ದಳಪತಿ ವಿಜಯ್ 'ಲಿಯೋ' ಸಿನಿಮಾದಲ್ಲಿ RRR ಸ್ಟಾರ್; ಫೋಟೋ ವೈರಲ್

Published : Jul 04, 2023, 04:25 PM IST
ದಳಪತಿ ವಿಜಯ್ 'ಲಿಯೋ' ಸಿನಿಮಾದಲ್ಲಿ RRR ಸ್ಟಾರ್; ಫೋಟೋ ವೈರಲ್

ಸಾರಾಂಶ

ತಮಿಳು ಸ್ಟಾರ್ ದಳಪತಿ ವಿಜಯ್ ನಟನೆಯ ಲಿಯೋ ಸಿನಿಮಾದಲ್ಲಿ ತೆಲುಗು ಸ್ಟಾರ್ ರಾಮ್ ಚರಣ್ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. 

ಕಾಲಿವುಡ್ ಸ್ಟಾರ್ ದಳಪತಿ ವಿಜಯ್ ಸದ್ಯ ಲಿಯೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಲೋಕೇಶ್ ಕನಗರಾಜ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ ಇದಾಗಿದ್ದು ಭಾರಿ ನಿರೀಕ್ಷೆ ಮೂಡಿಸಿದೆ. ದಳಪತಿ ವಿಜಯ್ ಜೊತೆ ನಟಿ ತ್ರಿಷಾ ನಟಿಸುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಲೋಕೇಶ್ ಕನಗರಾಜ್ ಲಿಯೋ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಈ ಸಿನಿಮಾದ ಬಗ್ಗೆ ಈಗ ಮತ್ತೊಂದು ಸುದ್ದಿ ವೈರಲ್ ಆಗಿದೆ. ಲಿಯೋ ಸಿನಿಮಾಗೆ ತೆಲುಗು ಸ್ಟಾರ್ ಒಬ್ಬರು ಎಂಟ್ರಿ ಕೊಟ್ಟಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. 

ದಳಪತಿ ವಿಜಯ್ ನಟನೆಯ ಲಿಯೋ ಸಿನಿಮಾಗೆ ಎಂಟ್ರಿ ಕೊಟ್ಟ ತೆಲುಗು ಸ್ಟಾರ್ ಮತ್ಯಾರು ಅಲ್ಲ ಆರ್ ಆರ್ಆರ್ ಹೀರೋ ರಾಮ್ ಚರಣ್. ಲಿಯೋ ಸಿನಿಮಾದ ಪ್ರಮುಖ ಪಾತ್ರದಲ್ಲಿ ರಾಮ್ ಚರಣ್ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಅಂದಹಾಗೆ ಈ ಸುದ್ದಿ ವೈರಲ್ ಆಗಲು ಕಾರಣ ಇತ್ತೀಚಿಗಷ್ಟೆ ರಾಮ್ ಚರಣ್ ನಿರ್ದೇಶಕ ಲೋಕೇಶ್ ಕನಗರಾಜ್ ಅವರನ್ನು ಭೇಟಿಯಾಗಿದ್ದರು. ಇಬ್ಬರ ಫೋಟೋ ನೋಡಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಲಿಯೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಹಾಗಾಗಿ ಲೋಕೇಶ್ ಜೊತೆ ಮಾತುಕತೆ ಮಾಡುತ್ತಿದ್ದಾರೆ ಎನ್ನುವ ಮಾತುಕೇಳಿ ಬರುತ್ತಿದೆ. 

ಇನ್ನೂ ಕೆಲವರು ರಾಮ್ ಚರಣ್ ನಟಿಸುತ್ತಿರುವ ವಿಷಯವನ್ನು ತಳ್ಳಿ ಹಾಕಿದ್ದಾರೆ. ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ನಟ ರಾಮ್ ಚರಣ್ ಇಷ್ಟ ಪಡಲ್ಲ. ಹಾಗಾಗಿ ಲೋಕೇಶ್ ಕನಗರಾಜ್ ಆಫರ್ ಅನ್ನು ತಿರಸ್ಕರಿಸಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.

ದಳಪತಿ ವಿಜಯ್ ಬಗ್ಗೆ ಹೀಗೊಂದು ಸುದ್ದಿ ವೈರಲ್: ಸಿನಿಮಾದಿಂದ ಬ್ರೇಕ್ ಪಡಿತಾರಂತೆ ಸ್ಟಾರ್ ನಟ

ಲಿಯೋ ಸಿನಿಮಾ ಬಗ್ಗೆ

ಲೋಕೇಶ್ ಕನಗರಾಜ್ ನಿರ್ದೇಶನದ ಲಿಯೋ ಭಾರಿ ನಿರೀಕ್ಷೆ ಮೂಡಿಸಿದೆ. ಬ್ಲಾಕ್ಬಸ್ಟರ್ ಹಿಟ್ ಸಿನಿಮಾಗಳನ್ನು ನೀಡಿರುವ ವಿಜಯ್ ಮತ್ತು ಲೋಕೇಶ್ ಕಾಂಬಿನೇಷನ್‌ನಲ್ಲಿ ಬರ್ತಿರುವ ಸಿನಿಮಾ. ಹಾಗಾಗಿ ಈ ಸಿನಿಮಾದ ಮೇಲೆ ಕುತೂಹಲ, ನಿರೀಕ್ಷೆ ಹೆಚ್ಚಾಗಿದೆ. ತ್ರಿಷಾ ಕೃಷ್ಣನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. 15 ವರ್ಷಗಳ ನಂತರ ವಿಜಯ್ ಜೊತೆ ಜೋಡಿಯಾಗಿ ತ್ರಿಷಾ ನಟಿಸುತ್ತಿದ್ದಾರೆ. ಇನ್ನೂ ವಿಶೇಷ ಎಂದರೆ ಈ ಸಿನಿಮಾದಲ್ಲಿ ಸಂಜಯ್ ದತ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಸರ್ಜಾ ಕೂಡ ನಟಿಸಿದ್ದಾರೆ.

ಡ್ರಗ್ಸ್ ವೈಭವೀಕರಣ: 'ಲಿಯೋ' ಸ್ಟಾರ್ ದಳಪತಿ ವಿಜಯ್ ವಿರುದ್ಧ ದೂರು ದಾಖಲು

ರಾಮ್ ಚರಣ್ ಸಿನಿಮಾ ಬಗ್ಗೆ

ಆರ್ ಆರ್ ಆರ್ ಸಿನಿಮಾದ ಸೂಪರ್ ಸಕ್ಸಸ್ ಬಳಿಕ ರಾಮ್ ಚರಣ್ ಖ್ಯಾತ ನಿರ್ದೇಶಕ ಶಂಕರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಚಿತ್ರಕ್ಕೆ ಗೇಮ್ ಚೇಂಜರ್ ಎಂದು ಹೆಸರಿಡಲಾಗಿದೆ. ಈ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಜೊತೆಗೆ ರಾಮ್ ಚರಣ್ ಇತ್ತೀಚಿಗಷ್ಟೆ ತಂದೆಯಾಗಿದ್ದಾರೆ. ರಾಮ್ ಚರಣ್ ಪತ್ನಿಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮನೆಗೆ ಮಗಳು ಬಂದಿರುವ ಸಂಭ್ರಮವನ್ನು ಎಂಜಾಯ್ ಮಾಡುತ್ತಿದ್ದಾರೆ ರಾಮ್ ಚರಣ್.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಸಲ್ಮಾನ್ ಖಾನ್ ಹೊಂದಿರೋ ಅಷ್ಟೊಂದು ಆಸ್ತಿಯ ರಹಸ್ಯವೇನು? ಎಲ್ಲಿಲ್ಲಿ ಹೂಡಿಕೆ ಮಾಡಿದ್ದಾರೆ?
ತುಂಡುಡುಗೆ ತೊಟ್ಟು ಎಲ್ಲಾ ತೋರಿಸೋ ತರ ಬಟ್ಟೆ ಹಾಕಬೇಡಿ ಎಂದ ನಟನ ಪರ ನಿಂತ ನಟಿ ಶ್ರೀ ರೆಡ್ಡಿ