ರಶ್ಮಿಕಾಗಿಂತ 'ಪುಷ್ಪ' ಸಿನಿಮಾಗೆ ನಾನೆ ಸೂಟ್ ಆಗ್ತಿದ್ದೆ ಎಂದು ತೆಲುಗಿನ ಖ್ಯಾತ ನಟಿ ಐಶ್ವರ್ಯಾ ರಾಜೇಶ್ ಹೇಳಿದ್ದಾರೆ.
ಚೆನ್ನೈ ಮೂಲದ ಸೌತ್ ಸಿನಿಮಾರಂಗದ ಖ್ಯಾತ ನಟಿ ಐಶ್ವರ್ಯಾ ರಾಜೇಶ್ ಫರ್ಹಾನಾ ಸಿನಿಮಾದ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಈ ಸಿನಿಮಾದ ಪ್ರಮೋಷನ್‌ನಲ್ಲಿ ಐಶ್ವರ್ಯಾ ಸದ್ಯ ಬ್ಯುಸಿಯಾಗಿದ್ದಾರೆ. ಚಿತ್ರದ ಪ್ರಚಾರದ ವೇಳೆ ಐಶ್ವರ್ಯಾ ರಾಜೇಶ್ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಅಷ್ಟೆಯಲ್ಲ ರಶ್ಮಿಕಾ ಮಂದಣ್ಣನಿಗಿಂತ ನಾನೆ ಫಿಟ್ ಆಗುತ್ತಿದ್ದೆ ಎಂದು ಹೇಳಿದ್ದಾರೆ. ಐಶ್ವರ್ಯಾ ಅವರ ಹೇಳಿಕೆ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದು ರಶ್ಮಿಕಾ ಅಭಿಮಾನಿಗಳ ಅಸಮಾಧಾನಕ್ಕೂ ಕಾರಣವಾಗಿದೆ.
ನಟಿ ಐಶ್ವರ್ಯಾ ರಾಜೇಶ್ ತೆಲುಗು ಸ್ಟಾರ್ ವಿಜಯ್ ದೇವರಕೊಂಡ ಜೊತೆ ವರ್ಲ್ಡ್ ಫೇಮಸ್ ಲವರ್ ಸಿನಿಮಾದಲ್ಲಿ ನಟಿಸಿದ್ದರು. ಆದರೆ ಆ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೀನಾಯ ಸೋಲು ಕಂಡಿತ್ತು. ಐಶ್ವರ್ಯಾ ಸದ್ಯ ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೈತುಂಬಾ ಸಿನಿಮಾಗಳನ್ನು ಇಟ್ಟುಕೊಂಡಿರುವ ಐಶ್ವರ್ಯಾ ಪುಷ್ಪ ಸಿನಿಮಾದಲ್ಲಿ ನಟಿಸುವ ಆಸೆಯಿತ್ತು ಎಂದು ಹೇಳಿದ್ದಾರೆ.
ಸದ್ಯ ಮಲಯಾಳಂ ಮತ್ತು ತಮಿಳು ಸಿನಿಮಾಗಳಲ್ಲಿ ಐಶ್ವರ್ಯಾ ಬ್ಯುಸಿಯಾಗಿದ್ದಾರೆ. ಪ್ರಚಾರದ ವೇಳೆ ತೆಲುಗು ಸಿನಿಮಾಗಳನ್ನು ಮಾಡುವ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಉತ್ತರಿಸಿದ ಐಶ್ವರ್ಯಾ ಪುಷ್ಪ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ತನಗೆ ಬಹುಪಾಲು ಪಾತ್ರಗಳನ್ನು ನೀಡಲಾಯಿತು ಮತ್ತು ತನ್ನ ಪೋಷಕರಿಗೆ ಹೆಮ್ಮೆ ತರುವಂತಹ ಪಾತ್ರವನ್ನು ಹುಡುಕುತ್ತಿದ್ದೇನೆ ಎಂದು ಹೇಳಿದರು.
ರಶ್ಮಿಕಾ ಭುಜದ ಮೇಲೆ ತಲೆ ಇಟ್ಟಿರುವ ವ್ಯಕ್ತಿ ಯಾರು? 'ನಾನು ಕೆಲವು ದಿನ ಸಿಗಲ್ಲ' ಎಂದಿದ್ದೇಕೆ ಕಿರಿಕ್ ಸುಂದರಿ?
'ನಾನು ಪುಷ್ಪ ಚಿತ್ರದ ಶ್ರೀವಲ್ಲಿ ಪಾತ್ರವನ್ನು ಮಾಡಲು ತುಂಬಾ ಇಷ್ಟಪಡುತ್ತೇನೆ. ರಶ್ಮಿಕಾ ಉತ್ತಮವಾಗಿ ನಟಿಸಿದ್ದಾರೆ. ಆದರೆ ನಾನು ಅವರಿಂದ ಉತ್ತಮವಾಗಿ ಫಿಟ್ ಆಗುತ್ತಿದ್ದೆ ಎಂದು ನಾನು ಭಾವಿಸುತ್ತೇನೆ. ಉತ್ತಮ ಪ್ರಾಜೆಕ್ಟ್‌ಗಳು ಬಂದರೆ ತೆಲುಗು ಚಿತ್ರಗಳಲ್ಲಿ ಕೆಲಸ ಮಾಡಲು ಇಷ್ಟಪಡುತ್ತೇನೆ' ಎಂದು ಐಶ್ವರ್ಯಾ ಹೇಳಿದ್ದಾರೆ. ಐಶ್ವರ್ಯಾ ಮಾತುಗಳೀಗ ರಶ್ಮಿಕಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.
ಯಾವಾಗ್ಲೂ ಸುಳ್ಳು ಹೇಳೋದೇ ಆಯ್ತು: ಮಾಂಸಾಹಾರ ಮುಟ್ಟಲ್ಲ ಎಂದು ತಿಂದು ತಗಲಾಕೊಂಡ ರಶ್ಮಿಕಾಗೆ ನೆಟ್ಟಿಗರ ತರಾಟೆ
ಪುಷ್ಪ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದ್ದು ದೇಶ ವಿದೇಶಗಳಲ್ಲಿ ಸದ್ದು ಮಾಡಿದೆ. ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ಆಗಿ ಹೊರಹೊಮ್ಮಿದರು. ಸಲ್ಮಾನ್ ಸಿನಿಮಾ ಬದುಕಿಗೆ ಮತ್ತಷ್ಟು ಮೈಲೇಜ್ ತಂದುಕೊಟ್ಟ ಸಿನಿಮಾವಾಗಿದೆ. ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಶ್ರೀವಲ್ಲಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಶ್ರೀವಲ್ಲಿಯಾಗಿ ರಶ್ಮಿಕಾ ಅಭಿಮಾನಿಗಳ ಹೃದಯ ಗೆದ್ದಿದ್ದರು. ಇದೀಗ ಪುಷ್ಪ-2 ಸಿನಿಮಾ ಸಿದ್ಧವಾಗುತ್ತಿದ್ದ ಚಿತ್ರೀಕರಣ ನಡೆಯುತ್ತಿದೆ. ಸುಕುಮಾರ್ ನಿರ್ದೇಶನದಲ್ಲಿ ಸಿನಿಮಾ ಮೂಡಿಬರುತ್ತಿದೆ. ದೊಡ್ಡ ಮಟ್ಟದಲ್ಲಿ ಪಾರ್ಟ್-2 ತಯಾರಾಗುತ್ತಿದೆ. ಸಿನಿಮಾ ಹೇಗಿರಲಿದೆ ಎಂದು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.