ಆರ್ಆರ್ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದಿದೆ. ಈ ಪ್ರಶಸ್ತಿಗಾಗಿ ಆನ್ಲೈನ್ ಫ್ಲ್ಯಾಟ್ಫಾರ್ಮ್ನಲ್ಲಿ ಕೋಟಿ ಕೋಟಿಗಟ್ಟಲೆ ಹಣದ ಬೆಟ್ಟಿಂಗ್ ನಡೆದಿತ್ತು ಎಂದು ವರದಿಯಾಗಿದೆ.
RRR ಸಿನಿಮಾ ಭಾರತಕ್ಕೆ ಗರಿಮೆ ತಂದಿದೆ. ಈ ಸಿನಿಮಾದ ನಾಟು, ನಾಟು ಸಾಂಗ್ ಆಸ್ಕರ್ 2023ರ, 95ನೇ ಸಾಲಿನ ಅಕಾಡೆಮಿ ಅವಾಡ್ರ್ಸ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ಭಾರತವನ್ನು ಪ್ರತಿನಿಧಿಸಿದ್ದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ (Natu Natu) ಹಾಡಿಗೆ (Song) ಆಸ್ಕರ್ ಪ್ರಶಸ್ತಿ ಸಂದಿದೆ. ಈ ಮೂಲಕ ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರದ ನಂತರ 'ನಾಟು ನಾಟು' ಹಾಡು ಆಸ್ಕರ್ ಪ್ರಶಸ್ತಿ ಬಾಚಿಕೊಂಡಿದೆ. ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ ಲಭಿಸಿದೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮೂಡಿ ಬಂದ RRR ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದರು. ಅಮೆರಿಕದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದರು. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ನಾಟು, ನಾಟು ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ಪ್ರಶಸ್ತಿ ಗಳಿಸಿದೆ.
ಆದರೆ ಇದಕ್ಕೂ ಮುನ್ನ ನಾಟು ನಾಟು ಭಾರಿ ಸದ್ದು ಮಾಡಿದೆ. ಈ ಹಾಡು ಆಸ್ಕರ್ (Oscar) ಪ್ರಶಸ್ತಿಗಳ ಪಟ್ಟಿಯಲ್ಲಿ ನಾಮಿನೇಷನ್ ಆಗುತ್ತಿದ್ದಂತೆಯೇ ಎಲ್ಲರ ಗಮನ ಈ ಪ್ರಶಸ್ತಿಯ ಮೇಲೆ ಬಿದ್ದಿತ್ತು. ಪ್ರಶಸ್ತಿ ಗೆಲುವ ವಿಚಾರ ಕೋಟಿಗಟ್ಟಲೆ ಬೆಟ್ಟಿಂಗ್ ವ್ಯವಹಾರ ನಡೆದಿದೆ ಎನ್ನಲಾಗುತ್ತಿದೆ. ಈ ಹಾಡಿಗೆ ಗೋಲ್ಡನ್ ಗ್ಲೋಬ್ ಅವಾರ್ಡ್ ಸಿಗುತ್ತಲೇ ಭಾರಿ ಸುದ್ದಿ ಮಾಡಿತ್ತು. ನಂತರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಳ್ಳುತ್ತಲೇ ಕೋಟಿಗಟ್ಟಲೆ ಲೆಕ್ಕದಲ್ಲಿ ಬೆಟ್ಟಿಂಗ್ ಶುರುವಾಗಿತ್ತು ಎನ್ನಲಾಗುತ್ತಿದೆ. ಈ ಹಾಡು ಆಸ್ಕರ್ ಗೆದ್ದೇ ಗೆಲ್ಲುತ್ತದೆ ಎಂಬ ಗ್ಯಾರೆಂಟಿ ಜನರಲ್ಲಿ ಇತ್ತು. ಅದಕ್ಕಾಗಿಯೇ ಬೆಟ್ಟಿಂಗ್ ಕೂಡ ನಡೆದಿತ್ತು. ಒಂದಿಷ್ಟು ಮಂದಿ ಈ ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಗುವುದಿಲ್ಲ ಎಂದಿದ್ದರೆ, ಮತ್ತೊಂದಿಷ್ಟು ಮಂದಿ ಇದು ಪ್ರಶಸ್ತಿಯನ್ನು ಬಾಚುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಅಂತೂ ಪಾಸಿಟಿವ್ ಆಗಿದ್ದ ಜನರ ಮಾತು ಗೆದ್ದಿದೆ. ಉತ್ತಮ ಮೂಲ ಹಾಡು (Best Original Song) ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
OSCAR ವೇದಿಕೆಯಲ್ಲಿ ದೀಪಿಕಾ ಪಡುಕೋಣೆ: ಹಾಡಿ ಹೊಗಳಿದ ಕಂಗನಾ ರಣಾವತ್
ಐಪಿಎಲ್ ಸೀಸನ್, ಮಹತ್ವದ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ಬೆಟ್ಟಿಂಗ್ ಇದೀಗ ಅವಾರ್ಡ್ ವಿಚಾರದಲ್ಲೂ ಭಾರೀ ಸದ್ದು ಮಾಡಿದೆ. ಹಿಂದೆಂದೂ ಕಾಣದಷ್ಟು ಈ ಬಾರಿ ಆಸ್ಕರ್ ಸಮಾರಂಭದಲ್ಲಿ ಬೆಟ್ಟಿಂಗ್ ನಡೆದಿದೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಈ ಬೆಟ್ಟಿಂಗ್ ನಡೆದದ್ದು ಆನ್ಲೈನ್ನಲ್ಲಿ (Online Betting) ಎನ್ನಲಾಗುತ್ತಿದೆ. ಆನ್ಲೈನ್ ಫ್ಲ್ಯಾಟ್ಫಾರ್ಮ್ನಲ್ಲಿ ಕೋಟಿಗಟ್ಟಲೆ ಹಣ ಕಟ್ಟಿರುವ ವರದಿ ಆಗಿದೆ. ಬೆಂಗಳೂರು ಕೂಡ ಸೇರಿದಂತೆ ಮುಂಬೈ, ಹೈದರಾಬಾದ್ಗಳಲ್ಲಿ ಆನ್ಲೈನ್ ಬುಕ್ಕಿಗಳು 1:4 ರ ರೇಂಜಿನಲ್ಲಿ ಕೋಟಿಗಳಲ್ಲಿ ಬೆಟ್ಟಿಂಗ್ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಸಾಮಾನ್ಯ ಜನರಷ್ಟೇ ಅಲ್ಲದೇ, ನಾಟು ನಾಟುವಿನ ಬೆಟ್ಟಿಂಗ್ನಲ್ಲಿ ಹಲವು ಸೆಲೆಬ್ರಿಟಿಗಳು (Celebrities) ಕೂಡ ಭಾಗಿಯಾಗಿದ್ದರು ಎಂಬ ವರದಿ ಇದೆ.
ಆರ್ಆರ್ಆರ್ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೇರಿದಂತೆ ಹಲವು ಕ್ಷೇತ್ರಗಳ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಅಸಾಧಾರಣ... ನಾಟು ನಾಟು ಜನಪ್ರಿಯತೆ ಜಾಗತಿಕವಾಗಿದೆ. ಇದು ಮುಂದಿನ ವರ್ಷಗಳಲ್ಲಿ ನೆನಪಿನಲ್ಲಿ ಉಳಿಯುವ ಹಾಡಾಗಲಿದೆ. ಪ್ರತಿಷ್ಠಿತ ಗೌರವ ಪಡೆದ ಎಂ ಎಂ ಕೀರವಾಣಿ ಹಾಗೂ ಚಿತ್ರದ ಇಡೀ ತಂಡಕ್ಕೆ ಅಭಿನಂದನೆಗಳು. ಭಾರತ ಉತ್ಸುಕವಾಗಿದ್ದು ಮತ್ತು ಹೆಮ್ಮೆಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
Oscar 2023 Winner; ಅತ್ಯುತ್ತಮ ನಟ, ನಟಿ ಸೇರಿದಂತೆ ಆಸ್ಕರ್ ಗೆದ್ದವರ ಸಂಪೂರ್ಣ ಲಿಸ್ಟ್ ಇಲ್ಲಿದೆ
ನಾಟು ನಾಟು ಹಾಡು ಒರಿಜಿನಲ್ ಸಾಂಗ್ ವಿಭಾಗದಲ್ಲಿ ಆಸ್ಕರ್ ಗೆದ್ದಿದೆ. ಈ ಹಾಡಿನ ಜೊತೆಗೆ, ಇತರ ನಾಲ್ಕು ಹಾಡುಗಳು (ಚಪ್ಪಾಳೆ (ಟೆಲ್ ಇಟ್ ಲೈಕ್ ಎ ವುಮನ್), ಹೋಲ್ಡ್ ಮೈ ಹ್ಯಾಂಡ್ (ಟಾಪ್ಗನ್: ಮಾರ್ವೆರಿಕ್), ಲಿಫ್ಟ್ ಮಿ ಅಪ್ (ಬ್ಲ್ಯಾಕ್ ಪ್ಯಾಂಥರ್) ಮತ್ತು ದಿ ಈಸ್ ಎ ಲೈಫ್ (ಎವೆರಿಥಿಂಗ್ ಎವೆರಿಥಿಂಗ್ ಆಲ್ ಅಟ್ ಒನ್ಸ್) ಸಹ ನಾಮನಿರ್ದೇಶನಗೊಂಡಿದ್ದವು.