
ಕೆಲ ದಿನಗಳ ಹಿಂದೆ ಕದ್ದುಮುಚ್ಚಿ ನಟಿ ಜಾಹ್ನವಿ ಕಪೂರ್ ಮತ್ತು ಅವರ ಬಾಯ್ಫ್ರೆಂಡ್ ಶಿಖರ್ ಅವರ ಮದ್ವೆಯಾಗೋಯ್ತು ಎಂದು ಭಾರಿ ಸುದ್ದಿಯಾಗಿತ್ತು. ಏಕೆಂದರೆ, ಕೆಲ ದಿನಗಳ ಹಿಂದೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಸ್ಥಾನಕ್ಕೆ ಈ ಜೋಡಿ ಭೇಟಿ ನೀಡಿದ್ದ ಜೋಡಿ ಅಲ್ಲಿ ಒಟ್ಟಿಗೆ ಕುಳಿತು ದಂಪತಿಯಂತೆ ವಿಶೇಷ ಪೂಜೆ ಸಲ್ಲಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಇಬ್ಬರು ಒಟ್ಟಿಗೆ ಪೂಜೆ ಸಲ್ಲಿಸಿದ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದವು. ಮದುವೆ ಆಗೋಯ್ತಾ ಅಥವಾ ಶೀಘ್ರವೇ ಮದ್ವೆ ಆಗಲಿದ್ದಾರೆ ಎನ್ನುವ ಚರ್ಚೆ ಬಿ-ಟೌನ್ನಲ್ಲಿ ಶುರುವಾಗಿತ್ತು. ಈ ಬಗ್ಗೆ ನಟಿಯಾಗಲೀ ಶಿಖರ್ ಆಗಲೀ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ.
ಅಂದಹಾಗೆ, ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಹೆಸರು ಹಲವಾರು ಮಂದಿಯ ಜೊತೆ ಥಳಕು ಹಾಕಿಕೊಂಡಿದೆ. ಆದರೆ ಕೆಲ ವರ್ಷಗಳಿಂದ ಈಕೆ ಉದ್ಯಮಿ ಶಿಖರ್ ಪಹರಿಯಾ (Shikhar Pahariya) ಜೊತೆ ಸುತ್ತಾಟ ಮಾಡುತ್ತಿದ್ದಾರೆ. ದೇಶ-ವಿದೇಶ ತಿರುಗುತ್ತಿದ್ದಾರೆ. ಅಂದಹಾಗೆ, ಶಿಖರ್ ಪಹಾರಿಯಾ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಮೊಮ್ಮಗ. ಸುಶೀಲ್ ಕುಮಾರ್ ಶಿಂಧೆ (Sushil Kumar Shindhe) ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಶಿಖರ್ ಸ್ಮೃತಿ ಶಿಂಧೆ ಅವರ ಪುತ್ರ. ಶಿಖರ್ ಪಹರಿಯಾ ಜೊತೆ ಜಾಹ್ನವಿ ಡೇಟಿಂಗ್ ಮಾಡ್ತಿರೋ ವಿಷಯ ತುಂಬಾ ಹಳೆಯದು. ಇದಾಗಲೇ ಹಲವು ಕಡೆಗಳಲ್ಲಿ ಇವರು ಒಟ್ಟಿಗೇ ಕಾಣಿಸಿಕೊಂಡಿದ್ದಾರೆ. ಫೋಟೋ ಶೂಟ್ ಕೂಡ ಮಾಡಿಸಿಕೊಂಡಿದ್ದಾರೆ. ಬಾಲಿವುಡ್ನಲ್ಲಿ ಸರಿಯಾಗಿ ನೆಲೆ ಕಂಡುಕೊಳ್ಳಲು ಅವರು ಪ್ರಯತ್ನಿಸುತ್ತಿರುವ ನಡುವೆಯೇ ಹೀಗೆಲ್ಲಾ ಸುದ್ದಿಯಾಗುತ್ತಲೇ ಇರುವ ಜಾಹ್ನವಿ ಈಗ ಬಾಯ್ ಫ್ರೆಂಡ್ (Boy Friend) ಜೊತೆ ಟ್ರಿಪ್ಗೆ ಹೋಗಿರುವ ಫೋಟೋಗಳು ವೈರಲ್ ಆಗಿದ್ದವು.
ಸೂಟ್-ಬೂಟ್ ಬದ್ಲು ಚೆಡ್ಡಿ-ಬನಿಯನ್‌ನಲ್ಲಿ ಮದ್ವೆಯಾದ ಗಂಡನ ಬಗ್ಗೆ ಆಮೀರ್ ಪುತ್ರಿ ಇರಾ ಹೇಳಿದ್ದೇನು?
ಕೆಲ ತಿಂಗಳ ಹಿಂದಷ್ಟೇ ಜಾಹ್ನವಿ ಕಪೂರ್ ಹಾಫ್ ಸ್ಯಾರಿ ತೊಟ್ಟು ಬಾಯ್ಫ್ರೆಂಡ್ ಜೊತೆ ತಿರುಪತಿಗೆ ಭೇಟಿ ಕೊಟ್ಟಿದ್ದರು. ಅದಾದ ಬಳಿಕ ಕೆಲವು ದೇವಾಲಯಗಳಲ್ಲಿ ಜೋಡಿ ಕಂಡುಬಂದಿತ್ತು. ಒಟ್ಟಿಗೇ ಕುಳಿತು ದಂಪತಿಯಂತೆ ಪೂಜೆಯನ್ನೂ ನೆರವೇರಿಸಿದ್ದರು. ಕಳೆದ ಬಾರಿ ತಿರುಪತಿಗೆ ಹೋಗಿದ್ದಾಗ ಅವರ ಬೆರಳಿನಲ್ಲಿ ವಜ್ರದ ಉಂಗುರ ಎಲ್ಲರ ಕಣ್ಣು ಕುಕ್ಕಿಸಿತ್ತು. ಜಾಹ್ನವಿ ಅವರು ತಮ್ಮ ಕೂದಲನ್ನು ಸರಿಪಡಿಸಿಕೊಳ್ಳುವ ಸಮಯದಲ್ಲಿ ಈ ವಜ್ರದ ಉಂಗುರ ಎಲ್ಲರ ಕಣ್ಣಿಗೆ ಬಿದ್ದಿದ್ದು, ಅದರ ಬಗ್ಗೆ ಸಕತ್ ಸುದ್ದಿಯಾಗಿತ್ತು. ಶಿಖರ್ ಪಹರಿಯಾ ಜೊತೆ ಗುಟ್ಟಾಗಿ ಎಂಗೇಜ್ಮೆಂಟ್ ಆಯ್ತಾ ಎಂದು ಸುದ್ದಿಯಾಗಿತ್ತು.
ಇದೀಗ, ನಟಿ ಮತ್ತೆ ತಿರುಪತಿಯಲ್ಲಿ ಕಾಣಿಸಿಕೊಂಡಿದ್ದಾರೆ, ಅದೂ ಶಿಖರ್ ಜೊತೆ. ಇದರಿಂದ ಹಲವರು ನಟಿಗೆ ಬುದ್ಧಿಮಾತು ಹೇಳುತ್ತಿದ್ದಾರೆ. ನಿಮ್ಮಿಬ್ಬರ ಸಂಬಂಧ ಎಲ್ಲರಿಗೂ ತಿಳಿದಿದೆ. ಆತ ಬಾಯ್ಫ್ರೆಂಡ್ ಎಂದು ಒಪ್ಪಿಕೊಳ್ಳದೇ ಹೀಗೆ ಸುತ್ತಾಡುತ್ತಿರುವುದು ಸರಿಯಲ್ಲ ಎಂದು ಹಲವರು ಹೇಳುತ್ತಿದ್ದರೆ, ಸ್ನೇಹಿತನ ಜೊತೆ ಟೆಂಪಲ್ ರನ್ ಮಾಡುವ ಉದ್ದೇಶ ಏನಪ್ಪಾ ಎಂದು ಇನ್ನು ಕೆಲವರು ಕೇಳುತ್ತಿದ್ದಾರೆ. ಈಚೆಗೆ ಕಾಫಿ ವಿತ್ ಕರಣ್ ಷೋದಲ್ಲಿ ಜಾಹ್ನವಿ ಬಾಯಿತಪ್ಪಿ ಶಿಖರ್ ಹೆಸರು ಹೇಳಿದ್ದರೂ ಇದುವರೆಗೆ ಸಾರ್ವಜನಿಕವಾಗಿ ಸಂಬಂಧ ಒಪ್ಪಿಕೊಳ್ಳಲಿಲ್ಲ.
ಅಪ್ಪ-ಅಮ್ಮನ ಅತಿಯಾದ ನಿರೀಕ್ಷೆ, ಮಕ್ಕಳು ನೇಣಿಗೆ ಕೊರಳೊಡ್ಡುವವರೆಗೆ... ಡ್ರಾಮಾ ಜ್ಯೂನಿಯರ್ಸ್ ಪಾಠವಿದು...
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.