ವಿವಾದಗಳ ನಡುವೆಯೇ ಎಮರ್ಜೆನ್ಸಿಗೆ ಕೊನೆಗೂ ಬಿಡುಗಡೆಯ ಭಾಗ್ಯ: ಕಂಗನಾ ಕೈಹಿಡಿಯತ್ತಾ 2025?

By Suchethana D  |  First Published Nov 18, 2024, 8:18 PM IST

ನಾಲ್ಕೈದು ಬಾರಿ ಮುಂದೂಡಲ್ಪಟ್ಟಿದ್ದ ನಟಿ ಕಂಗನಾ ಅವರ ಎಮರ್ಜೆನ್ಸಿ ಚಿತ್ರದ ಬಿಡುಗಡೆಗೆ ಹೊಸ ಡೇಟ್​ ಫಿಕ್ಸ್​ ಆಗಿದೆ. ನಟಿ ಕೈಹಿಡಿಯತ್ತಾ 2025? 
 


 ಕಂಗನಾ ರಣಾವತ್​ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯಾಗಿ ನಟಿಸಿರುವ ಎಮರ್ಜೆನ್ಸಿ ಚಿತ್ರಕ್ಕೆ ಈಗ ಇನ್ನೊಂದು ಡೇಟ್​ ಫಿಕ್ಸ್​ ಆಗಿದೆ. ಇದಾಗಲೇ ನಾಲ್ಕೈದು ಬಾರಿ ಡೇಟ್​ ಫಿಕ್ಸ್​ ಆಗಿ ಮುಂದಕ್ಕೆ ಸಾಗುತ್ತಲೇ ಇರುವ ಈ ಚಿತ್ರಕ್ಕೆ ಈಗ ಹೊಸ ಮುಹೂರ್ತ ಫಿಕ್ಸ್​ ಮಾಡಲಾಗಿದೆ.  ಝೀ ಸ್ಟುಡಿಯೋಸ್ ಮತ್ತು ಮಣಿಕರ್ಣಿಕಾ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಬರುತ್ತಿರುವ 'ಎಮರ್ಜೆನ್ಸಿ' ಚಿತ್ರವು ಮೊದಲ ಮಹಿಳಾ ಪ್ರಧಾನಿ  ಇಂದಿರಾಗಾಂಧಿಯನ್ನು ಆಧರಿಸಿದ ಮೆಗಾ-ಬಜೆಟ್ ಚಲನಚಿತ್ರವಾಗಿದೆ. ಇದಾಗಲೇ ಹಲವು ಬಾರಿ ಮುಂದೂಡಲ್ಪಟ್ಟಿದ್ದ ಈ ಚಿತ್ರಕ್ಕೆ ಬರುವ ಜನವರಿ 17ರ ಡೇಟ್​ ಫಿಕ್ಸ್​ ಆಗಿದ್ದು, ಈ ಬಗ್ಗೆ ಕಂಗನಾ ತಮ್ಮ ಸೋಷಿಯಲ್​ ಮೀಡಿಯಾ ಖಾತೆಯಲ್ಲಿ ಮಾಹಿತಿ ಶೇರ್​ ಮಾಡಿಕೊಂಡಿದ್ದಾರೆ. 

ಈ ಚಿತ್ರದಲ್ಲಿ ಇರುವ ಕೆಲವು ಅಂಶಗಳ ವಿರುದ್ಧ ಕೋರ್ಟ್​ಗೆ ಹೋಗಿದ್ದ ಹಿನ್ನೆಲೆಯಲ್ಲಿ, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (CBFC) ಬಿಡುಗಡೆಗೆ ಅನುಮತಿ ನೀಡಿದ ಬಳಿಕವೂ ಚಿತ್ರ ಬಿಡುಗಡೆಯನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತು ಈ ಹಿಂದೆ ತಿಳಿಸಿದ್ದ ನಟಿ,  ಮಂಡಳಿಗೆ  ಬೆದರಿಕೆ ಕರೆಗಳು ಬರುತ್ತಿವೆ. ಈ ಸಿನಿಮಾದಲ್ಲಿ ಎಮರ್ಜೆನ್ಸಿ ಸಮಯದಲ್ಲಿ ಉಂಟಾದ ಪಂಜಾಬ್​ ಗಲಭೆ ತೋರಿಸಲಾಗಿದೆ. ಅದನ್ನು ತೋರಿಸದಂತೆ, ಇಂದಿರಾಗಾಂಧಿಯವರ ಹತ್ಯೆಯನ್ನು ತೋರಿಸದಂತೆ ಹೇಳಲಾಗುತ್ತಿದೆ. ಸತ್ಯವನ್ನು ಮರೆಮಾಚುವಂತೆ ತಿಳಿಸುತ್ತಿರುವುದನ್ನು ನೋಡಿದರೆ ವಿಚಿತ್ರವಾಗಿ ತೋರುತ್ತದೆ ಎಂದಿದ್ದರು. ಇದೀಗ ಕೋರ್ಟ್​ ಆದೇಶದ ಪ್ರಕಾರ ಹಲವು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ. ಈಗ ಚಿತ್ರದಲ್ಲಿ ಉಳಿದುಕೊಂಡಿರುವುದು ಏನು ಎಂದು ನೋಡುವ ಕುತೂಹಲದಲ್ಲಿ ಪ್ರೇಕ್ಷಕರಿದ್ದಾರೆ. 

Tap to resize

Latest Videos

undefined

ಕುಡಿದು ಡ್ರೈವ್​ ಮಾಡ್ತಿದ್ರೆ ಇನ್ಮುಂದೆ ಸಿಕ್ಕಾಕ್ಕೊಳೋದು ಪಕ್ಕಾ! ಪೊಲೀಸರಿಂದ 'ಚಾಕ್​ ಪೀಸ್​' ಟ್ರಿಕ್ಸ್​...

ಜೂನ್ 25, 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಹೇರಿದ್ದ ರಾಷ್ಟ್ರೀಯ ತುರ್ತು ಪರಿಸ್ಥಿತಿ ( National Emergency) ಕರಾಳ ಮುಖವನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ ಎಂದು ನಟಿ ಹೇಳಿದ್ದಾರೆ.  21 ತಿಂಗಳು ಕಾಲ ತುರ್ತು ಪರಿಸ್ಥಿತಿ ಅಸ್ತಿತ್ವದಲ್ಲಿ ಇತ್ತು. 1975, ಜೂನ್ 25ರಂದು ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಿತ್ತು.  ಸಂವಿಧಾನವನ್ನು ತಿರಸ್ಕರಿಸಿ ತುರ್ತು ಪರಿಸ್ಥಿತಿ ಹೇರಲಾಯ್ತು. ಭಾರತದ ಯುವ ಪೀಳಿಗೆ ಇದನ್ನ ಎಂದು ಮರೆಯೋದಿಲ್ಲ ಎಂದಿರುವ ನಟಿ, ತಮ್ಮ ಈ ಚಿತ್ರವನ್ನು ವೀಕ್ಷಿಸಿ, ನಮ್ಮ ಇತಿಹಾಸವನ್ನು ತಿಳಿದುಕೊಳ್ಳಿ ಎಂದಿದ್ದಾರೆ. 

 ಈ ಕುರಿತು ಈ ಹಿಂದೆ ಹೇಳಿಕೆ ನೀಡಿದ್ದ ಅವರು, ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದ ಕರಾಳ ಘಟ್ಟವನ್ನು ನೋಡಿ ಮತ್ತು ಅಧಿಕಾರದ ಲಾಲಸೆಯನ್ನು ನೋಡಿ ಎಂದಿದ್ದಾರೆ. ಚಿತ್ರದಲ್ಲಿ ಅನುಪಮ್ ಖೇರ್, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ ಮತ್ತು ದಿವಂಗತ ಸತೀಶ್ ಕೌಶಿಕ್ ಅವರ ಸಂಗೀತವನ್ನು ಸಂಚಿತ್ ಬಲ್ಹಾರಾ ಅವರು ಸಂಯೋಜಿಸಿದ್ದಾರೆ. ಕಥೆ ಮತ್ತು ಸಂಭಾಷಣೆಗಳನ್ನು ರಿತೇಶ್ ಷಾ ಬರೆದಿದ್ದಾರೆ. ಚಿತ್ರದ ಬಿಡುಗಡೆ ಪದೇ ಪದೇ ಮುಂದೂಡುತ್ತಲೇ ಹೋಗುತ್ತಿತ್ತು.  ನವೆಂಬರ್ 24, 2023 ರಂದು ಬಿಡುಗಡೆಯಾಗಬೇಕಿತ್ತು. ನಂತರ ಜೂನ್‌ 14ರಂದು ಚಿತ್ರ ರಿಲೀಸ್‌ ಆಗಲಿದೆ ಎನ್ನಲಾಗಿತ್ತು.  ಕಂಗನಾ ಥೇಟ್​ ಇಂದಿರಾ ಗಾಂಧಿಯವರಂತೆ ಮೇಕಪ್​ ಮಾಡಿಕೊಂಡು, ಅವರಂತೆಯೇ   ಟ್ರೇಲರ್​ ಕಳೆದ ವರ್ಷವೇ ಬಿಡುಗಡೆಯಾಗಿತ್ತು. ಕಂಗನಾ ಅವರ ಈ ನಟನೆಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಆದರೆ ಯಾಕೋ ಈ ಚಿತ್ರಕ್ಕೆ ಇನ್ನೂ ಮುಹೂರ್ತ ಕೂಡಿ ಬರುತ್ತಲೇ ಇರಲಿಲ್ಲ. ಇದೀಗ ಬಿಜೆಪಿಯ ಸಂಸದೆ ಆದ ಮೇಲೆ ನಟಿಯ ಚಿತ್ರದ ಬಗ್ಗೆ ಇನ್ನಷ್ಟು ಕುತೂಹಲ ಮನೆ ಮಾಡಿದೆ.  ಈ ಚಿತ್ರವನ್ನು ಸುಮಾರು 25 ಕೋಟಿ ರೂಪಾಯಿಗಳ ಬಜೆಟ್​ನಲ್ಲಿ ರೆಡಿ ಮಾಡಲಾಗಿದೆ ಎನ್ನಲಾಗುತ್ತಿದೆ. 

ಗೋದಾವರಿ ನದಿಯಲ್ಲಿ ಹಾರುತ್ತಿದ್ದವನ ಸಿನಿಮೀಯ ರೀತಿ ರಕ್ಷಿಸಿದ ಪತ್ರಕರ್ತರು: ಶಾಕಿಂಗ್​ ವಿಡಿಯೋ ವೈರಲ್​

 ಈ ಚಿತ್ರಕ್ಕೆ ಇದಾಗಲೇ ಬಿಡುಗಡೆಗೆ ಅನುಮತಿ ಸಿಕ್ಕಿತ್ತು.   ಈ ನಡುವೆಯೇ, ದೆಹಲಿಯ ಶಿರೋಮಣಿ ಅಕಾಲಿದಳ(ಎಸ್‌ಎಡಿ)  ‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆಯನ್ನು ತಡೆಯುವಂತೆ ಕೋರಿ  ಸಿಬಿಎಫ್‌ಸಿಗೆ ನೊಟೀಸ್ ನೀಡಿತ್ತು. ಈ ಚಿತ್ರ 'ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತದೆ' ಮತ್ತು 'ತಪ್ಪು ಮಾಹಿತಿ ಹರಡಬಹುದು' ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ. ಚಿತ್ರದ ಟ್ರೇಲರ್​ ನೋಡಿದರೆ, ಸಿಖ್ ಸಮುದಾಯವನ್ನು ತಪ್ಪಾಗಿ ಪ್ರತಿನಿಧಿಸುವುದು ಮಾತ್ರವಲ್ಲದೆ ದ್ವೇಷ ಮತ್ತು ಸಾಮಾಜಿಕ ಅಪಶ್ರುತಿಯನ್ನು ಉತ್ತೇಜಿಸುವ ತಪ್ಪಾದ ಐತಿಹಾಸಿಕ ಸಂಗತಿಗಳನ್ನು ಚಿತ್ರಿಸಲಾಗಿದೆ ಎನ್ನುವುದು ಅವರ ವಾದವಾಗಿತ್ತು. ಒಟ್ಟಿನಲ್ಲಿ ಚಿತ್ರ ಇನ್ನಷ್ಟು ಕುತೂಹಲ ಕೆರಳಿಸಿದೆ. 

click me!