ಸಾಯಿ ಪಲ್ಲವಿಯಿಂದ ಮಾಧ್ಯಮದವರು ಕಲಿಯುವುದು ಸಾಕಷ್ಟಿದೆ; ನಟ ಕಿಶೋರ್

By Shruiti G Krishna  |  First Published Jun 20, 2022, 5:06 PM IST

 ಸಾಯಿ ಪಲ್ಲವಿ ಹೇಳಿಕೆ ಬಗ್ಗೆ ಕನ್ನಡದ ನಟ ಕಿಶೋರ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.  ಬಾಯಿ ಮುಚ್ಚಿಸವುದು ಸರ್ಕಾರದ ಕೆಲಸ ಆದರೆ ಮಾಧ್ಯಮಗಳು ಯಾವಾಗಿನಿಂದ ಗುತ್ತಿಗೆ ಪಡೆದವು ಎಂದು ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಕಿಶೋರ್, ಸಾಯಿ ಪಲ್ಲವಿ ಪರ ಬ್ಯಾಟ್ ಬೀಸಿದ್ದಾರೆ.   


ನಟಿ ಸಾಯಿ ಪಲ್ಲವಿ (Sai Pallavi)  ವಿರಾಟ ಪರ್ವಂ ಸಿನಿಮಾದದ ಪ್ರಮೋಷನ್ ವೇಳೆ ನೀಡಿದ್ದ ಹೇಳಿಕೆ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಸಾಯಿ ಪಲ್ಲವಿ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು.  ಸಾಯಿ ಪಲ್ಲವಿಯನ್ನು ಟೀಕಿಸಿದವರ ವಿರುದ್ಧ ಕನ್ನಡದ ನಟ ಕಿಶೋರ್ ಕುಮಾರ್ (Kishore Kumar) ಆಕ್ರೋಶ ಹೊರಹಾಕಿದ್ದಾರೆ. 

ನಟಿ ಸಾಯಿ ಪಲ್ಲವಿ ಸಂದರ್ಶನವೊಂದರಲ್ಲಿ 'ಕಾಶ್ಮೀರ ಪಂಡಿತರ ಹತ್ಯೆ ಮತ್ತು ಹಸು ಕಳ್ಳ ಸಾಗಣೆ ಮಾಡಿದ ಎಂದು ಅನುಮಾನಿಸಿ ಚಾಲಕನನ್ನು ಹತ್ಯೆ ಮಾಡಿದ್ದು ಎರಡು ಒಂದೆ. ಎರಡರಲ್ಲಿ ಏನು ವ್ಯತ್ಯಾಸ ಇದೆ' ಎಂದು ಹೇಳಿದ್ದರು. ಹಿಂಸೆ ಯಾವುದೇ ರೂದಲ್ಲಿದ್ದರೂ ಅದು ಮಹಾ ಪಾಪಾ ಎಂದಿದ್ದರು ಸಾಯಿ ಪಲ್ಲವಿ ದೊಡ್ಡ ಮಟ್ಟದ ವಿವಾದದ ಬಳಿಕ ಸಾಯಿ ಪಲ್ಲವಿ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆಯನ್ನು ನೀಡಿದ್ದರು. ಆದರೂ ಈ ಬಗ್ಗೆ ಚರ್ಚೆ ನಿಂತಿಲ್ಲ. ಸಾಯಿ ಪಲ್ಲವಿ ಕೇಳಿಕೆಗೆ ವಿರೋಧ ನಡುವೆಯೂ ದೊಡ್ಡ ಮಟ್ಟದಲ್ಲಿ ಬೆಂಬಲ ವ್ಯಕ್ತವಾಗಿತ್ತು. ಅನೇಕರು ಸಾಯಿ ಪಲ್ಲವಿ ಪರ ಇದ್ದೀವಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹ್ಯಾಶ್ ಟ್ಯಾಕ್ ಹಾಕಿ ಬೆಂಬಲ ವ್ಯಕ್ತಪಡಿಸಿದ್ದರು.        

Tap to resize

Latest Videos

ಇದೀಗ ಸಾಯಿ ಪಲ್ಲವಿ ಹೇಳಿಕೆ ಬಗ್ಗೆ ಕನ್ನಡದ ನಟ ಕಿಶೋರ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.  ಬಾಯಿ ಮುಚ್ಚಿಸವುದು ಸರ್ಕಾರದ ಕೆಲಸ ಆದರೆ ಮಾಧ್ಯಮಗಳು ಯಾವಾಗಿನಿಂದ ಗುತ್ತಿಗೆ ಪಡೆದವು ಎಂದು ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಕಿಶೋರ್ ಸಾಯಿ ಪಲ್ಲವಿ ಪರ ಬ್ಯಾಟ್ ಬೀಸಿದ್ದಾರೆ.   

ಯಾವುದೇ ಧರ್ಮದ ಹೆಸರಲ್ಲಿ ಹಿಂಸೆ ನಡೆದರೂ ಅದು ದೊಡ್ಡ ಪಾಪ; ಸಾಯಿ ಪಲ್ಲವಿ ಸ್ಪಷ್ಟನೆ

 ನಟ ಕಿಶೋರ್ ಪೋಸ್ಟ್ 

* ಬಾಯಿ ಮುಚ್ಚಿಸುವುದು ಸರ್ಕಾರದ ಕೆಲಸವಲ್ಲವೇ ಮಾಧ್ಯಮಗಳು ಯಾವಾಗಿಂದ ಈ ಕೆಲಸಕ್ಕೂ ಗುತ್ತಿಗೆ ಪಡೆದವು? 

* ಸಿನಿಮಾದವರಿಗೆ ಜನಪರ ಕಾಳಜಿ ಇರುವುದು ತಪ್ಪೇ?

* ಕಾರಣ ಏನೇ ಆದರೂ ಕೊಲೆ ಮಾಡುವ ಮನಸ್ಥಿತಿ ಒಂದೇ ಹಾಗೂ ಅದು ತಪ್ಪು ಎಂದರೆ ತಪ್ಪೇ? 

* ನಮ್ಮಲ್ಲಿನ ಅಲ್ಪಸಂಖ್ಯಾತರನ್ನು ನಾವು ಹೇಗೆ ಸಮಾನರಾಗಿ ಬದುಕಲು ಬಿಡುತ್ತೇವೆನ್ನುವುದು ನಮ್ಮ ಸಮಾಜದ ಸ್ವಾಸ್ಥ್ಯದ,  ಸಭ್ಯತೆಯ ಅಳತೆಗೋಲು ಎನ್ನುವುದು ತಪ್ಪೇ?

* ಜೀವಕ್ಕೆ ಜಾತಿ ಧರ್ಮಗಳ ಹಂಗಿಲ್ಲವೆಂದರೆ ತಪ್ಪೇ?  

* ಒಬ್ಬರ ಆಹಾರಕ್ರಮದ ಮೇಲೆ ನಿಷೇಧ ಹೇರಿ ಆಹಾರವನ್ನೂ ದ್ವೇಷದ ಸಾಧನವಾಗಿ ಬಳಸಬಾರದೆಂದರೆ ತಪ್ಪೇ? 

'ಮಾನವೀಯತೆಯ ನಿಲುವಿನ ಸಾಯಿಪಲ್ಲವಿಯಿಂದ ಈ ಮಾಧ್ಯಮದವರು ಕಲಿಯುವುದು ಸಾಕಷ್ಟಿದೆ . ಸಾಮಾಜಿಕ ಬದ್ಧತೆಯನ್ನು ಧರ್ಮಾಂಧತೆಯ ಕನ್ನಡಿಯಲ್ಲಿ ನೋಡುವ ಮಾಧ್ಯಮ  ಗೋಕಾಕ್  ಚಳುವಳಿಯ ಕಾಲದಲ್ಲಿದ್ದಿದ್ದರೆ ರಾಜಕುಮಾರ್ ರವರ ಬಾಯನ್ನೂ ಮುಚ್ಚಿಸುತ್ತಿತ್ತೇನೊ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಸಾಯಿ ಪಲ್ಲವಿ ಹೇಳಿಕೆ

'ನಾನು ರಾಜಕೀಯ ವಿಚಾರದಲ್ಲಿ ತಟಸ್ಥೆ. ನಾನು ಬೆಳೆದ ವಾತಾವರಣ ಕೂಡ  ಹಾಗೆ ಇತ್ತು. ನಾನು ಎಡ ಮತ್ತು ಬಲದ ಬಗ್ಗೆ ಕೇಳಿದ್ದೇನೆ. ಆದರೆ ನಾನು ಯಾವುದು ಸರಿ ಯಾವುದು ತಪ್ಪು ಎಂದು ಹೇಳಲ್ಲ. ಇತ್ತೀಚಿಗೆ ಬಂದ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಸಾಯಿಸಲಾಯಿತು ಎಂದು ತೋರಿಸಲಾಗಿದೆ. ಹಾಗೆ ಇತ್ತೀಚಿಗಷ್ಟೆ ಹಸು ಕಳ್ಳಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿ ಮುಸ್ಲಿಂ ಎಂದು ಆತನನ್ನು ಹತ್ಯೆಮಾಡಲಾಗಿದೆ. ಆ ವ್ಯಕ್ತಿಯನ್ನು ಹತ್ಯೆ ಮಾಡಿ ಜೈ ಶ್ರೀರಾಮ್ ಎಂದು ಘೋಷಣೆ ಹಾಕಿದ್ದಾರೆ. ಕಾಶ್ಮೀರ ಘಟನೆಗೂ ಈ ಘಟನೆಗೂ ವ್ಯತ್ಯಾಸ ಏನಿದೆ? ತನ್ನ ಕುಟುಂಬ ಉತ್ತಮ ವ್ಯಕ್ತಿಯಾಗಬೇಕೆಂದು ಹೇಳಿಕೊಟ್ಟಿದೆ. ತುಳಿತಕ್ಕೆ ಒಳಗಾದವರನ್ನು ರಕ್ಷಿಸಬೇಕು. ನಿಲುವು ಮುಖ್ಯವಲ್ಲ, ನೀವು ಮೊದಲು ಉತ್ತಮ ವ್ಯಕ್ತಿಯಾಗಬೇಕು' ಎಂದು ಸಾಯಿ ಸಂದರ್ಶನವೊಂದರಲ್ಲಿ ಹೇಳಿದ್ದರು. 
  


 

click me!