ರಾಷ್ಟ್ರಭಾಷೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರೇ ಪ್ರತಿಕ್ರಿಯೆ ನೀಡುವ ಮೂಲಕ ಎಲ್ಲಾ ವಿವಾದಕ್ಕೂ ಅಂತ್ಯ ಹಾಕಿದ್ದಾರೆ. ಪ್ರತಿಯೊಂದು ಪ್ರಾದೇಶಿಕ ಭಾಷೆಗೂ ಪ್ರಾಮುಖ್ಯತೆ ಇದೆ ಎಂದು ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ಮಾತಿಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ಮತ್ತು ಬಾಲಿವುಡ್ ನಟ ಅಜಯ್ ದೇವಗನ್( Ajay devgan) ನಡುವಿನ ರಾಷ್ಟ್ರಭಾಷಾ ಕಿಡಿ ದೇಶದಾದ್ಯಂತ ಭಾರಿ ಸದ್ದು ಮಾಡಿತ್ತು. ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಸುದೀಪ್ ಹೇಳಿದ ಮಾತಿಗೆ ಅಜಯ್ ದೇವಗನ್ ಟ್ವಿಟ್ಟರ್ ಮೂಲಕ ಕಿಡಿ ಕಾರಿದ್ದರು. ಅಜಯ್ ದೇವಗನ್ ಟ್ವೀಟ್ ಗೆ ಸುದೀಪ್ ಖಡಕ್ ಪ್ರತಿಕ್ರಿಯೆ ನೀಡಿ ವಾತಾವರಣ ತಿಳಿಗೊಳಿಸುವ ಪ್ರಯತ್ನ ಮಾಡಿದ್ರು. ಆದರೂ ಇಬ್ಬರು ಸ್ಟಾರ್ ನಟರ ನಡುವಿನ ರಾಷ್ಟ್ರಭಾಷಾ ಚರ್ಚೆ ಕ್ಷಣಾರ್ಧದಲ್ಲಿ ವೈರಲ್ ಆಗಿ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗುತ್ತು.
ಇದೀಗ ರಾಷ್ಟ್ರಭಾಷೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರೇ ಪ್ರತಿಕ್ರಿಯೆ ನೀಡುವ ಮೂಲಕ ಎಲ್ಲಾ ವಿವಾದಕ್ಕೂ ಅಂತ್ಯ ಹಾಕಿದ್ದಾರೆ. ಪ್ರತಿಯೊಂದು ಪ್ರಾದೇಶಿಕ ಭಾಷೆಗೂ ಪ್ರಾಮುಖ್ಯತೆ ಇದೆ ಎಂದು ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ಮಾತಿಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಎನ್‌ಡಿಟಿವಿ ಜೊತೆ ಮಾತನಾಡಿದ ಸುದೀಪ್, 'ಯಾವುದೇ ಗಲಭೆ ಅಥವಾ ವಾದ-ವಿವಾದವನ್ನು ಆರಂಭಿಸುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಅಭಿಪ್ರಾಯದ ಹಿಂದೆ ಯಾವುದೇ ಅಜೆಂಡಾ ಇಲ್ಲ. ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದಷ್ಟೇ ನನ್ನ ಅಭಿಪ್ರಾಯ. ಇದೀಗ ಪ್ರಧಾನಿ ಮೋದಿ ಪ್ರಾದೇಶಿಕ ಭಾಷೆಗಳ ಮಹತ್ವದ ಬಗ್ಗೆ ಮಾತನಾಡಿರುವುದು ನನಗೆ ಸಂತಸ ತಂದಿದೆ' ಎಂದಿದ್ದಾರೆ.
'ಮೋದಿ ಅವರನ್ನು ಕೇವಲ ರಾಜಕಾರಣಿಯಾಗಿ ನೋಡುವುದಿಲ್ಲ. ಅವರನ್ನು ನಾಯಕರಾಗಿಯೂ ನೋಡುತ್ತೇವೆ. ಇದೀಗ ಪ್ರಾದೇಶಿಕ ಭಾಷೆಗಳ ಬಗ್ಗೆ ಅವರು ನೀಡಿರುವ ಹೇಳಿಕೆ ಎಲ್ಲಾ ಭಾಷೆೇಗಳಿಗೂ ಅನ್ವಯವಾಗುತ್ತದೆ. ಅವರ ಮಾತುಗಳು ಮಾತೃಭಾಷೆಯನ್ನು ಗೌರವಿಸುವ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ' ಎಂದು ಸುದೀಪ್ ಹೇಳಿದರು.
ನಾನು ಸುದೀಪ್ ಸಹೇಬರ ಪರ; ವಿವಾದಕ್ಕೆ ಅಂತ್ಯ ಹಾಡಿದ ಯೋಗರಾಜ್ ಭಟ್
'ನಾನು ಯಾರೊಂದಿಗೂ ಜಗಳಕ್ಕೆ ಪ್ರಯತ್ನಿಸುವುದಿಲ್ಲ. ಕೆಲವು ವಿಷಯಗಳು ಬಂದಾಗ ನನ್ನ ಅಭಿಪ್ರಾಯಗಳನ್ನು ಹೇಳುವ ಹಕ್ಕು ನನಗಿದೆ' ಎಂದಿದ್ದಾರೆ. ಇದೇ ಸಮಯದಲ್ಲಿ ಹಿಂದಿ ಚಿತ್ರೋದ್ಯಮಕ್ಕೆ ಅಭದ್ರತೆ ಕಾಡುತ್ತಿದೆ ಎಂಬ ಮಾತನ್ನು ತಳ್ಳಿಹಾಕಿದ್ದಾರೆ.
'ಹಿಂದಿ ನಮ್ಮ ರಾಷ್ಟ್ರ ಭಾಷೆ, ನಾವು ಗೌರವ ಕೊಡಬೇಕು': ನಟ ಅರ್ಜುನ್ ರಾಮ್‌ಪಾಲ್
ಪ್ರಧಾನಿ ಮೋದಿ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ ಜೈಪುರದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಪಧಾದಿಕಾರಿಗಳ ಸಭೆಯಲ್ಲಿ ಮಾತನಾಡಿ, 'ಕಳೆದ ಕೆಲವು ದಿನಗಳಿಂದ ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟಿಹಾಕುವ ಪ್ರಯತ್ನ ನಡೆಯುತ್ತಿರುವುದನ್ನು ಗಮನಿಸಿದ್ದೇನೆೆ. ಬಿಜೆಪಿ ಪ್ರತಿಯೊಂದು ಪ್ರಾದೇಶಿಕ ಭಾಷೆಯಲ್ಲೂ ಭಾರತೀಯ ಸಂಸ್ಕೃತಿಯ ಪ್ರತಿಬಿಂಬವನ್ನು ಕಾಣುತ್ತದೆ. ಅವುಗಳನ್ನು ಪೂಜನೀಯವಾಗಿ ಪರಿಗಣಿಸುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿಯೊಂದು ಪ್ರಾದೇಶಿಕ ಭಾಷೆಗೂ ಪ್ರಾಮುಖ್ಯತೆ ನೀಡಲಾಗಿದೆ' ಎಂದು ಹೇಳಿದರು.