ಅರೆಬರೆ ಬೆತ್ತಲಾದ ರಶ್ಮಿಕಾಗಿಂತ ಪೂರ್ತಿ ನಗ್ನಳಾದ ತೃಪ್ತಿಗೆ ಇಷ್ಟು ಕಮ್ಮಿ ದುಡ್ಡಾ? ಮೋಸ ಅಂತಿದ್ದಾರೆ ಫ್ಯಾನ್ಸ್​

By Suvarna News  |  First Published Dec 15, 2023, 4:45 PM IST

ಅರೆಬರೆ ಬೆತ್ತಲಾದ ರಶ್ಮಿಕಾಗಿಂತ ಪೂರ್ತಿ ನಗ್ನಳಾದ ತೃಪ್ತಿಗೆ ಇಷ್ಟು ಕಮ್ಮಿ ದುಡ್ಡಾ? ಮೋಸ ಅಂತಿದ್ದಾರೆ ಫ್ಯಾನ್ಸ್​. ಅಷ್ಟಕ್ಕೂ ತೃಪ್ತಿ ಪಡೆದದ್ದೆಷ್ಟು? 
 


ಕಳೆದ ವರ್ಷದವರೆಗೂ ತೃಪ್ತಿ ಡಿಮ್ರಿ ಎನ್ನುವ ಬಾಲಿವುಡ್​​ ನಟಿ ಇದ್ದಾರೆ ಎನ್ನುವುದೇ ಎಷ್ಟೋ ಮಂದಿಗೆ ತಿಳಿದಿರಲಿಲ್ಲ. ಮಾಮ್​, ಪೋಸ್ಟರ್​ ಬಾಯ್​, ಲೈಲಾ ಮಜ್ನು ಸೇರಿ ನಾಲ್ಕೈದು ಸಿನಿಮಾಗಳಲ್ಲಿ ನಟಿಸಿದರೂ ಅನಿಮಲ್​ ಸಿನಿಮಾದ ಯಶಸ್ಸು ತೃಪ್ತಿ ದಿಮ್ರಿಗೆ ಒಳ್ಳೆಯ ಖ್ಯಾತಿ ತಂದುಕೊಟ್ಟಿದೆ.  ಇದೀಗ ಗೂಗಲ್​ನಲ್ಲಿ ತೃಪ್ತಿಯ ಬಗ್ಗೆ ಸಿನಿ ಪ್ರಿಯರಿಗೆ ಇಂಟರೆಸ್ಟ್​ ಜಾಸ್ತಿಯಾಗುತ್ತಿದೆ. ಯಾರೀಕೆ? ಯಾವೆಲ್ಲಾ ಚಿತ್ರಗಳಲ್ಲಿ ನಟಿಸಿದ್ದಾರೆ? ಎಲ್ಲಿಯವರು ಎಂದೆಲ್ಲಾ ಸರ್ಚ್​ ಶುರುವಿಟ್ಟುಕೊಂಡಿದ್ದಾರೆ. ಪಾಳುಬಿದ್ದಿದ್ದ ಈಕೆಯ ಸೋಷಿಯಲ್​ ಮೀಡಿಯಾ ಖಾತೆ ಸಕ್ರಿಯಗೊಂಡಿದ್ದು, ಈಕೆಯ ಸೋಷಿಯಲ್​ ಮೀಡಿಯಾ ಕೂಡ ಸರ್ಚ್​ ಮಾಡಲಾಗುತ್ತಿದೆ. ದಿಢೀರನೆ ಎಲ್ಲರ ಕಣ್ಣು ಕುಕ್ಕಿದ್ದಾರೆ ಈ ಬೆಡಗಿ. ಅಷ್ಟಕ್ಕೂ ಈ ಬೆಳವಣಿಗೆಗೆ ಕಾರಣ ಏನು ಎಂದು ಬೇರೆ ಹೇಳಬೇಕಾಗಿಲ್ಲ. ಅದೇ ಅನಿಮಲ್​ ಚಿತ್ರ. ಸಿನಿಮಾಗಳಲ್ಲಿ ಯಾವುದೇ ಮುಜುಗರ ಪಟ್ಟುಕೊಳ್ಳದೇ ಧಾರಾಳವಾಗಿ ದೇಹ ಪ್ರದರ್ಶನ ಮಾಡುವ, ಸ್ತನಗಳ ಗಾತ್ರಗಳನ್ನು ದೊಡ್ಡದಾಗಿಸಿಕೊಳ್ಳಲು ಶಸ್ತ್ರಚಿಕಿತ್ಸೆ  ಮಾಡಿಕೊಂಡು ಹೋದಲ್ಲಿ, ಬಂದಲ್ಲಿ ಅದರ ಪ್ರದರ್ಶನ ಮಾಡುವ ಬಹುತೇಕ ನಟಿಯರನ್ನು ಸೈಡ್​ಗೆ ಹಾಕಿದ್ದಾರೆ ತೃಪ್ತಿ ಡಿಮ್ರಿ.  ಇದೆಲ್ಲಾ ಸಾಧ್ಯವಾಗಿಸಿದ್ದು ಸಂಪೂರ್ಣ ಬೆತ್ತಲೆ ದೃಶ್ಯ. ಅನಿಮಲ್​ ಚಿತ್ರದಲ್ಲಿ ನಟ ರಣಬೀರ್​ ಕಪೂರ್​ ಜೊತೆ ಈಕೆಯ ನಗ್ನ ದೃಶ್ಯಗಳನ್ನು ನೋಡುತ್ತಿದ್ದಂತೆಯೇ ದಿಢೀರನೆ ಫ್ಯಾನ್ಸ್​ ಸಂಖ್ಯೆಯನ್ನೂ ಏರಿಸಿಕೊಂಡಿದ್ದಾರೆ ತಾರೆ. ಅನಿಮಲ್ ಬಿಡುಗಡೆಗೂ ಮುನ್ನ 6 ಲಕ್ಷದಷ್ಟಿದ್ದ ಫಾಲೋವರ್ಸ್ ಡಿಸೆಂಬರ್ 14ಕ್ಕೆ 37 ಲಕ್ಷ ತಲುಪಿದೆ. 

ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಈ ಚಿತ್ರದಲ್ಲಿ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ದಂಪತಿಯಾಗಿ ಕಾಣಿಸಿಕೊಂಡಿದ್ದರೆ, ಅನಿಲ್ ಕಪೂರ್ ಮತ್ತು ಬಾಬಿ ಡಿಯೋಲ್ ಕೂಡ ಕಾಣಿಸಿಕೊಂಡಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ಹಾಡೊಂದರ ಟ್ರೇಲರ್​ ರಿಲೀಸ್​ ಆದಾಗ ರಶ್ಮಿಕಾ ಮಂದಣ್ಣನವರ ಹಸಿಬಿಸಿ ದೃಶ್ಯದಿಂದ ಭಾರಿ ಸುದ್ದಿಯಾಗಿತ್ತು. ಆದರೆ ಈಕೆಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಇನ್ನೋರ್ವ ನಟಿ ತೃಪ್ತಿ ಡಿಮ್ರಿ ಮತ್ತು ರಣಬೀರ್​ ಕಪೂರ್​ ಅವರ ಸಂಪೂರ್ಣ ಬೆತ್ತಲೆ ದೃಶ್ಯದ ಸುದ್ದಿಯಾಗುತ್ತಿದ್ದಂತೆಯೇ ರಶ್ಮಿಕಾ ಸೈಡ್​ಗೆ ಹೋಗಿದ್ದಾರೆ, ಎಲ್ಲೆಲ್ಲೂ ತೃಪ್ತಿಯದ್ದೇ ಮಾತು. ರಾತ್ರೋರಾತ್ರಿ ಈಕೆ ರಶ್ಮಿಕಾ ಮಂದಣ್ಣನವರ ನ್ಯಾಷನಲ್​ ಕ್ರಷ್​ ಪಟ್ಟವನ್ನೂ ಕಿತ್ತುಕೊಂಡಿದ್ದಾರೆ. ಈಕೆಯ ಇನ್​ಸ್ಟಾಗ್ರಾಮ್​ ಖಾತೆಯ ಫಾಲೋವರ್ಸ್​​ ಸಂಖ್ಯೆ ದಿಢೀರನೆ ಐದಾರು ಪಟ್ಟು ಹೆಚ್ಚಾಗಿದೆ.

Tap to resize

Latest Videos

ಅರೆನಗ್ನ ನಟಿಯರನ್ನೆಲ್ಲಾ ಹಿಂದಿಕ್ಕಿದ 'ಅನಿಮಲ್' ಬೆತ್ತಲೆ ರಾಣಿ ತೃಪ್ತಿಗೆ ಸಿಕ್ತು ಇನ್ನೊಂದು ಪ್ರತಿಷ್ಠಿತ ಸ್ಥಾನ!

ಮಾತ್ರವಲ್ಲದೇ ನಟಿಗೆ ಮತ್ತೊಂದು ಬಿರುದು ಈಚೆಗೆ ಸೇರ್ಪಡೆಯಾಗಿದೆ.  ಅದೇನೆಂದರೆ IMDb (Internet Movie Database) ಎಂಬ ಹೆಸರಾಂತ ಇಂಟರ್ನೆಟ್ ಮೂವಿ ಡೇಟಾಬೇಸ್, ಇತ್ತೀಚೆಗೆ ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಕುರಿತು ಮಾಹಿತಿ ನೀಡಿದೆ. ಈ ಸ್ಥಾನದಲ್ಲಿ ಎಲ್ಲಾ ನಟ-ನಟಿಯರನ್ನು ಮೀರಿ ತೃಪ್ತಿ ಡಿಮ್ರಿ ನಂ.1 ಸ್ಥಾನಕ್ಕೆ ಏರಿದ್ದಾರೆ. ಕುತೂಹಲದ ವಿಷಯ ಏನೆಂದರೆ, ಅನಿಮಲ್​ ಚಿತ್ರದ  ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಎರಡನೇ ಸ್ಥಾನದಲ್ಲಿದ್ದಾರೆ. ಒಟ್ಟಿನಲ್ಲಿ ನಟಿ ತೃಪ್ತಿಯ ಅದೃಷ್ಟ ಖುಲಾಯಿಸಿದೆ. ಈಕೆ ಬೆತ್ತಲಾಗುತ್ತಿದ್ದಂತೆಯೇ ಬೇರೆ ಚಿತ್ರಗಳಿಂದಲೂ ಒಳ್ಳೆಯ ಆಫರ್​ಗಳು ಬರುತ್ತಿವೆ. 

ಆದರೆ ತೃಪ್ತಿ, ಅರೆಬರೆ ಬೆತ್ತಲಾಗಿರುವ ರಶ್ಮಿಕಾಗಿಂತಲೂ ಅತ್ಯಂತ ಕಡಿಮೆ ಸಂಭಾವನೆ ಪಡೆದಿರುವುದು ಈಕೆಯ ಅಭಿಮಾನಿಗಳಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿದೆ.  ಸಿನಿ ಮೂಲಗಳ ಪ್ರಕಾರ ತೃಪ್ತಿ ಈ ಚಿತ್ರಕ್ಕೆ  ಕೇವಲ 40 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.  ಆದರೆ ನಾಯಕಿಯಾಗಿ  ನಟಿಸಿರುವ ರಶ್ಮಿಕಾ ಮಂದಣ್ಣ ನಾಲ್ಕು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಇದರ ಅರ್ಥ ತೃಪ್ತಿಗೆ ರಶ್ಮಿಕಾಗಿಂತ ಹತ್ತು ಪಟ್ಟು ಕಡಿಮೆ ಸಂಭಾವನೆ ಸಿಕ್ಕಿದೆ. ತೃಪ್ತಿಯದ್ದು ಚಿಕ್ಕ ರೋಲ್​ ಇರುವ ಕಾರಣ, ಕಡಿಮೆ ಮೊತ್ತ ನೀಡಲಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದ್ದರಾದರೂ, ಈಕೆ ಸಂಪೂರ್ಣ ಬೆತ್ತಲಾದುದಕ್ಕೇ ಸಿನಿ ಪ್ರಿಯರು ಮುಗಿ ಬಿದ್ದು ಚಿತ್ರ ನೋಡಲು ಬರುತ್ತಿದ್ದಾರೆ ಎನ್ನುವ ಇನ್ನೊಂದು ವಾದವೂ ಇದೆ. ಚಿತ್ರದಲ್ಲಿ  ರಣಬೀರ್​​ ಕಪೂರ್​ 70 ಕೋಟಿ ರೂ., ಬಾಬಿ ಡಿಯೋಲ್​ 4 ಕೋಟಿ ರೂ. ಮತ್ತು ಅನಿಲ್​ ಕಪೂರ್​ 2 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.  

ಹೆಣ್ಣೆಂದರೆ 'ಅನಿಮಲ್'​ ನಿರ್ದೇಶಕನ ದೃಷ್ಟಿಯಲ್ಲಿ ಹೀಗಂತೆ! ಯಾವುದ್ರಿಂದ ಹೊಡಿಬೇಕು ನಿಂಗೆ ಕೇಳ್ತಿದ್ದಾರೆ ನೆಟ್ಟಿಗರು
 

click me!