
ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಅದರಲ್ಲೂ ಸಿನಿಮಾ ಸೆಲೆಬ್ರಿಟಿಗಳಲ್ಲಿ ಕೊರೊನಾ ಸೋಂಕು ಜಾಸ್ತಿಯಾಗುತ್ತಿದೆ. ಇತ್ತೀಚಿಗಷ್ಟೆ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸದ್ಯ ಅಮಿತಾಭ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಿತಾಭ್ ಬಚ್ಚನ್ ಅವರಿಗೆ 2ನೇ ಬಾರಿಗೆ ಕೊರೊನಾ ಪಾಸಿಟಿವ್ ಆಗಿದ್ದು ಅಭಿಮಾನಿಗಳ ಆತಂಕ ಹೆಚ್ಚಾಗಿದೆ. ಅಮಿತಾಭ್ ಬಚ್ಚನ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಇದೀಗ ಸೌತ್ ಸುಂದರಿ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾದ ನಾಯಕಿ ಅನುಪಮಾ ಪರಮೇಶ್ವರನ್ ಅವರಿಗೂ ಕೊರೊನಾ ಪಾಸಿಟಿವ್ ಆಗಿದೆ. ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಅನುಪಮಾ ಪರಮೇಶ್ವರನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.
ಅನುಪಮಾ ಪರಮೇಶ್ವರನ್ ಇತ್ತೀಚಿಗಷ್ಟೆ ಕಾರ್ತಿಕೇಯ-2 ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಆಗಸ್ಟ್ 13ರಂದು ರಿಲೀಸ್ ಆಗಿದೆ. ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಡೀ ಸಿನಿಮಾತಂಡ ಸಕ್ಸಸ್ ಸಂಭ್ರಮದಲ್ಲಿದೆ. ಆದರೆ ಅನುಪಮಾ ಪರಮೇಶ್ವರನ್ ಕೊರೊನಾ ಕಾರಣ ಸಕ್ಸಸ್ ಸಂಭ್ರಮದಿಂದ ದೂರ ಇರುವಂತೆ ಆಗಿದೆ. ಅಂದಹಾಗೆ ಅನುಪಮಾ ಈ ಸಿನಿಮಾದ ಪ್ರಮೋಷನ್ ಗಾಗಿ ದಕ್ಷಿಣ ಭಾರತದ ಅನೇಕ ಪ್ರದೇಶಗಳಲ್ಲಿ ಓಡಾಡಿದ್ದರು. ಅನೇಕ ಜನರನ್ನು ಭೇಟಿಯಾಗಿದ್ದರು. ಸಾಕಷ್ಟು ಸಿನಿಮಾತಂಡ ಅಭಿಯಾನ ಹಮ್ಮಿಕೊಂಡಿತ್ತು. ಸಿನಿಮಾ ಪ್ರಚಾರವೆಲ್ಲ ಮುಗಿಯುತ್ತಿದ್ದಂತೆ ಅನುಪಮಾಗೆ ಸಿಕ್ಕಾಪಟ್ಟೆ ಶೀತ ಮತ್ತು ಜ್ವರ ಕಾಣಿಸಿಕೊಂಡಿದೆ. ಬಳಿಕ ಪರೀಕ್ಷೆ ಮಾಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಅಮಿತಾಭ್ ಬಚ್ಚನ್‌ಗೆ 2ನೇ ಬಾರಿ ಕೊರೊನಾ ಪಾಸಿಟಿವ್; ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ
ಅನುಪಮಾ ಅವರಿಗೆ ಸೋಂಕಿನ ತೀವ್ರತೆ ಕಡಿಮೆ ಇದೆ ಎಂದು ಮೂಲಗಳು ತಿಳಿಸಿವೆ. ಅಭಿಮಾನಿಗಳು ಅತಂಕ ಪಡಬೇಕಾಗಿಲ್ಲ. ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿಸಿವೆ. ಅನುಪಮಾ ಪರಮೇಶ್ವರನ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ರಾಜ್ಯದಲ್ಲಿ 1191 ಜನಕ್ಕೆ ಕೊರೋನಾ: 3 ಸಾವು
ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಅನುಪಮಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮಿಳು ಮತ್ತು ತೆಲುಗಿನಲ್ಲಿ ಹೆಚ್ಚು ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕಾರ್ತಿಕೇಯ-2 ಸಕ್ಸಸ್ ನ ಖುಷಿಯಲ್ಲಿರುವ ಅನುಪಮಾ ಇದೀಗ ತೆಲುಗಿನಲ್ಲಿ 18 ಪೇಜ್ ಮತ್ತು ಬಟರ್‌ಫ್ಲೈ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಪ್ರೇಮಂ ಸಿನಿಮಾ ಮೂಲಕ ಖ್ಯಾತಿ ಗಳಿಸಿದ ಅನುಪಮಾ ಬಳಿಕ ಅನೇಕ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಮಲಯಾಳಂನ ಈ ಸುಂದರಿ ಪ್ರೇಮಂ ಸಕ್ಸಸ್ ಬಳಿಕ ತಮಿಳು ಮತ್ತು ತೆಲುಗಿನಲ್ಲೂ ಮಿಂಚಿದ್ದಾರೆ. ಅನುಪಮಾ ಪರಮೇಶ್ವರನ್ ಕನ್ನಡದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾದಲ್ಲಿ ನಟಿಸಿದ್ದರು. ಈ ಮೊದಲ ಮೊದಲ ಬಾರಿಗೆ ಕನ್ನಡ ಪ್ರೇಕ್ಷಕರ ಮುಂದೆ ಬಂದಿದ್ದರು. ಮತ್ತೆ ಯಾವಾಗ ಕನ್ನಡದಲ್ಲಿ ನಟಿಸುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಸದ್ಯ ಕೊರೊನಾದಿಂದ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.