'ಜವಾನ್' ಹೊಸ ಪೋಸ್ಟರ್ ಔಟ್: ಶಾರುಖ್ ಸಿನಿಮಾ ವಿರುದ್ಧ ಕನ್ನಡಿಗರ ಆಕ್ರೋಶ

Published : Jul 13, 2023, 09:09 PM IST
 'ಜವಾನ್' ಹೊಸ ಪೋಸ್ಟರ್ ಔಟ್: ಶಾರುಖ್ ಸಿನಿಮಾ ವಿರುದ್ಧ ಕನ್ನಡಿಗರ ಆಕ್ರೋಶ

ಸಾರಾಂಶ

 'ಜವಾನ್' ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಆದರೆ ಶಾರುಖ್ ಸಿನಿಮಾ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.  

ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಸದ್ಯ ಜವಾನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೆ ಜವಾನ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಶಾರುಖ್ ಖಾನ್ ಮತ್ತೆ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪಠಾಣ್ ಸೂಪರ್ ಸಕ್ಸಸ್ ಬಳಿಕ ಕಿಂಗ್ ಖಾನ್ ಮತ್ತೊಮ್ಮೆ ಆಕ್ಷನ್ ದೃಶ್ಯಗಳಲ್ಲಿ ಅಬ್ಬರಿಸಿದ್ದಾರೆ. ಇನ್ನೂ ಶಾರುಖ್‌ಗೆ ಜೋಡಿಯಾಗಿ ನಯನತಾರಾ ನಟಿಸಿದ್ದಾರೆ. ಜೊತೆಗೆ ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ರಿಲೀಸ್ ಆಗಿರುವ ಟ್ರೈಲರ್‌ಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಜವಾನ್ ಪ್ರಿವ್ಯೂ ರಿಲೀಸ್ ಆದ ಬೆನ್ನಲ್ಲೇ ಮತ್ತೊಂದು ಪೋಸ್ಟರ್ ರಿಲೀಸ್ ಆಗಿದೆ. 

ಶಾರುಖ್ ಖಾನ್ ಜವಾನ್ ಸಿನಿಮಾದ ಹೊಸ ಪೋಸ್ಟರ್ ಅನ್ನು ಶೇರ್ ಮಾಡಿದ್ದಾರೆ. ಪೋಸ್ಟರ್ ನೋಡಿದ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ರಿಲೀಸ್ ಆಗಿರುವ ಪೋಸ್ಟರ್‌ನಲ್ಲಿ  ಕನ್ನಡದ ಪೋಸ್ಟರ್ ಇಲ್ಲ. ಜವಾನ್ ಸಿನಿಮಾ ಎಲ್ಲಾ ಭಾಷೆಯಲ್ಲಿ ಬರ್ತಿದೆ. ಆದರೆ ಆದರೆ ಕನ್ನಡದಲ್ಲಿ ಬರ್ತಿಲ್ಲ. ಇದು ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಸೌತ್ ಸಿನಿಮಾರಂಗದಲ್ಲಿ ಜವಾನ್ ಕನ್ನಡ ಬಿಟ್ಟು ಎಲ್ಲಾ ಭಾಷೆಯಲ್ಲೂ ರಿಲೀಸ್ ಆಗುತ್ತಿದೆ. ಆದರೆ ಕನ್ನಡ ಮಾತ್ರ ಇಲ್ಲ. ಅಂದಹಾಗೆ ಇದು ಜವಾನ್ ಸಿನಿಮಾದ ಸಮಸ್ಯೆ ಮಾತ್ರವಲ್ಲ. ಬಹುತೇಕ ಸಿನಿಮಾಗಳು ಹೀಗೆಮಾಡುತ್ತಿವೆ. ಕನ್ನಡವನ್ನು ಕನ್ನಡಿಗರನ್ನು ನಿರ್ಲಕ್ಷ ಮಾಡುತ್ತಿದ್ದಾರೆ. ಕನ್ನಡಿಗರು ಹೇಗೂ ಸಿನಿಮಾ ನೋಡುತ್ತಾರೆ ಎಂದು ಕನ್ನಡದಲ್ಲಿ ಸಿನಿಮಾ ರಿಲೀಸ್ ಮಾಡುತ್ತಿಲ್ಲ. 

ಜವಾನ್ ಸಿನಿಮಾದಲ್ಲಿ ಬಹುತೇಕರು ಸೌತ್ ಸಿನಿಮಾರಂದವರು. ಅದರಲ್ಲೂ ಕನ್ನಡಿಗರು ಸಹ ನಟಿಸಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದಲ್ಲಿ 'ಜವಾನ್’ ಸಿನಿಮಾ ಮೂಡಿಬಂದಿದೆ. ಇದು ಆಟ್ಲೀ ನಿರ್ದೇಶನದ ಮೊದಲ ಬಾಲಿವುಡ್ ಸಿನಿಮಾ. ಈ ಮೂಲಕ ಆಟ್ಲೀ ಬಾಲಿವುಡ್ ನಲ್ಲೂ ಮಿಂಚುತ್ತಿದ್ದಾರೆ. ಮೊದಲ ಬಾಲಿವುಡ್​ ಸಿನಿಮಾದಲ್ಲೇ ಅಬ್ಬರಿಸಲಿದ್ದಾರೆ ಎನ್ನುವುಕ್ಕೆ ‘ಜವಾನ್’ಪ್ರಿವ್ಯೂ ನೋಡಿದ್ರೆ ಗೊತ್ತಾಗುತ್ತಿದೆ. ಅಂದಹಾಗೆ ಜವಾನ್ ಹಿಂದಿ, ತಮಿಳು, ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ.

ಅವಳಿ ಮಕ್ಕಳಿಗೆ ಪಠಾಣ್​, ಜವಾನ್​ ಎಂದು ಹೆಸರಿಡ್ಲಾ ಎಂದ ಮಹಿಳೆಗೆ ಶಾರುಖ್​ ಉತ್ತರ!

ಸದ್ಯ ರಿಲೀಸ್ ಆಗಿರುವ ಪ್ರಿವ್ಯೂ ನೋಡಿದ್ರೆ ಶಾರುಖ್ ಖಾನ್ ಎರಡು ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಶಾರುಖ್ ಇಲ್ಲಿ ವಿಲನ್ನಾ ಅಥವಾ ಹೀರೋನಾ ಎನ್ನುವುದು ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಆಕ್ಷನ್ ದೃಶ್ಯಗಳು ಹೆಚ್ಚಾಗಿದ್ದು ಪಠಾಣ್ ಬಳಿಕ ಮತ್ತೆ ಶಾರುಖ್ ಮಾಸ್ ಲುಕ್ ನಲ್ಲೇ ದರ್ಶನ ನೀಡಿದ್ದಾರೆ. ಇನ್ನು ‘ಜವಾನ್’ ಸಿನಿಮಾದ ಟೈಟಲ್ ಹೇಳುವಂತೆ ಇದೊಂದು ಯೋಧನ ಕಥೆ. ನಯನತಾರಾ ಖಡಕ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮತ್ತೊಂದು ಮಾಸ್ ಹಿಟ್ ಕೊಡೋಕೆ ಶಾರುಖ್ ಖಾನ್ ಅವರು ಸಿದ್ಧವಾಗಿದ್ದು ಅಟ್ಲಿ ಅವರ ನಿರ್ದೇಶನದ ಮೇಲೂ ಭರವಸೆ ಮೂಡಿದೆ.

Jawan Prevue: ಶಾರುಖ್ ಖಾನ್ ಹೀರೋನಾ OR ವಿಲನ್ನಾ? ಮೊಟ್ಟೆ ಲುಕ್‌ನಲ್ಲಿ ಕಿಂಗ್ ಖಾನ್ ಎಂಟ್ರಿ

ಸದ್ಯ ಟೀಸರ್ ಮತ್ತು ಟ್ರೈಲರ್ ಮೂಲಕ ಸದ್ದು ಮಾಡುತ್ತಿರುವ ಜವಾನ್ ಸಿನಿಮಾ ಸೆಪ್ಟಂಬರ್ ನಲ್ಲಿ ತೆರೆಗೆ ಬರುತ್ತಿದೆ. ಸೆಪ್ಟಂಬರ್ 7ಕ್ಕೆ ರಿಲೀಸ್ ಆಗುತ್ತಿದೆ. ಜವಾನ್ ಸಿನಿಮಾ ಪಠಾಣ್ ಚಿತ್ರವನ್ನು ಮೀರಿಸಿ ಅತೀ ಹೆಚ್ಚು ಕಲೆಕ್ಷನ್ ಮಾಡುವ ಮೂಲಕ ದಾಖಲೆ ನಿರ್ಮಿಸುತ್ತಾ ಕಾದುನೋಡಬೇಕಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಜಗಳದ ಕಾರಣದಿಂದ ನಾವು ದೂರವಾಗಲು ಬಯಸಲಿಲ್ಲ, ಜಗಳವನ್ನೇ ದೂರಮಾಡಲು ಬಯಸಿದ್ದೇವೆ; ಸೋನಾಕ್ಷಿ ಸಿನ್ಹಾ!
ಬಾಲಿವುಡ್‌ ಈ ಸ್ಟಾರ್ ನಟಿಯರು ರಿಜೆಕ್ಟ್ ಮಾಡಿದ್ರು ಆ ಸಿನಿಮಾ; ಆದ್ರೆ ಮುಂದೆ ಅವರೆಲ್ಲರ ಲೈಫ್‌ನಲ್ಲಿ ಏನಾಯ್ತು?