ಕಂಗನಾ ಬಹುನಿರೀಕ್ಷಿತ Chandramukhi 2 ಪೋಸ್ಟರ್​ ರಿಲೀಸ್​: ಮೆಚ್ಚುಗೆಗಳ ಮಹಾಪೂರ- ಏನಿದರ ಕಥೆ?

Published : Aug 05, 2023, 03:26 PM IST
ಕಂಗನಾ ಬಹುನಿರೀಕ್ಷಿತ Chandramukhi 2 ಪೋಸ್ಟರ್​ ರಿಲೀಸ್​: ಮೆಚ್ಚುಗೆಗಳ ಮಹಾಪೂರ- ಏನಿದರ ಕಥೆ?

ಸಾರಾಂಶ

ರಾಘವ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ಅಭಿನಯದ ಬಹು ನಿರೀಕ್ಷಿತ ಚಂದ್ರಮುಖಿ ಸೀಕ್ವೆಲ್​ನ ಪೋಸ್ಟರ್​ ರಿಲೀಸ್​ ಆಗಿದ್ದು ಫ್ಯಾನ್ಸ್​ ಸಕತ್​ ಖುಷಿಪಟ್ಟುಕೊಳ್ಳುತ್ತಿದ್ದಾರೆ.   

ರಾಘವ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ (Kangana Ranaut) ನಟನೆಯ 'ಚಂದ್ರಮುಖಿ-2' ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರೋ  ಈ ಚಿತ್ರದ ಪೋಸ್ಟರ್​ ರಿಲೀಸ್​ ಮಾಡಲಾಗಿದೆ.   ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ವ್ಯಕ್ತವಾಗಿದ್ದು, ಚಿತ್ರದಲ್ಲಿ ಕಂಗನಾ ಅವರ ಪಾತ್ರ ಹೇಗಿರಲಿದೆ ಎಂಬುದರ ಕುರಿತು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ ಎಂದೇ ಹೇಳಲಾಗುತ್ತಿದೆ.  ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ (Raghav Lawrence) ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರವಾಗಿರುವ ಚಂದ್ರಮುಖಿ-2, ಸೆಪ್ಟಂಬರ್ 19ರಂದು ಬಿಡುಗಡೆಯಾಗಲಿದೆ. 

 2005ರಲ್ಲಿ ಬಿಡುಗಡೆಯಾಗಿದ್ದ ಚಂದ್ರಮುಖಿ ಪಾರ್ಟ್​-1 ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ (Record) ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲೀಸ್ಟ್ ಸೇರಿತ್ತು. ಈ ಚಿತ್ರದಲ್ಲಿ ನಟಿ ಜ್ಯೋತಿಕಾ, ರಜನಿಕಾಂತ್ ಕೆಮಿಸ್ಟ್ರಿಗೆ ಫ್ಯಾನ್ಸ್​ ಫಿದಾ ಆಗಿದ್ದರು. ಅಂದಹಾಗೆ ಇದು ಕನ್ನಡದ 'ಆಪ್ತಮಿತ್ರ' ಸಿನಿಮಾದ ರಿಮೇಕ್ ಆಗಿತ್ತು. 'ಆಪ್ತಮಿತ್ರ' ಸಿನಿಮಾವನ್ನು ಮಣಿಚಿತ್ರತ್ತಾಳ್ ಎನ್ನುವ ಮಲಯಾಳಂ ಸಿನಿಮಾದಿಂದ ಸ್ಫೂರ್ತಿ ಪಡೆದು ಮಾಡಲಾಗಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ.

Hrithik Roshan: ಡಿವೋರ್ಸ್​ ಬಳಿಕ 'ಚಳಿಗಾಲದ ಪ್ರೇಯಸಿ' ಜೊತೆ ಕಂಗನಾ ಎಕ್ಸ್​! ಜ್ಯೋತಿಷಿ ಮಾತು ನಿಜವಾಗತ್ತಾ?

 'ಚಂದ್ರಮುಖಿ-2' ಸಿನಿಮಾದಲ್ಲಿ ಚಂದ್ರಮುಖಿಯಾಗಿ ಕಂಗನಾ ರಣಾವತ್ ನಟಿಸಿದ್ದರೆ, ರಾಘವ ಲಾರೆನ್ಸ್ ವೆಟ್ಟೈಯನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ಲೈಕಾ (Lika) ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಸಿನಿಮಾ ತಮಿಳು, ತೆಲುಗು, ಮಲಯಾಳಂ, ಕನ್ನಡ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಅಂದಹಾಗೆ ಇದು, ಹಾರರ್ ಥ್ರಿಲ್ಲರ್ ಜಾನರ್​ನಲ್ಲಿ ಮೂಡಿಬಂದಿರುವ ಚಿತ್ರ. ಈಗ ಬಿಡುಗಡೆಯಾಗಿರುವ ಪೋಸ್ಟರ್‌ನಲ್ಲಿ ಕಂಗನಾ ಸಕತ್​ ಸ್ಮಾರ್ಟ್​ ಆಗಿ ಹೊರಹೊಮ್ಮಿದ್ದು,  ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚುತ್ತಿದ್ದಾರೆ.  ವಡಿವೇಲು, ರಾವ್ ರಮೇಶ್, ಸೃಷ್ಟಿ ಡಾಂಗೆ, ಲಕ್ಷ್ಮಿ ಮೆನನ್, ರಾಧಿಕಾ ಶರತ್‌ಕುಮಾರ್ ಮತ್ತು ಮಹಿಮಾ ನಂಬಿಯಾರ್ ಸೇರಿದಂತೆ ಇತರ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ರಾಘವ್ ಲಾರೆನ್ಸ್- ಕಂಗನಾ ನಟನೆಯ ಚಂದ್ರಮುಖಿ 2 ಸಿನಿಮಾ ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ. ರಾಘವ್- ಕಂಗನಾ ಜೋಡಿ ಮೋಡಿ ಮಾಡುತ್ತಾ ಕಾದುನೋಡಬೇಕಿದೆ.

ಚಿಕಿತ್ಸೆಗೆ ನಟನಿಂದ 25 ಕೋಟಿ ಸಾಲ ಪಡೆದ್ರಾ ನಟಿ ಸಮಂತಾ? ಏನಿದು ವಿಷ್ಯ?

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?