ಸಲ್ಮಾನ್ ಖಾನ್ ಮನೆಯ ಮೇಲೆ ಇಂದು ಬೆಳಿಗ್ಗೆ ಗುಂಡಿನ ದಾಳಿ ನಡೆದಿದೆ. ಈ ಹಿಂದೆಯೂ ಇದೇ ರೀತಿ ಘಟನೆ ನಡೆದಿತ್ತು. ಅಷ್ಟಕ್ಕೂ ನಟನೆ ಮೇಲೆ ಏಕಿಷ್ಟು ಕೋಪ? ಇಲ್ಲಿದೆ ಡಿಟೇಲ್ಸ್...
ಇಂದು ಮುಂಜಾನೆ 4.55ರ ಸುಮಾರಿಗೆ ನಟ ಸಲ್ಮಾನ್ ಖಾನ್ (Salman Khan) ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗಡೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದರೆ ಈ ದಾಳಿ ಯಾರು ಮಾಡಿದ್ದಾರೆ ಎನ್ನುವ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲವಾದರೂ ಇದಕ್ಕೆ ಕಾರಣ, ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಎಂದೇ ಹೇಳಲಾಗುತ್ತಿದೆ. ಇದಕ್ಕೆ ಕಾರಣ, ಇದಾಗಲೇ ಲಾರೆನ್ಸ್ ಸಾಕಷ್ಟು ಬಾರಿ ಸಲ್ಮಾನ್ ಅವರಿಗೆ ಬೆದರಿಕೆ ಪತ್ರ ಕಳುಹಿಸಿದ್ದ. ಕೆಲವು ಬಾರಿ ನೇರವಾಗಿ ನಾನೂ ಈ ಕೃತ್ಯ ಮಾಡಿರುವುದಾಗಿಯೂ ಹೇಳಿದ್ದ. ಇದಾಗಲೇ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ, ನಟನಿಗೆ ಟೈಟ್ ಸೆಕ್ಯುರಿಟಿ ನೀಡಲಾಗಿದ್ದರೂ, ಈ ಘಟನೆಯಿಂದ ಸಲ್ಲು ಅಭಿಮಾನಿಗಳಿಗೆ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಅಷ್ಟಕ್ಕೂ ಎರಡು ದಿನಗಳ ಹಿಂದೆ ಸಲ್ಮಾನ್ ಖಾನ್, ಮೊನ್ನೆಯಷ್ಟೇ ಈದ್ ನಿಮಿತ್ತ ಅಪ್ಪ ಸಲೀಂ ಖಾನ್ ಜೊತೆ ಅಭಿಮಾನಿಗಳ ಎದುರು ಕಾಣಿಸಿಕೊಂಡು ಎಲ್ಲರಿಗೂ ಶುಭಾಶಯ ಕೋರಿದ್ದರು. ಇದರ ಬೆನ್ನಲ್ಲೇ ಬಂಗಲೆ ಎದುರು ದಾಳಿ ನಡೆದಿದೆ.
ಕೆಲ ತಿಂಗಳ ಹಿಂದೆ, ಕೆನಡಾದ ವ್ಯಾಂಕೋವರ್‌ನಲ್ಲಿರುವ ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಅವರ ಮನೆಯ ಹೊರಗೆ ಗುಂಡಿನ ಸದ್ದು ಕೇಳಿಸಿತ್ತು. ಇದಕ್ಕೂ ತಾನೇ ಕಾರಣ ಎಂದು ಲಾರೆನ್ಸ್ ಬಿಷ್ಣೋಯಿ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹೇಳಿಕೆ ನೀಡಿದ್ದ. ಸಲ್ಮಾನ್ ಖಾನ್ ಜೊತೆ ಗಿಪ್ಪಿ ನಿಕಟ ಸಂಬಂಧ ಹೊಂದಿದ್ದರಿಂದ ಈ ಕೃತ್ಯ ಎಸಗಲಾಗಿದೆ ಎಂದೂ ಹೇಳಿದ್ದ. ಇದೀಗ ನೇರವಾಗಿ ಸಲ್ಮಾನ್ ಖಾನ್ ಬಂಗಲೆ ಎದುರೇ ಘಟನೆ ನಡೆದಿದೆ. ಇಷ್ಟೇ ಅಲ್ಲದೇ, ನಟಿ ರಾಖಿ ಸಾವಂತ್ಗೂ ಲಾರೆನ್ಸ್ ಬಿಷ್ಣೋಯಿ ಬೆದರಿಕೆ ಹಾಕಿದ್ದ. ರಾಖಿಯ ತಾಯಿ ಅನಾರೋಗ್ಯಪೀಡಿತರಾಗಿದ್ದ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅವರಿಗೆ ನೆರವಾಗಿದ್ದರು. ಇದೇ ಕಾರಣಕ್ಕೆ ರಾಖಿ ಲಾರೆನ್ಸ್ ಬಿಷ್ಣೋಯಿ ವಿರುದ್ಧ ಮಾತನಾಡಿದ್ದರು. ಇದೇ ಕಾರಣಕ್ಕೆ, ಲಾರೆನ್ಸ್ ಬಿಷ್ಣೋಯಿ, ರಾಖಿ ನಿಮ್ಮ ಜೊತೆ ನಮಗೆ ಮುನಿಸು ಇಲ್ಲ, ಯಾವ ಜಗಳನೂ ಇಲ್ಲ ಆದರೆ ಸಲ್ಮಾನ್ ಖಾನ್ ವಿಚಾರದಲ್ಲಿ ಸೇರಿಕೊಳ್ಳಬೇಡಿ. ಇಲ್ಲದಿದ್ದರೆ ನಿಮಗೆ ತುಂಬಾ ಕಷ್ಟವಾಗುತ್ತದೆ. ನೀವು ಎಷ್ಟೇ ಸೆಕ್ಯೂರಿಟಿ ಕೊಟ್ಟರೂ ಸಲ್ಮಾನ್ ಖಾನ್‌ನನ್ನು ನಾನು ಕೊಲೆ ಮಾಡುತ್ತೇನೆ. ಇದು ನಮ್ಮ ಕೊನೆಯ ವಾರ್ನಿಂಗ್ ಎಂದಿದ್ದ ಲಾರೆನ್ಸ್.
ನಾಲ್ಕು ವರ್ಷ ಹಿಂದೆ ನಡೆದ ಕೊಲೆ! ನ್ಯಾಯ ಕೋರಿ ಬಾಲಿವುಡ್ ನಟಿ ಆಯೇಷಾ ಜುಲ್ಕಾ ಕೋರ್ಟ್ಗೆ
ಅಷ್ಟಕ್ಕೂ ಲಾರೆನ್ಸ್ ಜೈಲಿನಲ್ಲಿದ್ದು, ಸಲ್ಮಾನ್ ಖಾನ್ ವಿರುದ್ಧ ಯಾಕಿಷ್ಟು ಕೋಪ ಎನ್ನುವ ಪ್ರಶ್ನೆ ಎದುರಾಗುತ್ತದೆ. ಅದಕ್ಕೆ ಕಾರಣ, ಕೃಷ್ಣಮೃಗ ಬೇಟೆ ಎನ್ನಲಾಗಿದೆ. ಅಷ್ಟಕ್ಕೂ ಲಾರೆನ್ಸ್ ಬಿಷ್ಣೋಯ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಇದಾಗಲೇ ಹಲವಾರು ಬಾರಿ ಬೆದರಿಕೆ ಹಾಕಿದ್ದಾನೆ. ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ (Blackbuck poaching case) ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿದ್ದೇ ಈ ಬೆದರಿಕೆಗೆ ಕಾರಣ. ಈ ಪ್ರಕರಣದಲ್ಲಿ ಸಲ್ಮಾನ್ ಸದ್ಯ ಜಾಮೀನಿನ ಮೇಲೆ ಇದ್ದರೂ, ಬಿಷ್ಣೋಯ್ ಸಮುದಾಯವರು ಮಾತ್ರ ನಟನ ಬೆನ್ನ ಬಿದ್ದಿದ್ದಾನೆ. ಏಕೆಂದರೆ, ಕೃಷ್ಣಮೃಗಗಳನ್ನು ಬಿಷ್ಣೋಯ್ ಸಮುದಾಯವು ಪವಿತ್ರವೆಂದು ಪರಿಗಣಿಸುತ್ತದೆ. ಅದಕ್ಕಾಗಿಯೇ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಸಲ್ಮಾನ್ ಖಾನ್ ಅವರನ್ನು ಟಾರ್ಗೆಟ್ ಮಾಡಿದ್ದಾನೆ.
ಕೊಲೆ ಬೆದರಿಕೆ ಒಡ್ಡಿರುವ ಆರೋಪ ಹೊತ್ತ ಲಾರೆನ್ಸ್ ಬಿಷ್ಣೋಯ್ ಜೈಲಿನಲ್ಲಿ ಇದ್ದು, ಈಗ ಪದೇ ಪದೇ ಮತ್ತೆ ಬೆದರಿಕೆ ಹಾಕುತ್ತಲೇ ಇದ್ದಾನೆ. ಅಷ್ಟಕ್ಕೂ ಆತನ ಬೇಡಿಕೆ ಎಂದರೆ ಕೃಷ್ಣಮೃಗವನ್ನು ಕೊಂದಿರುವುದಕ್ಕೆ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು ಎನ್ನುವುದು. ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರ ಭವಿಷ್ಯವನ್ನು ಯಾವುದೇ ನ್ಯಾಯಾಲಯ ನಿರ್ಧರಿಸುವುದಿಲ್ಲ ಎಂದು ಲಾರೆನ್ಸ್ ಬಿಷ್ಣೋಯ್ ಇದಾಗಲೇ ಹೇಳಿದ್ದಾನೆ. ಪೊಲೀಸರ ಮುಂದೆ ನೀಡಿದ ಹೇಳಿಕೆಯಲ್ಲಿ, ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಈ ವಿಷಯದಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರೆ (Apology) ತಮ್ಮ ಮನಸ್ಸು ಕೂಡ ಬದಲಾಗಬಹುದು ಎಂದು ಲಾರೆನ್ಸ್ ಬಿಷ್ಣೋಯ್ ಈ ಹಿಂದೆ ಹೇಳಿದ್ದ. ಇದರ ಹೊರತಾಗಿಯೂ ಸಲ್ಮಾನ್ ಖಾನ್ ಕ್ಷಮೆ ಕೋರಿಲ್ಲ ಎನ್ನುವುದು ಅವರಿಗೆ ಇರುವ ಆಕ್ರೋಶ. ಕ್ಷಮೆ ಕೋರದೇ ಹೋದರೆ ಪರಿಣಾಮ ಎದುರಿಸಲು ಸಿದ್ಧ ಇರಿ ಎಂದು ಗ್ಯಾಂಗ್ ಎಚ್ಚರಿಕೆ ನೀಡುತ್ತಲೇ ಇದೆ. ಕ್ಷಮೆ ಕೋರದ ಸಲ್ಮಾನ್ ಅವರ ಅಹಂಕಾರವನ್ನು ಮುರಿಯುತ್ತೇವೆ ಎಂದಿದ್ದಾನೆ. ಇದರ ಬೆನ್ನಲ್ಲೇ ಕೊಲೆ ಬೆದರಿಕೆ, ಗುಂಡಿನ ದಾಳಿ ನಡೆಯುತ್ತಿದೆ.
ಸ್ತ್ರೀವಾದವು ಅತಿಯಾದ್ರೆ ಸಮಾಜಕ್ಕೆ ಅಪಾಯಕಾರಿ: ನಟಿ ನೋರಾ ಫತೇಹಿ ಕೊಟ್ಟ ಕಾರಣ ಹೀಗಿದೆ...