕಿನ ನಡಿಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸೈನರ್ ವರುಣ್ ಚಕ್ಕಿಲಂ ಅವರ ಶೋಸ್ಟಾಪರ್ ಆಗಿ, ಸಾಂಪ್ರದಾಯಿಕ ಉಡುಪಿನಲ್ಲಿ ನಟಿ ಗಮನ ಸೆಳೆದಿದ್ದರೂ ಅಲ್ಲಿ ಹೊಟ್ಟೆಯ ಭಾಗದಲ್ಲಿ ಆಗಿರುವ ಸುಟ್ಟ ಗಾಯ ಎಲ್ಲರ ಗಮನ ಸೆಳೆಯುತ್ತಿದೆ. ನಟಿಯ ಈ ಕಾನ್ಫಿಡೆನ್ಸ್ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇದೇ 20ರಂದು ಉರ್ಫಿಯಿಂದ ಎಲ್ಲರಿಗೂ ಭರ್ಜರಿ ಉಡುಗೊರೆ! ವಿಡಿಯೋ ವೈರಲ್- ಬಿಸಿಬಿಸಿ ಚರ್ಚೆ ಶುರು!
ಸಾರಾ ಅಲಿ ಖಾನ್ ಅವರು ಅನುರಾಗ್ ಬಸು ಅವರ ʻಮೆಟ್ರೋ ಇನ್ ದಿನೊʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದಿತ್ಯ ರಾಯ್ ಕಪೂರ್, ಕೊಂಕಣ ಸೆಂಶರ್ಮಾ, ಪಂಕಜ್ ತ್ರಿಪಾಠಿ, ಫಾತಿಮಾ ಸನಾ ಶೇಖ್, ಅನುಪಮ್ ಖೇರ್ ಮತ್ತು ಅಲಿ ಫಜಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಂದಹಾಗೆ, ಸೈಫ್ ಅಲಿ ಖಾನ್ (Saif Ali Khan) ಅವರ ಎರಡೂ ಪತ್ನಿಯರು ಹಿಂದೂಗಳೇ. ಮೊದಲನೆಯ ಪತ್ನಿ ಅಮೃತಾ ಸಿಂಗ್. ಅವರ ಮಗಳು ಸಾರಾ ಅಲಿ ಖಾನ್. ಸೈಫ್ ಅವರ ಎರಡನೆಯ ಪತ್ನಿ ಕರೀನಾ ಕಪೂರ್. ಈ ಜೋಡಿಗೆ ಇಬ್ಬರು ಮಕ್ಕಳು.
ಸಾರಾ ಅಲಿ ಖಾನ್ ಸದಾ ಸುದ್ದಿಯಲ್ಲಿ ಇರುವುದು ಹಿಂದೂ ದೇವಾಲಯಗಳಿಗೆ ಭೇಟಿ ಕೊಡುವುದರಿಂದ. ಕೆಲ ತಿಂಗಳ ಹಿಂದೆ ಇವರ ಅಮರನಾಥ ಯಾತ್ರೆ ಕೈಗೊಂಡಿದ್ದರು. ‘ಹರ ಹರ ಮಹದೇವ’ ಎಂದು ಜೈಕಾರ ಕೂಗಿದ್ದರು, ಈ ಮಾತನ್ನು ಕೇಳಿ ಕೆಲವರು ಕಿಡಿ ಕಾರುತ್ತಿದ್ದರೆ, ಇನ್ನು ಕೆಲವರು ನೀವೂ ಹಿಂದೂ ಧರ್ಮಕ್ಕೆ ಬಂದು ಬಿಡಿ ಎಂದಿದ್ದರು. ಈಕೆಯ ಅಮ್ಮ ಕೂಡ ಹಿಂದೂ ಎನ್ನುವುದನ್ನು ಮರೆಯಬೇಡಿ ಎಂದಿದ್ದರು, ಇನ್ನು ಕೆಲವರು ಹಾಗೆ ನೋಡಿದರೆ ಹೆಚ್ಚಿನ ಮುಸ್ಲಿಂ ಜನರ ಪೂರ್ವಜರು ಹಿಂದೂಗಳೇ ಆಗಿರುತ್ತಾರೆ. ಆದ್ದರಿಂದ ಹಿಂದೂವಂಥ ಪವಿತ್ರ ಧರ್ಮವನ್ನು ನಿಮ್ಮದಾಗಿಸಿಕೊಳ್ಳಿ ಎಂದಿದ್ದರು. ಸಾರಾ ಅಲಿ ಖಾನ್ ಅವರು ಹಿಂದೂ ದೇವಾಲಯಕ್ಕೆ ಭೇಟಿ ನೀಡುವುದು ಸಿನಿಮಾದ ಪ್ರಚಾರಕ್ಕಾಗಿ ಎಂದು ಕೆಲವರು ಟೀಕೆ ವ್ಯಕ್ತಪಡಿಸಿದ್ದೂ ಇದೆ. ಆದರೆ ಅಮರನಾಥ ಯಾತ್ರೆಗೆ ಹೋದ ಮೇಲೆ ಹಲವರು ಬಾಯಿ ಮುಚ್ಚಿದ್ದಾರೆ. ಅಂದಹಾಗೆ ವಿಕ್ಕಿ ಕೌಶಲ್ ಅವರ ಜೊತೆ ನಟಿ ಸಾರಾ ಅಲಿ ಖಾನ್ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ರಿಲೀಸ್ ಆಯಿತು. ಈ ಸಿನಿಮಾ ಸಕತ್ ಹಿಟ್ ಆಗಿದೆ. 87 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.
ಬೆಂಗಳೂರಿನಲ್ಲಿಯೇ ನಟಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೆರಿಗೆ? ಏನಿದು ಹೊಸ ವಿಷ್ಯ?