
ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ಆರ್ ಆರ್ ಆರ್(RRR) ಸಿನಿಮಾ ಬಿಡುಗಡೆ ಸಿದ್ಧವಾಗುತ್ತಿದೆ. ಇಂದು (ಮಾರ್ಚ್ 19) ಆರ್ ಆರ್ ಆರ್ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮ ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿದ್ದೆ. ಅದ್ದೂರಿಯಾಗಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಈಗಾಗಲೇ ಆರ್ ಆರ್ ಆರ್ ತಂಡ ಚಿಕ್ಕಬಳ್ಳಾಪುರದಲ್ಲಿ ಬೀಡುಬಿಟ್ಟಿದೆ. ಈ ಅದ್ದೂರಿ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಭಾಗವಹಿಸಲಿದ್ದಾರೆ. ಅದಕ್ಕೂ ಮೊದಲು ನಂದಿ ಬೆಟ್ಟದ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಆರ್ ಆರ್ ಆರ್ ತಂಡ ಸುದ್ದಿಗೋಷ್ಠಿ ನಡೆಸಿದೆ (RRR pressmeet). ಈ ವೇಳೆ ಸಿನಿಮಾ ಬಗ್ಗೆ ಹಾಗೂ ಪ್ರೀ-ರಿಲೀಸ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ ನಿರ್ದೇಶಕ ರಾಜಮೌಳಿ.
ಸಂಜೆ ನಡೆಯಲಿರುವ ಪ್ರೀ-ರಿಲೀಸ್ ಇವೆಂಟ್ನಲ್ಲಿ(pre release event of rrr) ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಗೆ (Puneeth Rajkumar) ಆರ್ ಆರ್ ಆರ್ ತಂಡ ವಿಶೇಷ ನಮನ ಅರ್ಪಿಸಲಿದೆ. ಪುನೀತ್ ಹಾಡುಗಳನ್ನು ರಿಮಿಕ್ಸ್ ಮಾಡಿ ಡ್ಯಾನ್ಸ್ ಮಾಡಿ ಪರ್ಫಾಮೆನ್ಸ್ ನೀಡಲು ಸಿದ್ಧತೆ ನಡೆದಿದೆ ಎನ್ನುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರೆಸ್ ಮೀಟ್ ನಲ್ಲಿ ಸಾಕಷ್ಟು ವಿಚಾರಗಳನ್ನು ಚಿತ್ರತಂಡ ಬಹಿರಂಗ ಪಡಿಸಿದೆ. ಇದೇ ಸಮಯದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜೇಮ್ಸ್ ಸಿನಿಮಾದ ಬಗ್ಗೆಯೂ ಚಿತ್ರತಂಡ ಮಾತನಾಡಿದೆ.
ಆರ್ ಆರ್ ಆರ್ ಸಿನಿಮಾ ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ತೆಲುಗು ಮಾತ್ರವಲ್ಲದೆ ದೇಶದ ಎಲ್ಲಾ ಭಾಗಗಳಲ್ಲಿಯೂ ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿಯೂ ಆರ್ ಆರ್ ಆರ್ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಕರ್ನಾಟಕದಲ್ಲಿ ಜೇಮ್ಸ್ ಸಿನಿಮಾ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆರ್ ಆರ್ ಆರ್ ಸಿನಿಮಾದಿಂದ ಜೇಮ್ಸ್ ಚಿತ್ರಕ್ಕೆ ಸಮಸ್ಯೆ ಆಗುತ್ತಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ತಂಡ, ಜೇಮ್ಸ್ ಸಿನಿಮಾಗೆ ಯಾವುದೇ ಸಮಸ್ಯೆ ಆಗದಂತೆ ಚಿತ್ರಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
RRR; ಉಕ್ರೇನ್ ಬಾಡಿಗಾರ್ಡ್ ಗೆ ನಟ ರಾಮ್ ಚರಣ್ ನೆರವು
ಇದೇ ಸಮಯದಲ್ಲಿ ಪುನೀತ್ ಮತ್ತು ಜೇಮ್ಸ್ ಬಗ್ಗೆ ಮಾತನಾಡಿದ ಜೂ.ಎನ್ ಟಿ ಆರ್ ಅಪ್ಪು ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಇನ್ನು ಜೇಮ್ಸ್ ಸಿನಿಮಾ ನೋಡಿಲ್ಲ. ಸದ್ಯ ಆರ್ ಆರ್ ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದೇನೆ. ಬೇರೆ ಬೇರಿ ಕಡೆ ಓಡಾಡುತ್ತಿದ್ದೇವೆ. ಹಾಗಾಗಿ ಇನ್ನು ನೋಡಲು ಸಾಧ್ಯವಾಗಿಲ್ಲ. ಪುನೀತ್ ಯಾವಾಗಲು ನಮ್ಮ ಜೊತೆ ಇರುತ್ತಾರೆ. ಅನೇಕ ಸಿನಿಮಾಗಳನ್ನು ಕೊಟ್ಟಿದ್ದಾರೆ. ಆರ್ ಆರ್ ಆರ್ ಸಿನಿಮಾದ ಎಲ್ಲಾ ಕೆಲಸ ಮುಗಿದ ಮೇಲೆ ಜೇಮ್ಸ್ ನೋಡುತ್ತೇನೆ ಎಂದು ಹೇಳಿದ್ದಾರೆ.
RRR Movie: ರಾಜಮೌಳಿ ಚಿತ್ರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ!
ಪುನೀತ್ ಸದಾ ನಮ್ಮ ಹೃದಯದಲ್ಲೇ ಇರುತ್ತಾರೆ. ಅವರ ಇಲ್ಲ ಅಂತ ಖಂಡಿತ ಅನಿಸಲ್ಲ. ನಮ್ಮ ಹೃದಯಲ್ಲಿ ಯಾವಾಗಲು ಇರುತ್ತಾರೆ. ಇಲ್ಲೇ ಪಕ್ಕದಲ್ಲೇ ಇದ್ದು ಶುಭಹಾರೈಸುತ್ತಿರುತ್ತಾರೆ. ನನಗೆ ಅವರ ಬಗ್ಗೆ ತುಂಬಾ ಗೊತ್ತು ಎಂದು ಜೂ.ಎನ್ ಟಿ ಆರ್ ಹೇಳಿದ್ದಾರೆ. ಜೂ.ಎನ್ ಟಿ ಆರ್ ಮತ್ತು ಪುನೀತ್ ರಾಜ್ ಕುಮಾರ್ ಇಬ್ಬರು ಉತ್ತಮ ಸ್ನೇಹಿತರು. ಅಪ್ಪು ಸಿನಿಮಾಗೆ ಜೂ.ಎನ್ ಟಿ ಆರ್ ಒಂದು ಹಾಡನ್ನು ಸಹ ಹಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.