28 ಸಿನಿಮಾ ಹಿಂದಿಕ್ಕಿ ಆಸ್ಕರ್​ ಅಂಗಳಕ್ಕೆ 'ಲಾಪತಾ ಲೇಡೀಸ್': ಚೊಚ್ಚಲ ಚಿತ್ರದಲ್ಲಿ ಮೂವರು ತಾರೆಯರಿಗೆ ಧಮಾಕಾ! ​

Published : Sep 23, 2024, 02:31 PM ISTUpdated : Sep 23, 2024, 03:29 PM IST
28 ಸಿನಿಮಾ ಹಿಂದಿಕ್ಕಿ ಆಸ್ಕರ್​ ಅಂಗಳಕ್ಕೆ 'ಲಾಪತಾ ಲೇಡೀಸ್': ಚೊಚ್ಚಲ ಚಿತ್ರದಲ್ಲಿ ಮೂವರು ತಾರೆಯರಿಗೆ ಧಮಾಕಾ! ​

ಸಾರಾಂಶ

 ಮೂವರು ಹೊಸತಾರೆಯರನ್ನು ಪರಿಚಯಿಸಿರೋ ಆಮೀರ್​ ಖಾನ್​ ಮಾಜಿ ಪತ್ನಿ ಕಿರಣ್​ ರಾವ್​ ಅವರ ಲಾಪತಾ ಲೇಡೀಸ್​    28 ಸಿನಿಮಾಗಳನ್ನು ಹಿಂದಿಕ್ಕಿ ಆಸ್ಕರ್​ ಅವಾರ್ಡ್​ಗೆ ಪ್ರವೇಶ ಪಡೆದಿದೆ. ಇಲ್ಲಿದೆ ಡಿಟೇಲ್ಸ್​  

ಕೇವಲ ನಾಲ್ಕು ಕೋಟಿ ರೂಪಾಯಿಗಳಲ್ಲಿ ನಿರ್ಮಿಸಲಾದ ಬಾಲಿವುಡ್​ನ ಲಾ ಪತಾ ಲೇಡೀಸ್​  ಹಲವು ದಾಖಲೆಗಳನ್ನು ಇದಾಗಲೇ ಬರೆದಿದೆ. ನೂರಾರು ಕೋಟಿ ಬಜೆಟ್​ನಲ್ಲಿ ನಿರ್ಮಿಸಿ, ಕ್ರೌರ್ಯವನ್ನು ವಿಜೃಂಭಿಸುವ ಜೊತೆಗೆ ಬ್ಲಾಕ್​ಬಸ್ಟರ್​ ಎಂದೂ ಸಾಬೀತಾಗಿರೋ ಅನಿಮಲ್​ ಚಿತ್ರದ ದಾಖಲೆಯನ್ನು ಲಾಪತಾ ಲೇಡೀಸ್​ ಮುರಿದು ಹಾಕಿತ್ತು. ಇದೀಗ ಈ ಚಲಚಿತ್ರವು ಆಸ್ಕರ್​ ಅಂಗಳಕ್ಕೆ ಕಾಲಿಟ್ಟಿದೆ. ಈ ಚಿತ್ರವು ಅಧಿಕೃತವಾಗಿ ಆಸ್ಕರ್​ ಪ್ರಶಸ್ತಿಗೆ ಕಳುಹಿಸಲಾಗಿದೆ. ಕಳೆದು ಹೋಗುವ ಇಬ್ಬರು ವಧುಗಳ ಬಗೆಗಿನ ಕಥಾ ಹಂದರವನ್ನು ಈ ಚಿತ್ರ ಹೊಂದಿದೆ. ವಧು ಕಳೆದುಹೋಗಿರುವ ಕತೆಯಲ್ಲಿ ಸ್ತ್ರೀ ಸ್ವಾತಂತ್ರ್ಯ ಸೇರಿದಂತೆ ಹಲವು ಸೂಕ್ಷ್ಮ ವಿಷಯಗಳನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಆಮೀರ್ ಖಾನ್ ಬಂಡವಾಳ ಹೂಡಿರೋ ಈ ಚಿತ್ರಕ್ಕೆ  ಅವರ ಮಾಜಿ ಪತ್ನಿ, ನಿರ್ದೇಶಕಿ ಕಿರಣ್ ರಾವ್ ನಿರ್ದೇಶನ ಮಾಡಿದ್ದಾರೆ.  ಸಿನಿಮಾದಲ್ಲಿ ನಿತಾಂಶಿ ಘೋಯಲ್, ಪ್ರತಿಭಾ ರಂತಾ, ಸ್ಪರ್ಷ್ ಶ್ರೀವತ್ಸ, ಚಯ್ಯಾ ಕದಮ್ ಅಂಥಹಾ ಹೊಸ ನಟರು ನಟಿಸಿದ್ದಾರೆ. ಸಿನಿಮಾದ ಮುಖ್ಯ ಪಾತ್ರದಲ್ಲಿ ನಟ ರವಿ ಕಿಶನ್ ನಟಿಸಿದ್ದಾರೆ. ಈ ಚಿತ್ರವೀಗ ಅನಿಮಲ್​ ಚಿತ್ರದ ದಾಖಲೆಯನ್ನು ಹಿಂದಿಕ್ಕಿದೆ. ಈ ದಾಖಲೆ ಮುರಿದಿರುವುದು ನೆಟ್​ಫ್ಲಿಕ್ಸ್​ನಲ್ಲಿ. ಸಿನಿಮಾಕ್ಕೆ ನಾಲ್ಕು ಕೋಟಿ ಬಜೆಟ್​ನ ಈ ಸಿನಿಮಾ ಚಿತ್ರಮಂದಿರದಲ್ಲಿ 21 ಕೋಟಿ ಗಳಿಸಿತ್ತು. ಕೊನೆಗೆ ನೆಟ್​ಫ್ಲಿಕ್ಸ್​ನಲ್ಲಿಯೂ ಇದು ದಾಖಲೆ ಬರೆದಿದ್ದು, ಈಗ ಆಸ್ಕರ್​ ಅಂಗಳಕ್ಕೆ ಹೋಗಿದೆ.

ಆಸ್ಕರ್​ ರೇಸ್​ನಲ್ಲಿ ಈ ಚಿತ್ರವೂ ಸೇರಿದಂತೆ 29 ಸಿನಿಮಾಗಳಿದ್ದವು. ಆ ಪೈಕಿ ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಅಭಿನಯದ 'ಮಹಾರಾಜ'ವೇ ಆಯ್ಕೆಯಾಗಲಿದೆ ಎಂದೇ ಕೊನೆಯ ಕ್ಷಣದವರೆಗೂ ಅಂದುಕೊಳ್ಳಲಾಗಿತ್ತು. ಉಳಿದಂತೆ ತಮಿಳು ಚಿತ್ರ ಮಹಾರಾಜ, ತೆಲುಗುವಿನ  ಕಲ್ಕಿ 2898 AD ಮತ್ತು ಹನುಮಾನ್, ಬಾಲಿವುಡ್​ನ   ಸ್ವಾತಂತ್ರ್ಯ ವೀರ್ ಸಾವರ್ಕರ್ ಮತ್ತು ಆರ್ಟಿಕಲ್ 370 ಸಹ ಪಟ್ಟಿಯಲ್ಲಿದ್ದವು. ಆದರೆ ನಿರೀಕ್ಷೆಗೂ ಮೀರಿ ಲಾಪತಾ ಲೇಡೀಸ್​ ಆಯ್ಕೆಯಾಗಿದೆ. ಈ ಮೂಲಕ ಹೊಸದಾಗಿ ಎಂಟ್ರಿ ಕೊಟ್ಟಿರೋ, ಸ್ಪರ್ಶ್ ಶ್ರೀವಾಸ್ತವ, ಪ್ರತಿಭಾ ರಂಟಾ, ನಿತಾಂಶಿ ಗೋಯಲ್ ಅವರು ಲಾಟರಿ ಹೊಡೆದಿದ್ದಾರೆ. ಮೊದಲ ಚಿತ್ರದಲ್ಲಿಯೇ ಈ ಪರಿಯ ಯಶಸ್ಸು ಕಂಡಿದ್ದಾರೆ.   ಯಾವುದೇ ಸ್ಟಾರ್ ನಟರಿಲ್ಲದ, ಸರಳವಾದ ಕತೆಯನ್ನಷ್ಟೆ ಹೊಂದಿದೆ. ಈ ಚಿತ್ರವನ್ನು  ಸುಪ್ರೀಂ ಕೋರ್ಟ್​ನ 75ನೇ ವಾರ್ಷಿಕೋತ್ಸವದ ಸಲುವಾಗಿ  ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಅವರ ಸೂಚನೆ ಮೇರೆಗೆ ಪ್ರದರ್ಶನ ಮಾಡಲಾಗಿತ್ತು. ಈ ಮೂಲಕ ಮತ್ತೊಂದು ಐತಿಹಾಸಿಕ ಘಟನೆಗೆ ಚಿತ್ರ ಸಾಕ್ಷಿಯಾಗಿತ್ತು.  ಸಿಜೆಐ ಪತ್ನಿ ಕಲ್ಪನಾ ದಾಸ್​ ಅವರು ಈ ಚಿತ್ರವನ್ನು ಪ್ರದರ್ಶಿಸುವಂತೆ ಮನವಿ ಮಾಡಿಕೊಂಡಿದ್ದರಂತೆ. ಅದರಂತೆಯೇ ಚಿತ್ರ ಕಳೆದ ಆಗಸ್ಟ್​ 9ರಂದು ಪ್ರದರ್ಶನ ಮಾಡಲಾಗಿತ್ತು. 

ನಿನ್ನ ಜೊತೆ ಮಲಗಬೇಕು ಎಂದು ಆ ಹುಡುಗಿ ನೇರವಾಗೇ ಕೇಳಿದ್ಲು, ಆಮೇಲೆ... ಆಮೀರ್​ ಮಾತಿಗೆ ಪತ್ನಿ ಶಾಕ್​!

ಇದರಲ್ಲಿ ಭಾಗಿಯಾಗಲು ಕಿರಣ್​ ರಾವ್​ ಮತ್ತು ಆಮಿರ್​ ಖಾನ್​ ಅವರನ್ನು ಆಹ್ವಾನಿಸಲಾಗಿತ್ತು. ಅಷ್ಟಕ್ಕೂ ಈ ಚಿತ್ರವನ್ನು ಪ್ರದರ್ಶನ ಮಾಡಲು  'ಲಾಪತಾ ಲೇಡೀಸ್' ಒಂದು ಸಾಮಾಜಿಕ ಕಳಕಳಿಯುಳ್ಳ ಸಿನಿಮಾ. ಇದರಲ್ಲಿ ನಿರ್ದೇಶಕಿ ಕಿರಣ್ ರಾವ್ ಲಿಂಗ ಸಮಾನತೆಯ ಬಗ್ಗೆ ಸಂದೇಶವನ್ನು ವಿಡಂಬನಾತ್ಮಕವಾಗಿ ನೀಡಿದ್ದಾರೆ. ಭಾರತದ ಹಲವು ಭಾಗಗಳಲ್ಲಿ ಇನ್ನೂ ಲಿಂಗ ಅಸಮಾನತೆಯಿದೆ. ಅದನ್ನು ಪ್ರೇಕ್ಷಕರಿಗೆ ತಟ್ಟುವಂತೆ ಈ ಸಿನಿಮಾವನ್ನು ಮಾಡಲಾಗಿದೆ. ಈ ಕಾರಣಕ್ಕೆ ದೇಶಾದ್ಯಂತ ಚರ್ಚೆಯಾಗಿತ್ತು. ಪ್ರಮುಖ ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. 

ಅಂದಹಾಗೆ ಈ ಚಿತ್ರದ ಕಥೆ ಇಂತಿದೆ: ದೀಪಕ್ ಮತ್ತು ಫೂಲ್ ಕುಮಾರಿ ನವವಿವಾಹಿತರು. ಮದುವೆ ಮುಗಿಸಿ ವರನ ಕಡೆಯವರು ಊರಿಗೆ ಹೊರಟು ಬಿಡುತ್ತಾರೆ. ನೂತನ ವಧೂವರರು ವಧುವಿನ ಮನೆಯಲ್ಲಿ ಕೆಲವು ಶಾಸ್ತ್ರಗಳಿಗಾಗಿ ಉಳಿದುಕೊಳ್ಳುತ್ತಾರೆ. ನಂತರ ಇಬ್ಬರೇ ವರನ ಊರಿಗೆ ಹೊರಡುತ್ತಾರೆ. ಫೂಲ್ ಕುಮಾರಿ ಇನ್ನೂ ಮುಗ್ಧತೆಯೇ ಕಳೆಯದ ಸುಂದರ ಯುವತಿ. ದೀಪಕ್ ಕೂಡಾ ಅಷ್ಟೇ ಸರಳ ಮನಸ್ಸಿನ ಭಾವುಕ ಯುವಕ. ಹೊರಡುವಾಗ ಬಿಳ್ಕೊಡುಗೆ ಶಾಸ್ತ್ರದ ನಂತರ ವಧುವಿಗೆ ಘೂಂಘಟ್ ಅನ್ನು ಯಾವುದೇ ಕಾರಣಕ್ಕೂ ತೆರೆಯಬಾರದು ಹಾಗೂ ಗಂಡನ ಹೆಸರನ್ನು ಹೇಳಬಾರದು ಎಂದು ಹಿರಿಯರು ಅಣತಿ ಮಾಡುತ್ತಾರೆ. ಈ ಸಂಪ್ರದಾಯ ಎಂತಹ ಅಪಾಯಕ್ಕೆ ದಾರಿ ಮಾಡಿಕೊಡುತ್ತದೆ ಎಂಬುದು ಚಿತ್ರ ನೋಡಿದರೆ ಪ್ರೇಕ್ಷಕನಿಗೆ ಅರಿವಾಗುತ್ತದೆ.
 

ಆ ಬೆಂಗಳೂರಿನ ರಾಜಕಾರಣಿ ಜೊತೆ ಸಂಬಂಧವಿತ್ತು- ಅನುಭವ ತೆರೆದಿಟ್ಟ ಟ್ರಾನ್ಸ್​ಜೆಂಡರ್​ ಚರಿತಾ

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?