
ಕನ್ನಡ ಕಿರುತೆರೆಲೋಕದ ಜನಪ್ರಿಯ ಧಾರಾವಾಹಿಗಳಲ್ಲಿ ಜೊತೆ ಜೊತೆಯಲಿ(Jothe Jotheyali) ಕೂಡ ಒಂದು. ಈ ಧಾರಾವಾಹಿಯಲ್ಲಿ ಅನು ಸಿರಿಮನೆಯಾಗಿ ಕನ್ನಡ ಪ್ರೇಕ್ಷಕರ ಮನಗೆದ್ದ ನಟಿ ಮೇಘಾ ಶೆಟ್ಟಿ(Megha Shetty). ಈ ಧಾರಾವಾಹಿ ಮೂಲಕ ಪ್ರಸಿದ್ಧಿ ಪಡೆದಿರುವ ನಟಿ ಮೇಘಾ ಶೆಟ್ಟಿ ಇದೀಗ ಬೆಳ್ಳಿ ಪರದೆ ಮೇಲು ಮಿಂಚಲು ಸಜ್ಜಾಗಿದ್ದಾರೆ. ಈ ನಡುವೆ ಮೇಘಾ ತೆಲುಗು ಸ್ಟಾರ್ ನಟ ಮಹೇಶ್ ಬಾಬು(Mahesh Babu) ಜೊತೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮೇಘಾ ಶೆಟ್ಟಿ ತೆಲುಗು ಪ್ರಿನ್ಸ್ ಮಹೇಶ್ ಬಾಬು ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಸೃಷ್ಟಿಕೊಂಡಿರುವ ನಟಿ ಮೇಘಾ ಶೆಟ್ಟಿ ಅವರಿಗೆ ಸಿನಿಮಾಗಳಿಂದೂ ಆಫರ್ ಬರುತ್ತಿವೆ. ಆದರೆ ಅಳೆದು ತೂಗಿ ಪಾತ್ರ ಆಯ್ಕೆ ಮಾಡಿಕೊಳ್ಳುತ್ತಿರುವ ಮೇಘಾ ಏಕಾಏಕಿ ತೆಲುಗು ಸ್ಟಾರ್ ಪಕ್ಕದಲ್ಲಿ ನಿಂತು ಪೋಸ್ ನೀಡುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಂದಹಾಗೆ ಮಹೇಶ್ ಬಾಬು ಜೊತೆ ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಗಳನ್ನು ಸ್ವತಃ ಮೇಘಾ ಶೆಟ್ಟಿ ಶೇರ್ ಮಾಡಿದ್ದಾರೆ. ಮೂರು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿರುವ ಮೇಘಾ, ಮಹೇಶ್ ಬಾಬು ಪಕ್ಕದಲ್ಲಿ ನಿಂತಿದ್ದಾರೆ. ಜಾಹೀರಾತಿನಲ್ಲಿ ಮೇಗಾ ಶೆಟ್ಟಿ, ಮಹೇಶ್ ಬಾಬು ಪತ್ನಿಯಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಕೆಂಡಸಂಪಿಗೆ ಧಾರಾವಾಹಿಗೆ ಬಂಡವಾಳ ಹಾಕುತ್ತಿದ್ದಾರೆ 'ಜೊತೆ ಜೊತೆಯಲಿ' ಮೇಘಾ ಶೆಟ್ಟಿ!
ಅಂದಹಾಗೆ ಮೇಘಾ ಶೆಟ್ಟಿ ತೆಲುಗು ಸ್ಟಾರ್ ಮಹೇಶ್ ಬಾಬು ಜೊತೆ ನಟಿಸುವ ಅವಕಾಶ ಗಿಟ್ಟಿಸಿಕೊಂಡ್ರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಇದು ಜಾಹೀರಾತಿನ ಚಿತ್ರೀಕರಣ ಎಂದು ಹೇಳಲಾಗುತ್ತಿದೆ. ಜಾಹೀರಾತಿನಲ್ಲಿ ಮೇಘಾ ಶೆಟ್ಟಿ ಮಹೇಶ್ ಬಾಬು ಜೊತೆ ತೆರೆಹಂಚಿಕೊಂಡಿದ್ದಾರೆ. ಮಹೇಶ್ ಬಾಬು ಜೊತೆ ನಟಿಸಲು ಅನೇಕ ನಟಿಯರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಹಾಗಿರುವಾಗ ಮೇಘಾ ಶೆಟ್ಟಿ, ಮಹೇಶ್ ಬಾಬು ಜೊತೆ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವುದು ನಿಜಕ್ಕೂ ಮೇಘಾ ಅಭಿಮಾನಿಗಳಿಗೆ ಸಂತಸದ ವಿಚಾರ.
ಈ ಫೋಟೋಗೆ ಅಭಿಮಾನಿಗಳು ಹಾರ್ಟ್ ಇಮೋಜಿ ಹಾಕಿ ಮೆಚ್ಚುಗೆಯ ಕಾಮೆಂಟ್ ಮಾಡುತ್ತಿದ್ದಾರೆ. ಅಂದಹಾಗೆ ಮೇಘಾ ಶೆಟ್ಟಿ ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಸಿನಿಮಾ ಆಫರ್ ಹೆಚ್ಚಾಗುತ್ತಿದ್ದಂತೆ ಅನೇಕರು ಧಾರಾವಾಹಿಯಿಂದ ಹೊರಬರುತ್ತಾರೆ ಆದರೆ ಇನ್ನೂ ಜೊತೆ ಜೊತೆಯಲ್ಲಿ ನಟಿಸುತ್ತಿದ್ದಾರೆ. ಅಂದಹಾಗೆ ಮೇಘಾ ಶೆಟ್ಟಿ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ ತ್ರಿಬಲ್ ರೈಡಿಂಗ್ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ನಾಯಕನಾಗಿ ಕಾಣಿಸಿಕೊಳ್ಳುವ ಮೂಲಕ ಮೇಘಾ ಚೊಚ್ಚಲ ಸಿನಿಮಾ ಪ್ರಾರಂಭ ಮಾಡಿದ್ದಾರೆ.
Kannada serial: ಜೊತೆ ಜೊತೆಯಲಿ ಸೀರಿಯಲ್ ನಲ್ಲಿ ಹೀರೋನೆ ವಿಲನ್, ಜನ ಏನಂತಾರೆ?
ಮೊದಲ ಸಿನಿಮಾ ಬಿಡುಗಡೆಗೂ ಮೊದಲೇ ಮೇಘಾ ಶೆಟ್ಟಿ 2ನೇ ಸಿನಿಮಾಗೆ ಸಹಿ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ನಟನೆಯ ದಿಲ್ ಪಸಂದ್ ಸಿನಿಮಾಗೆ ಮೇಘಾ ಶೆಟ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾದಲ್ಲಿ ನಟಿ ನಿಶ್ವಿಕಾ ನಾಯ್ಡು ಕೂಡ ನಟಿಸುತ್ತಿದ್ದಾರೆ. ಉತ್ತಮ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳವ ಮೂಲಕ ಕಿರುತೆರೆ ಮತ್ತು ಬೆಳ್ಳಿತೆರೆ ಎರಡನ್ನು ಬ್ಯಾಲೆನ್ಸ್ ಮಾಡಿಕೊಂಡು ಹೋಗುವುದಾಗಿ ಹೇಳುವ ಮೇಘಾ ಶೆಟ್ಟಿ ನಟನೆ ಜೊತೆಗೆ ಧಾರಾವಾಹಿ ನಿರ್ಮಾಣದ ಕಡೆಯೂ ಗಮನ ಹರಿಸಿದ್ದಾರೆ. ಬಣ್ಣ ಲೋಕದಲ್ಲಿ ವೇಗವಾಗಿ ಬೆಳೆಯುತ್ತಿರುವ ನಟಿಯಲ್ಲಿ ಮೇಘಾ ಶೆಟ್ಟಿ ಕೂಡ ಒಬ್ಬರು. ಸಾಕಷ್ಟು ಬ್ಯುಸಿ ಇರುವ ಮೇಘಾ ಮುಂದಿನ ಸಿನಿಮಾಗಳ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.