
ಜೊತೆ ಜೊತೆಯಲಿ(Jothe Jotheyali) ಖ್ಯಾತಿಯ ನಟಿ ಮೇಘಾ ಶೆಟ್ಟಿ(Megha Shetty) ಇದೀಗ ಮತ್ತೊಂದು ಹೊಸ ಸಿನಿಮಾ ಮೂಲಕ ಸದ್ದು ಮಾಡುತ್ತಿದ್ದಾರೆ. ಈಗಾಗಲೇ ಗೋಲ್ಡನ್ ಸ್ಟಾರ್ ಗಣೇಶ್‌ಗೆ ನಾಯಕಿಯಾಗಿ ಕಾಣಿಸಿಕೊಳ್ಳುವ ಮೂಲಕ ಸ್ಯಾಂಡಲ್ ವುಡ್‌ಗೆ ಎಂಟ್ರಿ ಕೊಟ್ಟಿರುವ ಮೇಘಾ ಮೊದಲ ಸಿನಿಮಾ ರಿಲೀಸ್‌ಗೂ ಮೊದಲೇ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ. ಧಾರಾವಾಹಿ ಮತ್ತು ಸಿನಿಮಾ ಎರಡರಲ್ಲೂ ಬ್ಯುಸಿಯಾಗಿರುವ ಮೇಘಾ ನಟನೆಯ ಹೊಸ ಸಿನಿಮಾದ ಟೈಟಲ್ ಮತ್ತು ಪೋಸ್ಟರ್ ರಿಲೀಸ್ ಆಗಿದೆ.
ಮೇಘಾ ಹೊಸ ಚಿತ್ರಕ್ಕೆ 'ಆಫ್ಟರ್ ಆಪರೇಷನ್ ಲಂಡನ್ ಕೆಫೆ' (After Operation London Cafe) ಎಂದು ಹೆಸರಿಡಲಾಗಿದೆ. ಈಗಾಗಲೇ ಸಿನಿಮಾದ ಟೈಟಲ್ ಮತ್ತು ಪೋಸ್ಟರ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸಲಾಗಿದೆ. ಚಿತ್ರಕ್ಕೆ ನಿರ್ದೇಶಕ ಸಡಗರ ರಾಘವೇಂದ್ರ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊದಲನೆಯ ನಿರ್ದೇಶನಕ್ಕೆ ಗೆಳೆಯ ರೀಷಬ್ ಶೆಟ್ಟಿ(Rishab Shetty) ಸಾಥ್ ನೀಡಿದ್ದಾರೆ.
ಅಂದಹಾಗೆ ಈ ಸಿನಿಮಾದಲ್ಲಿ ನಾಯಕನಾಗಿ ಕವೀಶ್ ಶೆಟ್ಟಿ(Kavish Shetty) ನಟಿಸುತ್ತಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ ಸೇರಿದಂತೆ ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂನಲ್ಲಿ ಬಿಡುಗಡೆ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದೆ. ಚಿತ್ರದ ಟೈಟಲ್ ಬಿಡುಗಡೆಯ ವಿಚಾರದಲ್ಲಿ ಮೊದಲಿನಿಂದಲೂ ಕುತೂಹಲ ಹುಟ್ಟಿಸಿದ್ದ ಚಿತ್ರತಂಡ ಕೊನೆಗೂ ನಾಯಕ ಕವೀಶ್ ಶೆಟ್ಟಿ ಹುಟ್ಟುಹಬ್ಬದ ಉಡುಗೊರೆಯಾಗಿ ಪ್ಯಾನ್ ಇಂಡಿಯಾ ಮಟ್ಟದ ಆಕರ್ಷಕ ಟೈಟಲ್ ಬಿಡುಗಡೆ ಮಾಡಿ ಚಿತ್ರದ ಬಗ್ಗೆ ಇನ್ನಷ್ಟೂ ಕುತೂಹಲ ಮೂಡಿಸಿದೆ.
ಮಹೇಶ್ ಬಾಬು ಜೊತೆ ಕಾಣಿಸಿಕೊಂಡ 'ಜೊತೆ ಜೊತೆಯಲಿ' ಮೇಘಾ ಶೆಟ್ಟಿ; ಫೋಟೋ ವೈರಲ್
'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ಇದೊಂದು ದೊಡ್ಡ ಮಟ್ಟದ ಆಕ್ಷನ್ ಪ್ಯಾಕೇಜ್ ಸಿನಿಮಾ ಎನ್ನುವುದನ್ನು ಟೈಟಲ್‌ನಲ್ಲೇ ರುಜು ಮಾಡಿದೆ. ಹಾಲಿವುಡ್ ಶೈಲಿಯ ಪೋಸ್ಟರ್ ನಲ್ಲಿರುವ ನಾಯಕ ಕವೀಶ್ ಶೆಟ್ಟಿ ಖದರ್ ಅದಕ್ಕೆ ಪುಷ್ಟಿ ನೀಡಿದೆ.
ನುರಿತ ತಾಂತ್ರಿಕ ವರ್ಗ ಹಾಗೂ ಕನ್ನಡ, ಮರಾಠಿ ಮತ್ತು ಬಹುಭಾಷಾ ಕಲಾವಿದರನ್ನು ಹೊಂದಿರುವ ಲಂಡನ್ ಕೆಫೆಯ ಗುಟ್ಟು ಬಿಟ್ಟು ಕೊಡದ ನಿರ್ದೇಶಕ ಸಡಗರ ರಾಘವೇಂದ್ರ ಹೆಸರಿಗೆ ತಕ್ಕಂತೆ ಚಿತ್ರ ಪ್ರೇಕ್ಷಕರ ನಿರೀಕ್ಷೆಯನ್ನು ನಿರಾಸೆಗೊಳಿಸುವುದಿಲ್ಲ ಎನ್ನುತ್ತಾ ಚಿತ್ರದ ಟೈಟಲ್ ಬಿಡುಗಡೆಗೆ ಸಹಕರಿಸಿದ ಗೆಳೆಯ ರೀಷಬ್ ಶೆಟ್ಟಿಗೆ ಈ ಮೂಲಕ ಕೃತಜ್ಞತೆಯನ್ನು ತಿಳಿಸಿದರು.
ಜೊತೆ ಜೊತೆಯಲಿ ಧಾರಾವಾಹಿ ಬದುಕು ಬದಲಿಸಿತು: Megha Shetty
ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ಮರಾಠಿಯ ಹೆಸರಾಂತ ಡ್ರೀಮರ್ಸ್ ಪ್ರೊಡಕ್ಷನ್ ದೀಪಕ್ ರಾಣೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು. ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.