
ಸ್ಯಾಂಡಲ್ ವುಡ್‌ನ ಖ್ಯಾತ ನಿರ್ದೇಶಕ ಯೋಗರಾಜ್ ಭಟ್(Yogaraj Bhat) ಅವರ ಮಾವ, ಹಿರಿಯ ನಟ ಸತ್ಯ ನಾರಾಯಣ್(Sathya Narayan) ಇಂದು (ಜೂನ್ 3) ಹೃದಯಾಘಾತದಿಂದ ನಿಧನ(Heart Attack) ಹೊಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 70 ವರ್ಷದ ಸತ್ಯ ನಾರಾಯಣ್ ಯೋಗರಾಜ್ ಭಟ್ ಅವರ ಪತ್ನಿಯ ತಂದೆ. ನಟ ನಾರಾಯಣ್ ಮಗಲು ಮತ್ತು ಅಳಿಯ ಯೋಗರಾಜ್ ಭಟ್ಟರ ಬೆಂಗಳೂರಿನ ಮನೆಯಲ್ಲೇ ವಾಸವಿದ್ದರು ಎನ್ನಲಾಗಿದೆ. ಇಂದು ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
Bhajan Sopori Passed Away: ಸಂತೂರ್ ಮಾಂತ್ರಿಕ ಪಂಡಿತ್ ಭಜನ್ ಸೊಪೋರಿ ವಿಧಿವಶ
ಸತ್ಯ ನಾರಾಯಣ್ ಅವರು ಹಲವಾರು ಸಿನಿಮಾಗಳಲ್ಲಿ ನಟಿಸಿದ್ದರು. ಪವನ್ ಕುಮಾರ್ ನಿರ್ದೇಶನದ ಲೈಫು ಇಷ್ಟೇನೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸತ್ಯ ಅವರು ಇಪ್ಪತ್ತೈದಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಲೈಫ್ ಇಷ್ಟೇನೆ ಪಾತ್ರದಿಂದ ಸಿನಿಮಾ ರಂಗಕ್ಕೆ ಕಾಲಿಟ್ಟರೆ, ಗಣೇಶ್, ದುನಿಯಾ ವಿಜಯ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಹೆಸರಾಂತ ನಟರ ಜೊತೆ ತೆರೆಹಂಚಿಕೊಂಡಿದ್ದಾರೆ.
KK ಪತ್ನಿ ಮತ್ತು ಮಕ್ಕಳ ಜೊತೆ ಮಾತನಾಡಲು ಧೈರ್ಯವಿಲ್ಲ: ಜಾವೇದ್ ಅಲಿ
ಯೋಗರಾಜ್ ಭಟ್ ನಿರ್ದೇಶನದ ಅನೇಕ ಸಿನಿಮಾಗಳಲ್ಲೂ ಸತ್ಯ ನಾರಾಯಣ್ ಕಾಣಿಸಿಕೊಂಡಿದ್ದರು. ಜಯಮ್ಮನ ಮಗ, ಕೆಂಡ ಸಂಪಗೆ, ಕಡ್ಡಿಪುಡಿ, ದನಕಾಯೋನು ಹಾಗೂ ಆಕ್ಟ್ 1978, ಪ್ರೀತಿ ಗೀತಿ ಇತ್ಯಾದಿ ಸೇರಿದಂತೆ ಅನೇಕ ಚಿತ್ರಗಳಲ್ಲಿ ಇವರು ನಟಿಸಿದ್ದರು. ನಟ ಸತ್ಯ ನಾರಾಯಣ್, ಯೋಗರಾಜ್ ಭಟ್ ಅವರ ಮನೆಯಲ್ಲೇ ಕೊನೆಯುಸಿರೆಳಿದ್ದು ಭಟ್ಟರ ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ತೆ ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸಂಜೆ ಬೆಂಗಳೂರಿನ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.