ಕರಣ್ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ 55 ಮಂದಿಗೆ ಕೊರೊನಾ ಪಾಸಿಟಿವ್? ವಿಷಯ ಮುಚ್ಚಿಟ್ಟ ಸ್ಟಾರ್ಸ್

Published : Jun 05, 2022, 12:01 PM IST
ಕರಣ್ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ 55 ಮಂದಿಗೆ ಕೊರೊನಾ ಪಾಸಿಟಿವ್? ವಿಷಯ ಮುಚ್ಚಿಟ್ಟ ಸ್ಟಾರ್ಸ್

ಸಾರಾಂಶ

ಕರಣ್ ಜೋಹರ್ ಬರ್ತಡೇ ಪಾರ್ಟಿ ಮತ್ತೆ ಸದ್ದು ಮಾಡುತ್ತಿದೆ. ಕರಣ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದ ಅನೇಕ ಸೆಲೆಬ್ರಿಟಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಸುಮಾರು 50 ರಿಂದ 55 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎನ್ನುವ ಸುದ್ದಿ ವೈರಲ್ ಆಗಿದೆ.

ಬಾಲಿವುಡ್‌ನ ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್(Karan Johar) 50ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚಿಗಷ್ಟೆ ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು. ಕರಣ್ ಜೋಹರ್ ಯಾವುದೇ ಕಾರ್ಯಕ್ರಮವನ್ನು ಗ್ರ್ಯಾಂಡ್ ಆಗಿ ಆಚರಿಸುತ್ತಾರೆ. ಇಡೀ ಬಾಲಿವುಡ್ ಮಂದಿಗೆ ಆಹ್ವಾನ ನೀಡುತ್ತಾರೆ. ಈ ಬಾರಿಯ ಹುಟ್ಟುಹಬ್ಬವನ್ನು ಸಹ ಅಷ್ಟೆ ಅದ್ದೂರಿಯಾಗಿ ಆಗಿ ಸೆಲೆಬ್ರೇಟ್ ಮಾಡಿದ್ದರು. ಈ ಬಾರಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅನೇಕ ಸೆಲೆಬ್ರಿಟಗಳು ಭಾಗಿಯಾಗಿದ್ದರು. ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ದಂಪತಿ, ಸಲ್ಮಾನ್ ಖಾನ್, ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಂಪತಿ, ಮಲೈಕಾ ಅರೋರಾ, ಮಾದುರಿ ದೀಕ್ಷಿತ್ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಹಾಜರಿದ್ದರು. ಇನ್ನು ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ಸೈಫ್ ಅಲಿ ಖಾನ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

ಮೇ 25ರಂದು ಅದ್ದೂರಿಯಾಗಿ ಬರ್ತಡೇ ಕಾರ್ಯಕ್ರಮ ನೆರವೇರಿತ್ತು. ಸದ್ಯ ಕರಣ್ ಜೋಹರ್ ಬರ್ತಡೇ ಪಾರ್ಟಿ ಮತ್ತೆ ಸದ್ದು ಮಾಡುತ್ತಿದೆ. ಕರಣ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದ ಅನೇಕ ಸೆಲೆಬ್ರಿಟಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಸುಮಾರು 50 ರಿಂದ 55 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎನ್ನುವ ಸುದ್ದಿ ತಡವಾಗಿ ವೈರಲ್ ಆಗಿದೆ.

ಆಂಗ್ಲ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಕರಣ್ ಜೋಹರ್ ಬರ್ತಡೇ ಪಾರ್ಟಿ ಬಳಿಕ ಬಾಲಿವುಡ್‌ನ ಅನೇಕ ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ವಿಚಾರವನ್ನು ಯಾರು ರಿವೀಲ್ ಮಾಡಿಲ್ಲ. ಈ ಹಿಂದೆಯೂ ಕರಣ್ ಬರ್ತಡೇ ಪಾರ್ಟಿ ನೆಗೆಟಿವ್ ವಿಚಾರವಾಗಿ ಸುದ್ದಿಯಾಗಿತ್ತು. ಹಾಗಾಗಿ ಮತ್ತೆ ವಿವಾದವಾಗುವುದು ಬೇಡ ಎನ್ನುವ ಕಾರಣಕ್ಕೆ ಈ ಬಾರಿ ಕೊರೊನಾ ಸೋಂಕು ತಗುಲಿದ್ದ ವಿಚಾರವನ್ನು ಮುಚ್ಚಿಡಲಾಗಿದೆ ಎನ್ನಲಾಗುತ್ತಿದೆ.

ಕರಣ್ ಜೋಹರ್ ಬರ್ತಡೇ ಪಾರ್ಟಿಯಲ್ಲಿ ಸಲ್ಮಾನ್, ಐಶ್ವರ್ಯಾ, ರಶ್ಮಿಕಾ, ದೇವರಕೊಂಡ ; ಇನ್ನು ಯಾರೆಲ್ಲ ಸ್ಟಾರ್ಸ್ ಹಾಜರಿದ್ದರು?

ನಟ ಕಾರ್ತಿಕ್ ಆರ್ಯನ್ ಕೂಡ ಕೊರೊನಾ ಸೋಂಕು ತಗುಲಿತ್ತು. ಆದರೆ ಕಾರ್ತಿಕ್, ಕರಣ್ ಪಾರ್ಟಿಯಲ್ಲಿ ಭಾಗಿಯಾಗಿರಲಿಲ್ಲ. ಆದರೆ ಕರಣ್ ಪಾರ್ಟಿಯಲ್ಲಿ ಭಾಗಿಯಾದವರ ಜೊತೆ ಸಂಪರ್ಕ ಹೊಂದಿದ ಕಾರಣ ಕಾರ್ತಿಕ್ ಆರ್ಯನ್‌ಗೂ ಕೊರೊನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಅಕ್ಷಯ್ ಕುಮಾರ್, ವಿಕ್ಕಿ ಕೌಶಲ್, ಕಾರ್ತಿಕ್ ಆರ್ಯನ್ ಸೇರಿದಂತೆ ಅನೇಕ ಮಂದಿಗೆ ಕೊರೊನಾ ಸೋಂಕು ತಗುಲಿತ್ತು.

ಸದ್ಯ ಬಾಲಿವುಡ್ ಸೆಲೆಬ್ರೇಟಿಗಳು ಅಬುಧಾಬಿಯಲ್ಲಿ ಬೀಡುಬಿಟ್ಟಿದ್ದಾರೆ. ಬಾಲಿವುಡ್‌ನ ಅನೇಕ ತಾರೆಯರು ಅಬುಧಾಬಿಗೆ ಹಾರಿದ್ದು ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. IIFA 2022 ಅಬುಧಾಬಿಯಲ್ಲಿ ನಡೆದಿದೆ. ಜೂನ್ 3 ಮತ್ತು 4ರಂದು ನಡೆದ ಅದ್ದೂರಿ ಸಮಾರಂಭದಲ್ಲಿ ಬಹುತೇಕ ಬಾಲಿವುಡ್ ಸ್ಟಾರ್ ಹಾಜರಿದ್ದರು.

ಕರಣ್ ಜೋಹರ್‌ ಬರ್ತ್‌ಡೇಗೆ ಬಂದು ಟ್ರೋಲ್ ಆದ ಮಲೈಕಾ; ವಿಡಿಯೋ ವೈರಲ್

ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್, ಸಲ್ಮಾನ್ ಖಾನ್, ರಿತೇಶ್ ದೇಶಮುಖ್, ರಣ್ವೀರ್ ಸಿಂಗ್, ಸಾರಾ ಅಲಿ ಖಾನ್, ವರುಣ್ ಧವನ್, ಅನನ್ಯಾ ಪಾಂಡೆ, ನೋರಾ ಫತಾಯಿ ಸೇರಿದಂತೆ ಅನೇಕರು ಹಾಜರಾಗಿದ್ದಾರೆ. ಸಮಾರಂಭದಲ್ಲಿ ಭಾಗಿಯಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ರೆಡ್ ಕಾರ್ಪೆ್ಟ್ ಮೇಲೆ ಹೆಜ್ಜೆ ಹಾಕಿದ ತಾರೆಯರನ್ನು ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?
10 ಭಾಷೆಗಳಲ್ಲಿ 90 ಸಿನಿಮಾಗಳು, ಗಂಗೂಲಿ ಜೊತೆ ಅಫೇರ್ ವದಂತಿ.. 50 ವರ್ಷವಾದರೂ ಮದುವೆಯಾಗದ ನಟಿ ಯಾರು?