12ನೇ ವಯಸ್ಸಲ್ಲೇ ಅಶ್ಲೀಲ ವೆಬ್​ಸೈಟ್​ಗಳಲ್ಲಿ ಅಪ್​ಲೋಡ್​ ಆಗಿತ್ತು ಜಾಹ್ನವಿ ಕಪೂರ್​ ಫೋಟೋ; ಆಗಿದ್ದೇನು?

Published : May 19, 2024, 02:21 PM IST
12ನೇ ವಯಸ್ಸಲ್ಲೇ ಅಶ್ಲೀಲ ವೆಬ್​ಸೈಟ್​ಗಳಲ್ಲಿ ಅಪ್​ಲೋಡ್​ ಆಗಿತ್ತು ಜಾಹ್ನವಿ ಕಪೂರ್​ ಫೋಟೋ; ಆಗಿದ್ದೇನು?

ಸಾರಾಂಶ

12ನೇ ವಯಸ್ಸಲ್ಲೇ ಅಶ್ಲೀಲ ವೆಬ್​ಸೈಟ್​ಗಳಲ್ಲಿ ಅಪ್​ಲೋಡ್​ ಆಗಿತ್ತು ಜಾಹ್ನವಿ ಕಪೂರ್​ ಫೋಟೋಗಳು. ಈ ಕುರಿತು ನಟಿ ಹೇಳಿದ್ದೇನು?   

ಬಾಲಿವುಡ್​ ಎವರ್​ಗ್ರೀನ್​ ತಾರೆ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್​, ಆಗಾಗ್ಗೆ ಸದ್ದು ಮಾಡುತ್ತಲೇ ಇರುತ್ತಾರೆ. ಸಿನಿಮಾಗಳಲ್ಲಿ ಅಲ್ಲದಿದ್ದರೂ ಸೋಷಿಯಲ್ ಮೀಡಿಯಾಗಳಲ್ಲಿ ಇವರದ್ದೇ ಹವಾ. ಸದಾ ಹಾಟ್​ ಫೋಟೋಗಳನ್ನು ಶೇರ್​ ಮಾಡಿಕೊಂಡು ಜಾಹ್ನವಿ ಹಲವು ಬಾರಿ ಟ್ರೋಲ್​ಗೆ ಒಳಗಾಗಿರೋದೂ ಇದೆ. ಶ್ರೀದೇವಿ ಪುತ್ರಿಯಾಗಿ ನಿಮಗೆ ಇದೆಲ್ಲಾ ಶೋಭೆ ತರುವುದಿಲ್ಲ ಎಂದು ಹೇಳಿಸಿಕೊಂಡಿರುವುದೂ ಆಗಿದೆ. ಅದೇನೇ ಇದ್ದರೂ ಇಂದಿನ ಚಿತ್ರನಟಿಯರ ಬಗ್ಗೆ ಬೇರೆ ಹೇಳಬೇಕಾಗಿಲ್ಲವಲ್ಲ.  ತಮ್ಮ ದೇಹಸಿರಿಯನ್ನು ತೋರಿಸುವ ಡ್ರೆಸ್​ ಹಾಕಿಕೊಂಡರೇನೇ ತಮಗೆ ಬೆಲೆ ಎನ್ನುವಂಥ ಸ್ಥಿತಿ ಅವರದ್ದು. ಇದೀಗ ನಟಿ ಆಘಾತಕಾರಿ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಅದೇನೆಂದರೆ, ಜಾಹ್ನವಿ ಪ್ರಾಥಮಿಕ ಶಾಲೆಯಲ್ಲಿ ಇದ್ದಾಗಲೇ ಇವರ ಫೋಟೋಗಳು ಪೋರ್ನ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಆಗಿತ್ತಂತೆ!

ಜಾಹ್ನವಿ ಅವರಿಗೆ ಈಗ ವಯಸ್ಸು 27.ಆದರೆ  12 ವರ್ಷದ ಬಾಲಕಿ ಆಗಿದ್ದಾಗಲೇ ಅಶ್ಲೀಲ ವೆಬ್​ಸೈಟ್​ಗಳಲ್ಲಿ ಅವರ ಫೋಟೋಗಳನ್ನು ಕಿಡಿಗೇಡಿಗಳು ಹಾಕಿದ್ದರು. ಈ ಕುರಿತು ನಟಿ, ತಮ್ಮ ಮುಂಬರುವ ಚಿತ್ರ ‘ಮಿಸ್ಟರ್​ ಆ್ಯಂಡ್​ ಮಿಸೆಸ್​ ಮಾಹಿ’ ಸಿನಿಮಾದ ಸಲುವಾಗಿ ಕರಣ್​ ಜೋಹರ್​ ನಡೆಸಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.   ಕೆಲವರು ನನ್ನ ಅನುಮತಿಯಿಲ್ಲದೆ ನನ್ನ ಮತ್ತು ಅವರ ಸಹೋದರಿಯ ಫೋಟೋಗಳನ್ನು ತೆಗೆದುಕೊಂಡಿದ್ದರು. ಅವುಗಳನ್ನು  ಮಾರ್ಫಿಂಗ್ ಮಾಡಿ ಪೋರ್ನ್ ವೆಬ್‌ಸೈಟ್‌ಗಳಲ್ಲಿ ಹಾಕಿದ್ದರು. ಆದರೆ ಇದು ಮಾರ್ಫ್‌ ಮಾಡಿದ ಚಿತ್ರಗಳು ಎಂದು ಹಲವರಿಗೆ ತಿಳಿದೇ ಇರಲಿಲ್ಲ. ನಿಜ ಎಂದು ನಂಬಿದ್ದರು. ಆ ಚಿಕ್ಕ ವಯಸ್ಸಿನಲ್ಲಿಯೇ ನನಗೆ ತುಂಬಾ ಆಘಾತವಾಗಿತ್ತು. ನನ್ನ ಫ್ರೆಂಡ್ಸ್‌ಕೂಡ ಗೇಲಿ ಮಾಡುತ್ತಿದ್ದರು. ಆ ವಯಸ್ಸಿನಲ್ಲಿ ಏನಾಗುತ್ತಿದೆ ಎಂದು ನನಗೆ ತಿಳಿದೇ ಇರಲಿಲ್ಲ ಎಂದಿದ್ದಾರೆ. 

51 ವರ್ಷವಾದ್ರೂ ಸಿತಾರಾ ಸಿಂಗಲ್​ ಯಾಕೆ? ನಟಿಯ ಬದುಕಿನ ಆ ಕರಾಳ ಅಧ್ಯಾಯ ಬಹಿರಂಗ...

ನನ್ನನ್ನು ಆಗ ಮೀಡಿಯಾಗಳೂ ಕೆಟ್ಟದ್ದಾಗಿ ಬಿಂಬಿಸಿದವು.  ಅಪ್ಪ-ಅಮ್ಮನ ಜೊತೆ ನಾನು ಕಾರ್ಯಕ್ರಮವೊಂದಕ್ಕೆ ಹೋಗಿದ್ದೆ. ಆ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೋಗಳು ಅವು.  ಅವುಗಳನ್ನು  ಮಾರ್ಫಿಂಗ್ ಮಾಡಿ ಪೋರ್ನ್ ವೆಬ್‌ಸೈಟ್‌ಗಳಲ್ಲಿ ಹಾಕಿದ್ದರು ಎಂದು ತಿಳಿಸಿದ್ದಾರೆ. ‘ಮಿಸ್ಟರ್​ ಆ್ಯಂಡ್​ ಮಿಸೆಸ್​ ಮಾಹಿ’ ಸಿನಿಮಾದಲ್ಲಿ ಜಾನ್ವಿ ಕಪೂರ್​ ಅವರು ನಟಿಸಿದ್ದಾರೆ. ಮೇ 31ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ನಟ ರಾಜ್​ಕುಮಾರ್​ ರಾವ್​ ಜೊತೆ ಜಾಹ್ನವಿ ಕಪೂರ್​ ತೆರೆಹಂಚಿಕೊಂಡಿದ್ದಾರೆ. ಚಿತ್ರದ ಕುರಿತು ಕರಣ್​ ಜೋಹರ್​ ಅವರ ಸಂದರ್ಶನ ನಡೆಸಿದ್ದಾರೆ.  

ಅಂದಹಾಗೆ,  ಶ್ರೀದೇವಿ ಪುತ್ರಿ  ಜಾಹ್ನವಿ ಕಪೂರ್​ ಹೆಸರು ಹಲವಾರು ಮಂದಿಯ ಜೊತೆ ಥಳಕು ಹಾಕಿಕೊಂಡಿದೆ. ಆದರೆ ಕೆಲ ವರ್ಷಗಳಿಂದ  ಈಕೆ ಉದ್ಯಮಿ ಶಿಖರ್​ ಪಹರಿಯಾ (Shikhar Pahariya) ಜೊತೆ ಸುತ್ತಾಟ ಮಾಡುತ್ತಿದ್ದಾರೆ. ದೇಶ-ವಿದೇಶ ತಿರುಗುತ್ತಿದ್ದಾರೆ. ಅಂದಹಾಗೆ, ಶಿಖರ್ ಪಹಾರಿಯಾ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಮೊಮ್ಮಗ. ಸುಶೀಲ್ ಕುಮಾರ್ ಶಿಂಧೆ (Sushil Kumar Shindhe) ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಶಿಖರ್ ಸ್ಮೃತಿ ಶಿಂಧೆ ಅವರ ಪುತ್ರ. ಶಿಖರ್​ ಪಹರಿಯಾ ಜೊತೆ ಜಾಹ್ನವಿ ಡೇಟಿಂಗ್​  ಮಾಡ್ತಿರೋ ವಿಷಯ ತುಂಬಾ ಹಳೆಯದು. ಇದಾಗಲೇ ಹಲವು ಕಡೆಗಳಲ್ಲಿ ಇವರು ಒಟ್ಟಿಗೇ ಕಾಣಿಸಿಕೊಂಡಿದ್ದಾರೆ. ಫೋಟೋ ಶೂಟ್​ ಕೂಡ ಮಾಡಿಸಿಕೊಂಡಿದ್ದಾರೆ.  ಬಾಲಿವುಡ್​ನಲ್ಲಿ ಸರಿಯಾಗಿ ನೆಲೆ ಕಂಡುಕೊಳ್ಳಲು ಅವರು ಪ್ರಯತ್ನಿಸುತ್ತಿರುವ ನಡುವೆಯೇ ಹೀಗೆಲ್ಲಾ ಸುದ್ದಿಯಾಗುತ್ತಲೇ ಇರುವ ಜಾಹ್ನವಿ ಈಗ ಬಾಯ್​ ಫ್ರೆಂಡ್​ (Boy Friend) ಜೊತೆ ಟ್ರಿಪ್​ಗೆ ಹೋಗಿರುವ ಫೋಟೋಗಳು ವೈರಲ್​ ಆಗಿದ್ದವು.  

 Sanjay Leela Bhansali:ರೇಷನ್​ನಲ್ಲಿ ಕ್ಯೂ ನಿಲ್ಲೋ ಮಹಿಳೆಯರಿಗಿಂತ ನನಗೆ ವೇಶ್ಯೆಯರ ಮೇಲೆ ಹೆಚ್ಚು ವ್ಯಾಮೋಹ, ಏಕೆಂದ್ರೆ...
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?