ಮೆಗಾಸ್ಟಾರ್ ಚಿರಂಜೀವಿ ಸಿನಿಮಾದ 25 ಕೋಟಿ ವೆಚ್ಚದ ಸೆಟ್ ಸುಟ್ಟು ಭಸ್ಮ

Published : Feb 28, 2023, 05:52 PM IST
ಮೆಗಾಸ್ಟಾರ್ ಚಿರಂಜೀವಿ ಸಿನಿಮಾದ 25 ಕೋಟಿ ವೆಚ್ಚದ ಸೆಟ್ ಸುಟ್ಟು ಭಸ್ಮ

ಸಾರಾಂಶ

ಮೆಗಾಸ್ಟಾರ್ ಚಿರಂಜೀವಿ ಮತ್ತು ರಾಮ್ ಚರಣ್ ನಟಿಸಿದ್ದ ಆಚಾರ್ಯ ಸಿನಿಮಾದ ಅದ್ದೂರಿ ಸೆಟ್ ಬೆಂಕಿಗೆ ಆಹುತಿ ಆಗಿದೆ. 

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದ ಸೆಟ್ ಸುಟ್ಟು ಭಸ್ಮವಾಗಿದೆ. ರಾಮ್ ಚರಣ್ ನಿರ್ಮಾಣದಲ್ಲಿ ಮೂಡಿಬಂದಿದ್ದ ಆಚಾರ್ಯ ಸಿನಿಮಾದಲ್ಲಿ ಅಪ್ಪ ಮಗ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗಿದ್ದು. ಚಿತ್ರಕ್ಕೆ ಕೋಟಿ ಕೋಟಿ ಬೆಲೆಯ ಸೆಟ್ ನಿರ್ಮಾಣ ಮಾಡಲಾಗಿತ್ತು. ಆದರೀಗ ಸಿನಿಮಾ ಸೆಟ್ ಬೆಂಕಿಗೆ ಆಹುತಿ ಆಗಿದೆ. ಫೆಬ್ರವರಿ 27ರಂದು ಸೆಟ್ ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಆಚಾರ್ಯ ಸಿನಿಮಾದ ಬಹುಕೇಟಿ ವೆಚ್ಚದ ಸುಂದರ ಸೆಟ್ ಅನ್ನು ಕಲಾ ನಿರ್ದೇಶಕ ಸುರೇಶ್ ಸೆಲ್ವರಾಜನ್ ನಿರ್ಮಿಸಿದ್ದರು. ಬರೋಬ್ಬರಿ 25 ಕೋಟಿ ವೆಚ್ಚದಲ್ಲಿ ಸೆಟ್ ನಿರ್ಮಾಣ ಮಾಡಲಾಗಿದ್ದು ಎಂದು  ವರದಿಯಾಗಿದೆ. 

ಸದ್ಯ ಬೆಂಕಿಗೆ ಆಹುತಿ ಆಗಿರುವ ಆಚಾರ್ಯ್ ಸೆಟ್ ಅನ್ನು ಹೈದರಾಬಾದ್‌ನ ಹೊರವಲಯದಲ್ಲಿರುವ ಕೋಕಾಪೇಟ್ ಸರೋವರದಲ್ಲಿ ನಿರ್ಮಾಣ ಮಾಡಲಾಗಿತ್ತು. ಬೆಂಕಿಗೆ ಆಹುತಿ ಆಗಿರುವ ಸೆಟ್ ಮಿನಿ ಟೆಂಪಲ್ ಟೌನ್, ಧರ್ಮಸ್ಥಳಿಯಾಗಿತ್ತು. ಭವ್ಯವಾದ ಟೆಂಪಲ್ ಸೆಟ್ ನಿರ್ಮಾಣ ಮಾಡಲಾಗಿತ್ತು. ದುರದೃಷ್ಟವಶಾತ್ ಧರ್ಮಸ್ಥಳವು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸೆಟ್ ಧಗಧಗ ಎಂದು ಹೊತ್ತಿ ಉರಿಯುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಮೆಗಾಸ್ಟಾರ್ ಚಿರಂಜೀವಿ ಮನೆಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್; ಕುತೂಹಲ ಮೂಡಿಸಿದ ದಿಢೀರ್ ಭೇಟಿ

ಅಗ್ನಿ ಅವಘಡದ ಮಾಹಿತಿ ಸಿಗುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸುವ ಪ್ರಯತ್ನ ಮಾಡಿದೆ. ಆದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ. ಅಷ್ಟೊತ್ತಿಗೆ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎನ್ನಲಾಗಿದೆ. ಸೆಟ್‌ಗೆ ಬೆಂಕಿ ತಗುಲಲು ನಿಖರ ಕಾರಣ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ ಸೆಟ್ ನಲ್ಲಿ ಯಾರೋ ಸಿಗೇಟು ಸೇದ ಎಸೆದಿದ್ದಾರೆ. ಹಾಗಾಗಿ ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ಕೂಡ ಆಗಿದೆ ಎಂದು ಶಂಕಿಸಲಾಗಿದೆ.

RRR: ಇನ್ನೂ ನಿಂತಿಲ್ಲ ಪ್ರಶಸ್ತಿಗಳ ಬೇಟೆ; ಆಸ್ಕರ್‌ಗೂ ಮೊದಲೇ ರಾಜಮೌಳಿ ಚಿತ್ರಕ್ಕೆ ಮತ್ತೊಂದು ಅವಾರ್ಡ್

ಸೆಟ್ ನಿರ್ಮಾಣ ನೋಡಿ ನಿರ್ದೇಶಕ ಕೊರಟಾಲ ಶಿವ ಕಲಾ ನಿರ್ದೇಶಕರ ಕಲ್ಪನೆಯನ್ನು ಹಾಡಿಹೊಗಳಿದ್ದರು. ಆಚಾರ್ಯ ಸಿನಿಮಾದ ಬಹುತೇಕ ಚಿತ್ರೀಕರಣ ಅದೇ ಸೆಟ್ ನಲ್ಲಿ ನಿರ್ಮಾಣವಾಗಿತ್ತು. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಆಚಾರ್ಯ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೀನಾಯ ಸೋಲು ಕಂಡಿತ್ತು. ಕೋಟಿ ಕೋಟಿ ಸುರಿದು ಸಿನಿಮಾ ಮಾಡಿದ್ದ ಚಿತ್ರತಂಡ ದೊಡ್ಡ ನಷ್ಟ ಅನುಭವಿಸಿತ್ತು. ಹೀನಾಯ ಸೋಲು ರಾಮ್ ಚರಣ್ ಮತ್ತು ಚಿರಂಜೀವಿ ಅವರಿಗೆ ದೊಡ್ಡ ಹಿನ್ನಡೆ ಆಗಿತ್ತು. ಇದೀಗ ಅದ್ದೂರಿಯಾಗಿ ನಿರ್ಮಾಣವಾಗಿದ್ದ ದುಬಾರಿ ಸೆಟ್ ಕೂಡ ಬೆಂಕಿಗೆ ಆಹುತಿ ಆಗಿರುವುದು ಸಹ ಚಿರಂಜೀವಿ ಮತ್ತು ರಾಮ್ ಚರಣ್ ತಂಡಕ್ಕೆ ಭಾರಿಬೇಸರ ತಂದಿದೆ ಎನ್ನಲಾಗಿದೆ.   

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

15 ವರ್ಷಗಳಿಂದ ನಾಗಾರ್ಜುನರನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆ ಯಾವುದು? ಯಾಕೆ ಕಡಿಮೆಯಾಗಿಲ್ಲ?
ಆತ ನನ್ನ ಕ್ಲಾಸ್‌ಮೇಟ್.. ಗೆಳೆಯ ಶ್ರೀನಿವಾಸನ್ ನಿಧನ ಆಘಾತ ತಂದಿದೆ: ಭಾವುಕರಾದ ರಜನಿಕಾಂತ್