IT ರೇಡ್‌ನಲ್ಲಿ ಲೆಕ್ಕಕ್ಕೆ ಸಿಗದ 350 ಕೋಟಿ ಪತ್ತೆ; ನಿರ್ದೇಶಕ ಕಶ್ಯಪ್, ನಟಿ ತಾಪ್ಸಿಗೆ ಸಂಕಷ್ಟ!

Published : Mar 04, 2021, 08:02 PM IST
IT ರೇಡ್‌ನಲ್ಲಿ ಲೆಕ್ಕಕ್ಕೆ ಸಿಗದ 350 ಕೋಟಿ ಪತ್ತೆ; ನಿರ್ದೇಶಕ ಕಶ್ಯಪ್, ನಟಿ ತಾಪ್ಸಿಗೆ ಸಂಕಷ್ಟ!

ಸಾರಾಂಶ

ತೆರಿಗೆ ವಂಚನೆ ಆರೋಪದಡಿ ನಿರ್ದೇಶಕ ಅನುರಾಗ್ ಕಶ್ಯಪ್, ನಟಿ ತಾಪ್ಸಿ ಪನ್ನು ಸೇರಿದಂತೆ ಉದ್ಯಮ ಸ್ನೇಹಿತರ ಮನೆ ಹಾಗೂ ಕಚೇರಿ ಮೆಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಅಧಿಕಾರಿಗಳಿಗೆ ಬರೋಬ್ಬರಿ 350 ಕೋಟಿ ರೂಪಾಯಿ ಪತ್ತೆಯಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಮುಂಬೈ(ಮಾ.04): ಬಾಲಿವುಡ್ ನಟಿ ತಾಪ್ಸಿ ಪನ್ನು ಹಾಗೂ ನಿರ್ದೇಶಕ ಅನುರಾಗ್ ಕಶ್ಯಪ್ ಮನೆ, ಕಚೇರಿ ಮೇಲಿನ ಆದಾಯ ತೆರಿಗೆ(IT) ಅಧಿಕಾರಿಗಳ ದಾಳಿ ಭಾರಿ ಸಂಚಲನ ಸೃಷ್ಟಿಸಿತ್ತು. ಬುಧವಾರ(ಮಾ.03) ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದು ಪರ ವಿರೋಧಕ್ಕೂ ಕಾರಣವಾಗಿತ್ತು. ಇದೀಗ ಈ ದಾಳಿಯಲ್ಲಿ ಲೆಕ್ಕಕ್ಕೆ ಸಿಗದ, ತೆರಿಗೆ ವಂಚಿಸಿದ ಬರೋಬ್ಬರಿ 350 ಕೋಟಿ ರೂಪಾಯಿ ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನಟಿ ತಾಪ್ಸಿ, ಅನುರಾಗ್ ಕಶ್ಯ​ಪ್‌ಗೆ ಐಟಿ ಬಿಸಿ!.

ಅನುರಾಗ್ ಕಶ್ಯಪ್ ಹಾಗೂ ಸ್ನೇಹಿತರು ಆರಂಭಿಸಿರುವ ಫ್ಯಾಂಟಮ್ ಫಿಲ್ಮ್ ಪ್ರೊಡಕ್ಷನ್ ಕಂಪನಿ ತೆರಿಗೆ ವಂಚನೆಯಲ್ಲಿ ಬಹುಪಾಲು ಹೊಂದಿದೆ ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ. ಬಾಕ್ಸ್ ಆಫೀಸ್‌ನಿಂದ ಗಳಿಕೆಗೂ ತೋರಿಸಿರುವ ಆದಾಯಕ್ಕೂ ವ್ಯತ್ಯಾಸವಿದೆ. ಫ್ಯಾಂಟಮ್ ಪ್ರೊಡಕ್ಷನ್ ಕಂಪನಿ, ನಟಿ ತಾಪ್ಸಿ ಪನ್ನು ಒಟ್ಟು  350 ಕೋಟಿ ರೂಪಾಯಿ ಆದಾಯ ತೆರಿಗೆ ವಂಚಿಸಿರುವುದು ಪತ್ತೆಯಾಗಿದೆ ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ.

ಐಟಿ ಅಧಿಕಾರಿಗಳು ಮುಂಬೈ ಮತ್ತು ಪುಣೆಯ 30 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು. ಪುಣೆಯಲ್ಲಿ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದ ನಿರ್ದೇಶಕ ಅನುರಾಗ್ ಹಾಗೂ ನಟಿ ತಾಪ್ಸಿ ಪನ್ನು ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಆರೋಪಿಸಿತ್ತು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?