23 ವರ್ಷದ ಬಳಿಕ ಬಾಲಿವುಡ್‌ಗೆ ನಟಿ ಜ್ಯೋತಿಕಾ; ಸ್ಟಾರ್ ನಟನಿಗೆ ಜೋಡಿಯಾದ ಸೂರ್ಯ ಪತ್ನಿ

Published : May 15, 2023, 03:53 PM ISTUpdated : May 15, 2023, 03:54 PM IST
23 ವರ್ಷದ ಬಳಿಕ ಬಾಲಿವುಡ್‌ಗೆ ನಟಿ ಜ್ಯೋತಿಕಾ; ಸ್ಟಾರ್ ನಟನಿಗೆ ಜೋಡಿಯಾದ ಸೂರ್ಯ ಪತ್ನಿ

ಸಾರಾಂಶ

23 ವರ್ಷದ ಬಳಿಕ ನಟ ಸೂರ್ಯ ಪತ್ನಿ ಜ್ಯೋತಿಕಾ ಬಾಲಿವುಡ್‌ಗೆ ಎಂಟ್ರಿಕೊಟ್ಟಿದ್ದಾರೆ. ಇಬ್ಬರೂ ಸ್ಟಾರ್ ನಟರ ಜೊತೆ ನಟಿಸುತ್ತಿದ್ದಾರೆ. 

ಖ್ಯಾತ ನಟಿ, ತಮಿಳಿನ ಸ್ಟಾರ್ ನಟ ಸೂರ್ಯ ಪತ್ನಿ ಜ್ಯೋತಿಕಾ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿಶೇಷ ಎಂದರೆ ಜ್ಯೋತಿಕಾ ಬರೋಬ್ಬರಿ 25 ವರ್ಷಗಳ ಬಳಿಕ ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಿಂದಿಯ ಖ್ಯಾತ ನಟರ ಜೊತೆ ಜ್ಯೋತಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. ಜ್ಯೋತಿಕಾ ಬರೋಬ್ಬರಿ 23 ವರ್ಷಗಳ ಬಳಿಕ ಹಿಂದಿ ಸಿನಿಮಾರಂಗಕ್ಕೆ ವಾಪಾಸ್ ಆಗುತ್ತಿರುವುದು ಅಭಿಮಾನಿಗಳಿಗೆ ಸಖತ್ ಖುಷಿ ನೀಡಿದೆ. ಥ್ರಿಲ್ಲರ್ ಸಿನಿಮಾಗಾಗಿ ಜ್ಯೋತಿಕಾ ಹಿಂದಿಗೆ ರೀ ಎಂಟ್ರಿ ಕೊಟ್ಟಿದ್ದಾರೆ. 

ಬಾಲಿವುಡ್ ಖ್ಯಾತ ನಿರ್ದೇಶಕ ವಿಕಾಶ್ ಬಾಹ್ಲ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾದಲ್ಲಿ ತಮಿಳು ಸ್ಟಾರ್ ಸೂರ್ಯ ಪತ್ನಿ ನಟಿಸುತ್ತಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ಮತ್ತು ಆರ್ ಮಾಧವನ್ ಪ್ರಮುಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಂದಹಾಗೆ ಜ್ಯೋತಿಕಾ ಅಜಯ್ ದೇವಗನ್ ಅವರಿಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಸಿನಿಮಾಗೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ ಆದರೆ ಸಿನಿಮಾ ಅನೌನ್ಸ್ ಆಗುತ್ತಿದ್ದಂತೆ ಪ್ರೇಕ್ಷಕರಲ್ಲಿ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. 

ಈ ಸಿನಿಮಾ ಜೂನ್ ತಿಂಗಳಿಂದ ಚಿತ್ರೀಕರಣ ಪ್ರಾರಂಭ ಮಾಡಲಿದೆ. ಮುಂಬೈ, ಮಸ್ಸೂರಿ, ಲಂಡನ್ ಸೇರಿದಂತೆ ಅನೇಕ ಕಡೆ ಚಿತ್ರೀಕರಣ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಈ ಸಿನಿಮಾ ಅಜಯ್ ದೇವಗನ್ ಅವರ ನಿರ್ಮಾಣ ಸಂಸ್ಥೆಯಲ್ಲಿ ನಿರ್ಮಾಣವಾಗುತ್ತಿದೆ. ಸದ್ಯದಲ್ಲೇ ಇನ್ನು ಹೆಚ್ಚಿನ ಮಾಹಿತಿಯನ್ನು ಸಿನಿಮಾತಂಡ ಬಹಿರಂಗ ಪಡಿಸಲಿದೆ. 

ನಟ ಸೂರ್ಯ ಕುಟುಂಬ ಚೆನ್ನೈನಿಂದ ಮುಂಬೈಗೆ ಶಿಫ್ಟ್; ಕಾರಣವೇನು?

ಸೂರ್ಯ ಮತ್ತು ಜ್ಯೋತಿಕಾ ದಂಪತಿ ಮುಂಬೈಗೆ ಶಿಫ್ಟ್ ಆಗಿದ್ದಾರೆ ಎನ್ನುವ ಸುದ್ದಿ ಕೂಡ ಇದೆ.  ಸೂರ್ಯ ಮತ್ತು ಜ್ಯೋತಿಕಾ ಇಬ್ಬರೂ ಮುಂಬೈನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೂಲಗಳ ಪ್ರಕಾರ ಸ್ಟಾರ್ ದಂಪತಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಂಬೈಗೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ. ಹೌದು ಸೂರ್ಯ ಮತ್ತು ಜ್ಯೋತಿಕಾ ದಂಪತಿಗೆ ಇಬ್ಬರೂ ಮಕ್ಕಳು. ಮಗಳು ದಿಯಾ (15 ವರ್ಷ) ಮಗ ದೇವ್ (12 ವರ್ಷ).  ಮುಂಬೈನಲ್ಲಿ ಮನೆಯನ್ನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ. 

ಸೂರ್ಯ ಇಲ್ಲದೆ ಜೀವನ ನಡೆಸೋದೇ ಕಷ್ಟ; ಪತಿಯ ಬಗ್ಗೆ ನಟಿ ಜೋತಿಕಾ ಪ್ರೀತಿಯ ಮಾತು

ಜ್ಯೋತಿಕಾ ಕೊನೆಯದಾಗಿ ಹಿಂದಿಯಲ್ಲಿ ಲಿಟಲ್ ಜಾನ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಮತ್ತೆ ಹಿಂದಿ ಸಿನಿಮಾಗಳಲ್ಲಿ ನಟಿಸಿಲ್ಲ. ಅಂದಹಾಗೆ ಜ್ಯೋತಿಕಾ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದೆ ಹಿಂದಿ ಸಿನಿಮಾದ ಮೂಲಕ. 1998ರಲ್ಲಿ ಡೋಲಿ ಸಾಜಾ ಕೆ ರಖ್ನಾ ಸಿನಿಮಾ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರು. ಆದರೆ ತಮಿಳು ಸಿನಿಮಾರಂಗದ ಮೂಲಕ ಸ್ಟಾರ್ ಆಗಿ ಹೊರಹೊಮ್ಮಿದರು. ಬಳಿಕ ಜ್ಯೋತಿಕಾ ಸೌತ್ ಸ್ಟಾರ್ ಮೆರೆದರು. ಬಳಿಕ ನಟ ಸೂರ್ಯ ಅವರನ್ನು ಮದುವೆಯಾಗಿ ತಮಿಳು ಸೊಸೆಯಾದರು. ಮದುವೆ, ಮಕ್ಕಳು ಅಂತ ಸಂಸಾರದ ಕಡೆ ಗಮನ ಹರಿಸಿದ್ದ ಜ್ಯೋತಿಕಾ ಇದೀಗ ಮತ್ತೆ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?