800 ಕೋಟಿ ಬಂಗಲೆಯಲ್ಲಿ ಕರೀನಾ ಹುಟ್ಟುಹಬ್ಬ: ಮುನ್ನೆಲೆಗೆ ಬಂತು ಮತಾಂತರದ ವಿಷ್ಯ!

By Suvarna News  |  First Published Sep 21, 2023, 6:01 PM IST

ಇಂದು ನಟಿ ಕರೀನಾ ಕಪೂರ್​ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ 800 ಕೋಟಿ ರೂ. ಬಂಗಲೆಯಲ್ಲಿ ನಟಿಯ ಹುಟ್ಟುಹಬ್ಬ ಆಚರಿಸಲಾಗಿದ್ದು, ಮತಾಂತರ ವಿಷ್ಯ ಮುನ್ನೆಲೆಗೆ ಬಂದಿದೆ. 
 


ಇಂದು ಬಾಲಿವುಡ್​ ಬ್ಯೂಟಿ  ಕರೀನಾ ಕಪೂರ್​ ಖಾನ್​ ಅವರಿಗೆ 43ನೇ ಹುಟ್ಟುಹಬ್ಬದ ಸಂಭ್ರಮ. 800 ಕೋಟಿ ರೂಪಾಯಿಯ ಬಂಗಲೆಯಲ್ಲಿ ಇವರ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಾಯಿತು. ಅಷ್ಟಕ್ಕೂ ಈ ಮನೆ ಅವರ ಪತಿ  ಸೈಫ್ ಅಲಿ ಖಾನ್ ಅವರ ಪೂರ್ವಜರ ಮನೆಯಾದ ಪಟೌಡಿಯವರಿಗೆ ಸೇರಿರುವುದು.  ಕರಿಷ್ಮಾ ಅವರೇ ಕರೀನಾ ಅವರ ಕೈಯಿಂದ ಹುಟ್ಟುಹಬ್ಬದ ಕೇಕ್​ ಕತ್ತರಿಸಿಕೊಂಡಿದ್ದಾರೆ.  ಕರಿಷ್ಮಾ ಅವರು "ನಮ್ಮ ಜಾನೆ ಜಾನ್ ಹ್ಯಾಪಿ ಬರ್ತ್‌ಡೇ" ಎಂಬ ಟ್ಯಾಗ್‌ನ ಮೇಲೆ ಅಲಂಕರಿಸಿದ ರುಚಿಕರವಾದ ಕೇಕ್‌ನ ಚಿತ್ರವನ್ನು ಶೇರ್​ ಮಾಡಿಕೊಂಡಿದ್ದಾರೆ.  ಸಹೋದರಿಯರು  ತಮ್ಮ ಉಡುಪುಗಳಲ್ಲಿ ಡ್ರಾಪ್-ಡೆಡ್-ಗಾರ್ಜಿಯಸ್ ಆಗಿ ಕಾಣಿಸುತ್ತಿದ್ದಾರೆ. ಕರೀನಾ ಹುಟ್ಟುಹಬ್ಬದ ಸಂದರ್ಭದಲ್ಲಿದ್ದರೆ ಇದೇ ವೇಳೆ ಮತಾಂತರ ವಿಷಯ ಮುನ್ನೆಲೆಗೆ ಬಂದಿದ್ದು, ಅದರ ಭಾರಿ ಚರ್ಚೆ ಶುರುವಾಗಿದೆ.

ಅಷ್ಟಕ್ಕೂ, ಬಾಲಿವುಡ್​ನ ಸದ್ಯದ ಯಶಸ್ವಿ ಜೋಡಿಗಳಲ್ಲಿ ಒಂದೆನಿಸಿದೆ ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್​ ಅವರ ಜೋಡಿ.  ಎಲ್ಲರಿಗೂ ತಿಳಿದಿರುವಂತೆ ಇದು ಸೈಫ್​ ಅಲಿ ಅವರಿಗೆ ಎರಡನೆಯ ಮದುವೆ. ಅವರ ಮೊದಲ ಮದುವೆಯಾದದ್ದು ನಟಿ ಅಮೃತಾ ಸಿಂಗ್​ ಅವರ ಜೊತೆಗೆ. ತಮ್ಮ ಮೊದಲ ಮದುವೆಗೆ ಬಂದಿದ್ದ ಕರೀನಾ ಕಪೂರ್​ ಅವರನ್ನು ಮಗಳೇ ಎಂದು ಕರೆದಿದ್ದ ಸೈಫ್​ ಅಲಿ ನಂತರ ಆಕೆಯನ್ನೇ ಮದುವೆಯಾಗಿ ಟ್ರೋಲ್​ಗೂ ಒಳಗಾಗಿದ್ದಿದೆ. ಅದೇನೇ ಇದ್ದರೂ ಸದ್ಯ ಈ ದಂಪತಿಗೆ ಇಬ್ಬರು ಪುತ್ರರಿದ್ದಾರೆ. ಕೆಲವು ಖ್ಯಾತನಾಮ ನಟರಂತೆಯೇ ಸೈಫ್​ ಅಲಿ ಕೂಡ ಇಬ್ಬರೂ ಹಿಂದೂ ಯುವತಿಯರನ್ನು ಮದುವೆಯಾಗಿ ಸಕತ್​ ಸುದ್ದಿ ಮಾಡಿದವರು. ಸೈಫ್​ ಅಲಿ ಖಾನ್​ ಕರೀನಾರಿಗಿಂತಲೂ 10 ವರ್ಷ ದೊಡ್ಡವರು. 5 ವರ್ಷಗಳ ಕಾಲ ಲಿವ್-ಇನ್ (Live in relation) ಸಂಬಂಧದಲ್ಲಿದ್ದ ಈ ಜೋಡಿ ಕೊನೆಗೆ ಮದುವೆಯಾಗಿತ್ತು. ಅದಾಗಲೇ ಲವ್ ಜಿಹಾದ್ ಎಂಬ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಸುದ್ದಿಯೇ ಆಗಿಬಿಟ್ಟಿತ್ತು. 

Tap to resize

Latest Videos

ನಾಲ್ಕು ಮಕ್ಕಳ ಜೊತೆ ಸೈಫ್​ ಅಲಿ ಫೋಟೋ ಶೇರ್​ ಮಾಡಿದ್ರೆ ಹೀಗೆಲ್ಲಾ ಕಮೆಂಟ್​ ಹಾಕೋದಾ?

ನಟ ಸೈಫ್​ ಅಲಿ ಇದೀಗ ತಮಗಿಂತ 10 ವರ್ಷ ಚಿಕ್ಕವರಾಗಿರುವ ನಟಿ ಕರೀನಾರನ್ನು (Kareena Kapoor) ಮದುವೆಯಾಗಿದ್ದರೆ, ಅಮೃತಾ ಸಿಂಗ್​ ಅವರನ್ನು ಮದುವೆಯಾದಾಗ ಸೈಫ್ ಅವರಿಗೆ ವಯಸ್ಸು 21. ಆದರೆ ಅಮೃತಾ ಸಿಂಗ್‌ ಅವರಿಗೆ 32 ವರ್ಷ ವಯಸ್ಸಾಗಿತ್ತು!  ಎಲ್ಲರನ್ನೂ ಎದುರು ಹಾಕಿಕೊಂಡು 12 ವರ್ಷ ಹಿರಿಯ ನಟಿಯನ್ನು ಮದುವೆಯಾಗಿದ್ದರು ಎಂದೇ ಸುದ್ದಿಯಾಗಿತ್ತು. ಇದು ದೊಡ್ಡ ಮಟ್ಟದಲ್ಲಿ ಹಲ್​ಚಲ್​ ಸೃಷ್ಟಿಸಿತ್ತು. ನಂತರ ಸೈಫ್ ಅಲಿ ಖಾನ್ ಮತ್ತು ಅಮೃತಾ ಸಿಂಗ್ 13 ವರ್ಷಗಳ  ದಾಂಪತ್ಯದ  ನಂತರ ವಿಚ್ಛೇದನ ಪಡೆದರು. 2004ರಲ್ಲಿ ಸೈಫ್‌ ಹಾಗೂ ಅಮೃತಾ ತಮ್ಮ ಮದುವೆಯನ್ನು ಕೊನೆಗೊಳಿಸಲು ನಿರ್ಧರಿಸಿದಾಗ ಸಾರಾ 10 ಮತ್ತು ಇಬ್ರಾಹಿಂ 4 ವರ್ಷ ವಯಸ್ಸಿನವರಾಗಿದ್ದರು. ಇದೀಗ 53 ವರ್ಷದ ಸೈಫ್​ ಅಲಿ ಖಾನ್​ ಅವರಿಗೆ ಅಮೃತಾ ಸಿಂಗ್​ ಮತ್ತು ಕರೀನಾ ಕಪೂರ್​ ಈ ಇಬ್ಬರು  ಪತ್ನಿಯರಿಂದ ನಾಲ್ವರು ಮಕ್ಕಳಿದ್ದಾರೆ. ಅವರ ಹೆಸರು ಸಾರಾ ಅಲಿ ಖಾನ್​ (Sara Ali Khan), ಇಬ್ರಾಹಿಂ ಅಲಿ ಖಾನ್​, ತೈಮೂರು ಅಲಿ ಖಾನ್​ ಹಾಗೂ ಜೆಹ್​  ಅಲಿ ಖಾನ್​.  

ಲವ್​ ಜಿಹಾದ್​ ಎಂದೇ ಇವರ ಮದುವೆಯನ್ನು ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿರುವ ಸೈಫ್​ ಅಲಿ ಖಾನ್​, ನಾನು ಎಲ್ಲ ಧರ್ಮವನ್ನೂ ಪಾಲಿಸುವವ. ಕರೀನಾ ಜೊತೆ ಪ್ರೀತಿ ಮಾಡಿ ಮದುವೆ ಮಾಡಿಕೊಂಡಿದ್ದೇನೆ. ಯಾವುದೇ  ಕಾರಣಕ್ಕೂ ಆಕೆಯ ಮತಾಂತರಕ್ಕೆ ನಾನು ಬಲವಂತಗೊಳಿಸಲಿಲ್ಲ. ಆಕೆ ಹಿಂದೂ ಧರ್ಮವನ್ನೇ ಪಾಲಿಸುತ್ತಿದ್ದಾಳೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದು, ಅದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಇದಕ್ಕೆ ಕಮೆಂಟ್​ ಹಾಕಿರುವ ನೆಟ್ಟಿಗರು, ಎಲ್ಲವೂ ಸರಿ, ಹಿಂದೂಗಳನ್ನು ಮದ್ವೆಯಾಗಿರುವ ಖಾನ್​ ನಟರು ತಮ್ಮ ಹಿಂದೂ ಧರ್ಮದ ಬಗ್ಗೆ ಇಷ್ಟೆಲ್ಲಾ ಎದುರುಗಡೆ ಮಾತನಾಡುವವರು ಮಕ್ಕಳಿಗೆ ಮಾತ್ರ ಖಾನ್​ ಎನ್ನುವುದನ್ನು ಇಡಲು ಮರೆಯುವುದಿಲ್ಲ, ಭೇಷ್​ ಭೇಷ್​ ಎನ್ನುತ್ತಿದ್ದಾರೆ.

ಪ್ರೀತಿ ಮುಖ್ಯ, ಲಿಂಗ-ಗಾತ್ರವಲ್ಲ: ಮಕ್ಕಳಿಗೆ ಸಲಿಂಗಿ ಮದ್ವೆ ಕುರಿತು ಕರೀನಾ ಕಪೂರ್‌ ಪಾಠ
 

click me!