
ಸಿನಿವಾರ್ತೆ (ಜ.1): ‘ಕಾಟೇರ’ ಚಿತ್ರದ ಅಭೂತಪೂರ್ವ ಗೆಲುವಿಗೆ ‘ಕಾಟೇರ’ಖುಷಿಯಾಗಿದೆ ಈ ಹಿನ್ನೆಲೆಯಲ್ಲಿ ಚಿತ್ರದ ನಾಯಕ ದರ್ಶನ್ ಇಂದು ಸಂಜೆ 5 ಗಂಟೆಗೆ ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಅಭಿಮಾನಿಗಳ ಜೊತೆಗೆ ಸಂಭ್ರಮಾಚರಣೆ ಮಾಡಲಿದ್ದಾರೆ.
ತರುಣ್ ಸುಧೀರ್ ನಿರ್ದೇಶನದ, ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ ‘ಕಾಟೇರ’ ಚಿತ್ರಕ್ಕೆ ರಾಜ್ಯಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿಗಳನ್ನು ಭೇಟಿ ಮಾಡುತ್ತಿದ್ದಾರೆ. ಗೆಲುವಿನ ಕುರಿತು ದರ್ಶನ್, ‘ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯೆಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆ ನಮ್ಮ ಚಿತ್ರತಂಡದ ಮನತುಂಬಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿ ಚಿತ್ರತಂಡ ಕೂಡ ಜೊತೆಗಿರಲಿದೆ.
ಕನ್ನಡ ಸಿನಿಪ್ರೇಮಿಗಳಿಗೆ ಹಬ್ಬವೋ ಹಬ್ಬ; 2024ರ ಭರವಸೆಯ ಸಿನಿಮಾಗಳ ಪಟ್ಟಿ ಇಲ್ಲಿದೆ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.