
ಹಿರಿಯ ಬಾಲಿವುಡ್ ನಟಿ ಮತ್ತು ರಾಜಕಾರಣಿ ಹೇಮಾ ಮಾಲಿನಿ ಅವರು ಶನಿವಾರ COVID -19 ಲಸಿಕೆ ತೆಗೆದುಕೊಳ್ಳುತ್ತಿರುವ ಫೋಟೋ ಶೇರ್ ಮಾಡಿದ್ದಾರೆ. ನಟಿ ಲಸಿಕೆ ತೆಗೆದುಕೊಂಡು ನೆಟ್ಟಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
72 ವರ್ಷದ ನಟಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಮುಂಬೈನ ಕೂಪರ್ ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್ ತೆಗೆದುಕೊಂಡ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫೋಟೋಗಳ ಜೊತೆಗೆ, "ನಾನು ಕೂಪರ್ ಆಸ್ಪತ್ರೆಯಲ್ಲಿ ಸಾರ್ವಜನಿಕರೊಂದಿಗೆ ಕೋವಿಡ್ ಲಸಿಕೆ ತೆಗೆದುಕೊಂಡಿದ್ದೇನೆ" ಎಂದು ಟ್ವೀಟ್ ಮಾಡಿದ್ದಾರೆ.
ಕೊರೋನಾ ಲಸಿಕೆ ಪಡೆದ ಸೈಫ್: ಅರೆ, ಅರುವತ್ತಾಯ್ತಾ ಎಂದ್ರು ನೆಟ್ಟಿಗರು
ಲಸಿಕೆ ತೆಗೆದುಕೊಂಡ ಸೆಲೆಬ್ರಿಟಿಗಳ ಪಟ್ಟಿಗೆ ಬಾಲಿವುಡ್‌ನ ಡ್ರೀಮ್ ಗರ್ಲ್ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ನಟರಾದ ಸೈಫ್ ಅಲಿ ಖಾನ್, ಕಮಲ್ ಹಾಸನ್, ಮತ್ತು ಸತೀಶ್ ಷಾ ಕೂಡ ವ್ಯಾಕ್ಸಿನೇಷನ್ ಪಡೆದಿದ್ದರು.
ಬಾಲಿವುಡ್ಮ ಹಲವಾರು ಪ್ರಮುಖ ತಾರೆಗಳು ಈ ಮೊದಲು ಕೊರೋನಾಗೆ ತುತ್ತಾಗಿದ್ದರು. ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಅರ್ಜುನ್ ಕಪೂರ್, ಮಲೈಕಾ ಅರೋರಾ ಮುಂತಾದವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.