ಕಮಲ್ ಹಾಸನ್ 'ವಿಕ್ರಮ್' OTT ಬಿಡುಗಡೆ ದಿನಾಂಕ ಘೋಷಣೆ

Published : Jun 29, 2022, 04:46 PM IST
ಕಮಲ್ ಹಾಸನ್ 'ವಿಕ್ರಮ್' OTT ಬಿಡುಗಡೆ ದಿನಾಂಕ ಘೋಷಣೆ

ಸಾರಾಂಶ

ಕಮಲ್ ಹಾಸನ್ (Kamal Haasan) ನಟನೆಯ ಬ್ಲಾಕ್ ಬಸ್ಟರ್ ಹಿಟ್ ವಿಕ್ರಮ್ (Vikram) ಸಿನಿಮಾ ಒಟಿಟಿ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಅಂದಹಾಗೆ ಈಗಾಗಲೇ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿರುವ ವಿಕ್ರಮ್ ಸಿನಿಮಾ ಕೋಟಿ ಕೋಟಿ ಕಮಾಯಿ ಮಾಡಿದೆ. ವಿಕ್ರಮ್ ಸಿನಿಮಾ ಇದೀಗ ಒಟಿಟಿಯಲ್ಲಿ ರಿಲೀಸ್ ಆಗಲು ಸಿದ್ಧವಾಗಿದೆ. 

ಕಮಲ್ ಹಾಸನ್ (Kamal Haasan) ನಟನೆಯ ಬ್ಲಾಕ್ ಬಸ್ಟರ್ ಹಿಟ್ ವಿಕ್ರಮ್ (Vikram) ಸಿನಿಮಾ ಒಟಿಟಿ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಅಂದಹಾಗೆ ಈಗಾಗಲೇ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿರುವ ವಿಕ್ರಮ್ ಸಿನಿಮಾ ಕೋಟಿ ಕೋಟಿ ಕಮಾಯಿ ಮಾಡಿದೆ. ಕಮಲ್ ಹಾಸನ್ ವೃತ್ತಿ ಜೀವನದಲ್ಲೇ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಇದಾಗಿದೆ. ಈಗಾಗಲೇ ಕಲೆಕ್ಷನ್ 300 ಕೋಟಿ ರೂಪಾಯಿ ಸಮೀಕಕ್ಕೆ ಬಂದಿದೆ. ಈ ನಡುವೆ ವಿಕ್ರಮ್ ಸಿನಿಮಾ ಇದೀಗ ಒಟಿಟಿಯಲ್ಲಿ ರಿಲೀಸ್ ಆಗಲು ಸಿದ್ಧವಾಗಿದೆ. ಅಂದಹಾಗೆ ವಿಕ್ರಮ್ ಸಿನಿಮಾ ಯಾವಾಗ, ಯಾವ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಒಟಿಟಿ ಪ್ರೇಕ್ಷಕರು ಕಾಯುತ್ತಿದ್ದರು. ಇದೀಗ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರಮಂದಿದಲ್ಲಿ ನೋಡದವರು ಮತ್ತೆ ಸಿನಿಮಾ ನೋಡಲು ಬಯಸುವವರು ಒಟಿಟಿಯಲ್ಲಿ ನೋಡಿ ಎಂಜಾಯ್ ಮಾಡಬಹುದು.

ಅಂದಹಾಗೆ ವಿಕ್ರಮ್ ಸಿನಿಮಾ ಮುಂದಿನ ತಿಂಗಳು ಜುಲೈ 8ರಂದು ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ. ಅಂದಹಾಗೆ ಒಟಿಟಿಗಳ ದೈತ್ಯಗಳಲ್ಲಿ ಒಂದಾಗಿರುವ ಡೆಸ್ನಿಪ್ಲಸ್ ಹಾಟ್ ಸ್ಟಾರ್ ನಲ್ಲಿ ವಿಕ್ರಮ್ ಸಿನಿಮಾ ಬಿಡುಗಡೆಯಾಗುತ್ತಿದೆ. ಈಗಾಗಲೇ ವಿಕ್ರಮ್ ಸಿನಿಮಾದ ಪ್ರೋಮೋ ರಿಲೀಸ್ ಮಾಡುವ ಮೂಲಕ ಬಿಡುಗಡೆ ದಿನಾಂಕ ರಿವೀಲ್ ಮಾಡಲಾಗಿದೆ.  

ವಿಕ್ರಮ್ ಸಿನಿಮಾ ತಮಿಳುನಾಡಿನಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎನ್ನುವ ದಾಖಲೆ ಕೂಡ ಮಾಡಿದೆ. ಜೊತೆಗೆ ಅತೀ ಹೆಚ್ಚು ಗಳಿಕ ಮಾಡಿದ್ದ ಬಾಹುಬಲಿ-2 ತಮಿಳು ಕಲೆಕ್ಷನ್ ಅನ್ನು ಹಿಂದಿಕ್ಕಿದೆ. ವಿಕ್ರಮ್ ಸಿನಿಮಾ ಜೂನ್ 3ರಂದು ತೆರೆಗ ಬಂದಿತ್ತು. ತಮಿಳು ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. &

ಚಿರಂಜೀವಿ ಮನೆಯಲ್ಲಿ ಕಮಲ್ ಹಾಸನ್ 'ವಿಕ್ರಮ್' ಸಕ್ಸಸ್ ಪಾರ್ಟಿ; ಸಲ್ಮಾನ್ ಸೇರಿ ಯಾರೆಲ್ಲಾ ಭಾಗಿಯಾಗಿದ್ದರು?

ತಮಿಳುನಾಡಿಲ್ಲೇ ವಿಕ್ರಮ್ ಸಿನಿಮಾ ಬರೋಬ್ಬರಿ 172ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಕೇರಳದಲ್ಲಿ 39 ಕೋಟಿ ರೂಪಾಯಿ, ತೆಲುಗಿನಲ್ಲಿ 38 ಕೋಟಿ ರೂಪಾಯಿ ಮತ್ತು ಕನ್ನಡದಲ್ಲಿ 24 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಸದ್ಯ ವಿಕ್ರಮ್ ಕಲೆಕ್ಷನ್ 300 ಕೋಟಿ ಸಮೀಪಿಸಿದ್ದು ಈ ವಾರಾಂತ್ಯದಲ್ಲಿ 300 ಕೋಟಿ ಗಡಿ ದಾಟುವ ಸಾಧ್ಯತೆ ಇದೆ. ಇತ್ತೀಚಿಗಷ್ಟೆ ವಿಕ್ರಮ್ ಸಕ್ಸಸ್ ಪಾರ್ಟಿ ಮಾಡಿ ಸಂಭ್ರಮಿಸಿದ್ದಾರೆ. ಸಕ್ಸಸ್ ಪಾರ್ಟಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.  

'ಬಾಹುಬಲಿ-2' ರೆಕಾರ್ಡ್ ಬ್ರೇಕ್ ಮಾಡಿದ 'ವಿಕ್ರಮ್'; ಸಕ್ಸಸ್ ಪಾರ್ಟಿಯಲ್ಲಿ ಕಮಲ್ ಮಿಂಚಿಂಗ್

ಅಂದಹಾಗೆ ವಿಕ್ರಮ್ ಸಿನಿಮಾದಲ್ಲಿ ಕಮಲ್ ಹಾಸನ್ ಜೊತೆ ದಕ್ಷಿಣ ಭಾರತದ ಖ್ಯಾತ ನಟರಾದ ಫಹಾದ್ ಫಾಸಿಲ್ ಮತ್ತು ವಿಜಯ್ ಸತುಪತಿ ನಟಿಸಿದ್ದಾರೆ. ಇನ್ನು ವಿಶೇಷ ಪಾತ್ರದಲ್ಲಿ ಕಾಲಿವುಡ್ ಸ್ಟಾರ್ ಸೂರ್ಯ ಬಣ್ಣ ಹಚ್ಚಿದ್ದಾರೆ. ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿರುವ ಖುಷಿಗೆ ಕಮಲ್ ಹಾಸನ್ ಸಿನಿಮಾತಂಡಕ್ಕೆ ಅದ್ಭುತ ಗಿಫ್ಟ್ ನೀಡಿದ್ದಾರೆ. ನಟ ಸೂರ್ಯ ಅವರಿಗೆ ದುಬಾರಿ ವಾಚ್ ಗಿಫ್ಟ್ ಮಾಡಿರವ ಕಮಲ್, ನಿರ್ದೇಶಕ ಲೋಕೇಶ್ ಕನಗರಾಜ್ ಅವರಿಗೆ ದುಬಾರಿ ಕಾರ್ ಉಡುಗೊರೆಯಾಗಿ ನೀಡಿದ್ದರು. ಇನ್ನು ಅನೇಕ ಜನರಿಗೆ ಬೈಕ್ ಗಿಫ್ಟ್ ಮಾಡಿದ್ದಾರೆ.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಮಾಡಿದವರು: ನಟ ಶಿವಣ್ಣ ಹೇಳಿದ್ದೇನು?