ಚುನಾವಣಾ ಪ್ರಚಾರದ ಸಮಯದಲ್ಲಿ ನಟಿ ಕಂಗನಾ ರಣಾವತ್, ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷ್ಣು ಮತ್ತು ರಾಮನ ಅಂಶ ಎಂದು ಹೇಳಿದ್ದು, ಇದೀಗ ಭಾರಿ ವೈರಲ್ ಆಗಿದೆ.
ನಟಿ ಕಂಗನಾ ರಣಾವತ್ಗೆ ಬಿಜೆಪಿ ಹಿಮಾಚಲ ಪ್ರದೇಶದ (Himachal Pradesh) ಮಂಡಿ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ನಡಿ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದು, ಮಂಡಿ ಪ್ರವಾಸ ಕೈಗೊಂಡಿದ್ದಾರೆ. ಮಂಡಿ ಕ್ಷೇತ್ರದ ಮುಖಂಡರ ಜೊತೆ ಭೇಟಿ, ಸಭೆ ನಡೆಸುತ್ತಿದ್ದಾರೆ. ಕಂಗನಾ ಅವರ ರಾಜಕೀಯ ಕಾರ್ಯ ಬಲು ಚುರುಕಿನಿಂದ ಸಾಗಿದೆ. ಮೊದಲಿನಿಂದಲೂ ಹೇಳಿಕೆಗಳ ಮೂಲಕವೇ ಇವರು ಫೇಮಸ್ ಆದವರು. ಆದರೆ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿಹೊಗಳುವ ಮೂಲಕ ಭಾರಿ ಸದ್ದು ಮಾಡುತ್ತಿದ್ದಾರೆ.
ಈ ಹಿಂದೆ ನಟಿ, ಪ್ರಧಾನಿ ನರೇಂದ್ರ ಮೋದಿ ಮುಟ್ಟಿದ್ದೆಲ್ಲವೂ ಚಿನ್ನ, ಅವರು ಎಂದಿಗೂ ಸೋಲಿಲ್ಲದ ಸರದಾರ ಎಂದಿದ್ದರು. ಮೋದಿಯವರ ಆಡಳಿತದಲ್ಲಿ ಗುಜರಾತ್ ವೇಗವಾಗಿ ಬೆಳೆಯುತ್ತಿರುವ ರಾಜ್ಯವಾಗಿದೆ. ಅವರು ಪ್ರಧಾನಿಯಾದ ಮೇಲೆ ಭಾರತದ ಆರ್ಥಿಕತೆಯು 4 ಟ್ರಿಲಿಯನ್‌ಗೆ ತಲುಪಿದೆ. ಹಲವು ದಶಕಗಳ ಕಾಲ ಆಡಳಿತ ನಡೆಸಿದ್ದರೂ ಭಾರತದ ಆರ್ಥಿಕತೆ 10ನೇ ಸ್ಥಾನದಲ್ಲಿತ್ತು. ಮೋದಿಯವರು ಪ್ರಧಾನಿಯಾದ ಕೆಲವೇ ವರ್ಷಗಳಿಂದ ಐದನೇ ಸ್ಥಾನಕ್ಕೆ ತಲುಪಿದ್ದು, ಯಾರಿಗೂ ಕಾಣಿಸುವುದಿಲ್ಲವೇ ಎಂದು ಪ್ರಶ್ನಿಸಿದ್ದರು, ಇದೀಗ ಪ್ರಧಾನಿ ನರೇಂದ್ರ ಮೋದಿಯವರನ್ನು ನಟಿ ವಿಷ್ಣು ಮತ್ತು ರಾಮನ ಅಂಶ ಎಂದು ಕರೆದಿದ್ದಾರೆ. ಈ ಮಾತು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಅಮ್ಮನಾಗ್ತಿರೋ ನಟಿ ದೀಪಿಕಾ ಪಡುಕೋಣೆ ಇನ್ನೊಂದು ಗುಡ್ ನ್ಯೂಸ್: ಆಸ್ಕರ್ರಿಂದ ವಿಶೇಷ ಮನ್ನಣೆ
ಮಂಡಿ ಲೋಕಸಭಾ ಕ್ಷೇತ್ರದ ಕಾರ್ಸೋಗ್ ವಿಧಾನಸಭಾ ಕ್ಷೇತ್ರದಲ್ಲಿ ಕಂಗನಾ ಚುನಾವಣಾ ಪ್ರಚಾರ ನಡೆಸಿದ ಸಂದರ್ಭದಲ್ಲಿ ನಟಿ ಈ ಮಾತನ್ನು ಹೇಳಿದರು. ಈ ಸ್ಥಾನದಿಂದ ಸ್ಪರ್ಧಿಸಲು ಮೋದಿ ಅವರು ಮಂಡಿ ಮಗಳಾದ ನನ್ನನ್ನು ಆಯ್ಕೆ ಮಾಡಿದ್ದಾರೆ. ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ನಿಶ್ಚಿತ. ಏಕೆಂದರೆ ಅವರು, ನಮ್ಮನ್ನು ನೋಡಿಕೊಳ್ಳುವ ಭಗವಾನ್ ರಾಮ ಮತ್ತು ವಿಷ್ಣುವಿನ 'ಅಂಶ' ಎಂದು ಹೇಳಿದ್ದಾರೆ. ಕಾಂಗ್ರೆಸ್ ವಿರುದ್ಧ ಇದೇ ವೇಳೆ ಹರಿಹಾಯ್ದ ಅವರು, ಕಾಂಗ್ರೆಸ್ ಎಂದರೆ ಹಗರಣಗಳಿಗೆ ಸಮಾನಾರ್ಥಕವಾಗಿದೆ ಎಂದರು. 2ಜಿ ಸ್ಪೆಕ್ಟ್ರಮ್ ಮತ್ತು ಕಲ್ಲಿದ್ದಲು ಹಗರಣಗಳು ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ನಡೆದಿವೆ. ಇಷ್ಟೇ ಅಲ್ಲದೇ ಹಲವಾರು ಹಗರಣಗಳ ರೂವಾರಿ ಕಾಂಗ್ರೆಸ್ ಎಂದು ಹೇಳಿದರು.
ಕೆಲ ದಿನಗಳ ಹಿಂದೆ ನಟಿ ಕಂಗನಾ, ರಾಜಕೀಯಕ್ಕೆ ಎಂಟ್ರಿ ಕೊಡುವ ಸುಳಿವು ನೀಡಿದ್ದರು. ತೇಜಸ್ ಚಿತ್ರದ ಬಿಡುಗಡೆಯ ನಂತರ ಗುಜರಾತ್‌ನ ದ್ವಾರಕಾದ ಜಗತ್ ಮಂದಿರಕ್ಕೆ ತೆರಳಿದ ನಟಿ ಇದಾದ ಬಳಿಕ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕೆಲವೊಂದು ಮಾಹಿತಿ ಶೇರ್ ಮಾಡಿಕೊಂಡಿದ್ದರು. ಮಾಧ್ಯಮದವರೊಂದಿಗೆ ಮಾತನಾಡಿದ್ದ ಕಂಗನಾ, ಚುನಾವಣೆಗೆ ಸ್ಪರ್ಧಿಸುವ ಸುಳಿವು ನೀಡಿದ್ದರು. ಮುಂದಿನ ದಿನಗಳಲ್ಲಿ ಶ್ರೀಕೃಷ್ಣನ ಆಶೀರ್ವಾದವಿದ್ದರೆ ನಾನೂ ಕೂಡ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಕಂಗನಾ ಹೇಳಿದ್ದರು. ಇದೀಗ ಎಲ್ಲವೂ ನಿಜವಾಗಿದ್ದು, ಪ್ರಧಾನಿಯವರನ್ನೇ ವಿಷ್ಣು ಮತ್ತು ರಾಮ್ನ ಅಂಶ ಎಂದು ಹೇಳಿದ್ದಾರೆ.
ರಶ್ಮಿಕಾ @28: ಹುಟ್ಟುಹಬ್ಬಕ್ಕೆ ಬಂದಳು ಗರ್ಲ್ಫ್ರೆಂಡ್, ಶ್ರೀವಲ್ಲಿ! ಅಬುದಾಬಿಯಲ್ಲಿ ಭರ್ಜರಿ ಸೆಲೆಬ್ರೇಷನ್