
ಬರೇಲಿ (ಸೆ.13) ಬಾಲಿವುಡ್ ಸೆಲೆಬ್ರೆಟಿಗಳು ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಬಾಲಿವುಡ್ ನಟಿ ದಿಶಾ ಪಟಾನಿ ಮನೆ ಹೊರಭಾಗದಲ್ಲಿ ಗುಂಡಿನ ದಾಳಿಯಾಗಿದೆ. ದುರ್ಷ್ಕರ್ಮಿಗಳು 2 ಸುತ್ತು ಗುಂಡು ಹಾರಿಸಿದ ಘಟನೆ ನಡೆದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿರುವ ದಿಶಾ ಪಟಾನೆ ಮನೆ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಬೆಳಗಿನ ಜಾವ 4.30ರ ಸುಮಾರಿಗೆ ಗುಂಡಿನ ಶಬ್ದ ಕೇಳಿಬಂದಿದೆ.ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆಯ ಹೊಣೆ ಹೊತ್ತು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದು ಹರಿದಾಡುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ.
ನಟಿ ದಿಶಾ ಪಟಾನಿ ಮನೆ ಹೊರಗಡೆ ನಡಿದ ಗುಂಡಿನ ದಾಳಿ ಹೊಣೆಯನ್ನು ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಹಾಗೂ ರೋಹಿತ್ ಗೋದರಾ ಹೊತ್ತುಕೊಂಡಿದ್ದಾರೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೊತೆ ಗುರುತಿಸಿಕೊಂಡಿದ್ದ ಗೋಲ್ಡಿಬ್ರಾರ್ ಇದೀಗ ಈ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ. ಸನಾತನ ಧರ್ಮ ಹಾಗೂ ಹಿಂದೂ ನಂಬಿಕೆಗಳಿಗೆ ಧಕ್ಕೆ ತರುವ ಪ್ರಯತ್ನ ನಡೆದರೆ ದಾಳಿಯಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ಸೋಶಿಯಲ್ ಮೀಡಿಯಾ ಮೂಲಕ ನೀಡಲಾಗಿದೆ. ಯಾವುದೇ ಬಾಲಿವುಡ್ ನಟ ನಟಿಯರು ಸನಾತನ ಧರ್ಮಕ್ಕೆ ಧಕ್ಕೆ ತಂದರೆ, ಅಪಮಾನ ಮಾಡಿದರೆ ದಾಳಿಯಾಗಲಿದೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ದಾವೂದ್ ಇಬ್ರಾಹಿಂ ಕಣ್ಣಿಗೆ ಬಿದ್ದು ದೇಶದಿಂದಲೇ ಕಣ್ಮರೆಯಾದಳು ಆ ನಟಿ!
ದಿಶಾ ಪಟಾನಿ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೊಣೆ ಹೊತ್ತುಕೊಂಡಿರುವ ಗೋಲ್ಡಿ ಬ್ರಾರ್ ಹಾಗೂ ರೋಹಿತ್ ಗೋದಾರ ಸೋಶಿಯಲ್ ಮೀಡಿಯಾ ಪೋಸ್ಟ್ ಹೇಳಿಕೊಂಡಿದೆ. ಇದು ಬಾಲಿವುಡ್ ಸೆಲೆಬ್ರೆಟಿಗಳಿಗೆ ಎಚ್ಚರಿಕೆ ಸಂದೇಶ ಎಂದಿದ್ದಾರೆ.
ಪೊಲೀಸರು ಹೊಣೆ ಹೊತ್ತುಕೊಂಡ ಸೋಶಿಯಲ್ ಮೀಡಿಯಾ ಪೋಸ್ಟ್ ಕುರಿತು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಈ ಪೋಸ್ಟ್ ಗೋಲ್ಡಿ ಬ್ರಾರ್ ಹಾಗೂ ಆತನ ಸದಸ್ಯರು ಪೋಸ್ಟ್ ಮಾಡಿದ್ದಾರೆ ಅನ್ನೋದು ಸ್ಪಷ್ಟವಾಗಿದೆ. ಪೊಲೀಸರು ಈ ಮಾಹಿತಿ ಸ್ಪಷ್ಟಪಡಿಸುತ್ತಿದ್ದಂತೆ ಬಾಲಿವುಡ್ ಮಂದಿ ಬೆಚ್ಚಿ ಬಿದ್ದಿದ್ದಾರೆ. ಹಲವರ ಆತಂಕ ಹೆಚ್ಚಾಗಿದೆ. ಬಾಲಿವುಡ್ ಸೆಲೆಬ್ರೆಟಿಗಳಿಗೆ ಗ್ಯಾಂಗ್‌ಸ್ಟರ್ ಭಯ ಹೆಚ್ಚಾಗುತ್ತಿದೆ.
ದಿಶಾ ಪಟಾನಿ ಮನೆ ಹೊರಭಾಗದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅದೃಷ್ಠವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದುರ್ಷ್ಕರ್ಮಿಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇತ್ತ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಯಾರನ್ನು ಇದುವರೆಗೂ ಬಂಧಿಸಿಲ್ಲ.
ಬೆಳಗ್ಗೆ 4.30ರ ಸುಮಾರಿಗೆ ಮನೆ ಹೊರಭಾಗದಲ್ಲಿ ಗುಂಡಿನ ಶಬ್ದ ಕೇಳಿಸಿದೆ. ತಕ್ಷಣವೇ ಎಚ್ಚೆತ್ತುಕೊಂಡಿದ್ದೇವೆ. ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದೇವೆ. ಘಟನೆಯಿಂದ ನಾವು ಆತಂಕಗೊಂಡಿದ್ದೇವೆ ಎಂದು ಕುಶ್ಬೂ ಪಟಾನಿ ಹೇಳಿದ್ದಾರೆ.
ನಟ ಸಲ್ಮಾನ್ ಖಾನ್‌ಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಭಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಲ್ಮಾನ್ ಖಾನ್ ಹತ್ಯೆಗೆ ಹಲವು ಪ್ರಯತ್ನಗಳು ನಡೆದಿದೆ. ಸಲ್ಮಾನ್ ಖಾನ್ ಮುಂಬೈನಲ್ಲಿರುವ ಮನೆ ಮೇಲೂ ಗುಂಡಿನ ದಾಳಿ ನಡೆದಿತ್ತು. ಈ ಘಟನೆ ಬಳಿಕ ಸಲ್ಮಾನ್ ಖಾನ್ ಭದ್ರತೆ ಹೆಚ್ಚಿಸಲಾಗಿದೆ. ಸಲ್ಮಾನ್ ಖಾನ್ ಹಾಗೂ ಬಾಲಿವುಡ್ ಸೆಲೆಬ್ರೆಟಿಗಳ ಆಪ್ತ, ಮಾಜಿ ಶಾಸಕ ಬಾಬಾ ಸಿದ್ದಿಕಿ ಮೇಲೆ ಇದೇ ಬಿಷ್ಣೋಯ್ ಗ್ಯಾಂಗ್ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಬಾಬಾ ಸಿದ್ದಿಕಿ ಹತ್ಯೆಯಾಗಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.